- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಅಮೃತ ಗ್ರಾಮ ಪಂಚಾಯತಿ ಯೋಜನೆಗೆ ಜಿಲ್ಲೆಯ 25 ಗ್ರಾ.ಪಂ. ಆಯ್ಕೆ

ಅಮೃತ ಗ್ರಾಮ ಪಂಚಾಯತಿ ಯೋಜನೆಗೆ ಜಿಲ್ಲೆಯ 25 ಗ್ರಾ.ಪಂ. ಆಯ್ಕೆ

ವಿಜಯಪುರ: ಭಾರತ ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆ ಅಂಗವಾಗಿ ಕರ್ನಾಟಕ ಸರ್ಕಾರ ಜಾರಿಗೊಳಿಸುತ್ತಿರುವ ಮಹತ್ವಕಾಂಕ್ಷೆಯ “ಅಮೃತ ಗ್ರಾಮ ಪಂಚಾಯತಿ” ಯೋಜನೆಗೆ ವಿಜಯಪುರ ಜಿಲ್ಲೆಯ 13 ತಾಲೂಕುಗಳಲ್ಲಿ 25ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಮುಜರಾಯಿ, ಹಜ್, ವಕ್ಫ್ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ.

ಈ ಯೋಜನೆ ಅಡಿಯಲ್ಲಿ ಆಯ್ಕೆಯಾದ ಗ್ರಾಮ ಪಂಚಾಯತಿಗಳಲ್ಲಿ ಬೀದಿ ದೀಪ ಅಳವಡಿಕೆ, ಪ್ರತಿ ಮನೆಗೆ ಕುಡಿಯುವ ನೀರಿನ ನಲ್ಲಿ ಸಂಪರ್ಕ ಕಲ್ಪಿಸುವುದು. ಶೇ 100 ಘನತ್ಯಾಜ್ಯ ನಿರ್ವಹಣೆ ವಿಲೇವಾರಿ ಮಾಡುವುದು. ತ್ಯಾಜ್ಯ ನೀರು ವೈಜ್ಞಾನಿಕವಾಗಿ ವಿಸರ್ಜಿಸುವುದು. ಗ್ರಾಮ ಪಂಚಾಯತಿ ಕಟ್ಟಡಗಳಿಗೆ ಸೌರ ವಿದ್ಯುತ್ ಅಳವಡಿಸುವುದು. ಅಮೃತ ಉದ್ಯಾನಗಳ ನಿರ್ಮಾಣ ಹಾಗೂ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳನ್ನು ಡಿಜಿಟಲೀಕರಣ ಮಾಡಲಾಗುವುದು.

ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳಿಗೆ ಕುಡಿಯುವ ನೀರು, ಶೌಚಾಲಯ ನಿರ್ಮಾಣ ಮಾಡುವುದು, ಶಾಲೆಯ ಆವರಣದಲ್ಲಿ ಆಟದ ಮೈದಾನ ಹಾಗೂ ಆವರಣ ಗೋಡೆ ನಿರ್ಮಾಣ ಹಾಗೂ ಕೆರೆ ಕಲ್ಯಾಣಿಗಳ ಪುನಶ್ಚೇತನ ಮಾಡಲಾಗುವುದು.

ಜಿಲ್ಲೆಯಲ್ಲಿ ಆಯ್ಕೆಯಾಗಿರುವ 25 ಗ್ರಾಮ ಪಂಚಾಯಿತಿಗಳ ಸರ್ವಾಂಗೀಣ ಅಭಿವೃದ್ಧಿ ಮಾಡಲಾಗುವುದು.ಇದಕ್ಕಾಗಿ ಪ್ರತೀ ಪಂಚಾಯ್ತಿಗೆ ಸರಾಸರಿ 3 ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ. ಮಾರ್ಚ್ 31ರ ಒಳಗೆ ಯೋಜನೆ ಪೂರ್ಣಗೊಳಿಸಿದ ಪಂಚಾಯ್ತಿಗಳಿಗೆ ರೂ 25.00ಲಕ್ಷ ರೂ ಪ್ರೋತ್ಸಾಹ ಧನ ನೀಡಲಾಗುವುದು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!