- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಎಸ್.ಎಸ್.ಎಲ್.ಸಿ ಪಲಿತಾಂಶ ಬಿಡುಗಡೆ. ಇಲ್ಲಿದೆ ವಿವರ

ಎಸ್.ಎಸ್.ಎಲ್.ಸಿ ಪಲಿತಾಂಶ ಬಿಡುಗಡೆ. ಇಲ್ಲಿದೆ ವಿವರ

ಬೆಂಗಳೂರು : ಜುಲೈ 19 ಮತ್ತು 22ರಂದು ನಡೆದಿದ್ದ ಎಸ್ ಎಸ್ಎಲ್ ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಓರ್ವ ವಿದ್ಯಾರ್ಥಿ ಹೊರತುಪಡಿಸಿ  ಉಳಿದೆಲ್ಲರೂ ತೇರ್ಗಡೆಯಾಗಿದ್ದು, ಆತ ತನ್ನ ಬದಲು ಬೇರೆಯವರಿಂದ ಪರೀಕ್ಷೆ ಬರೆಸಿದ್ದ. ಹೀಗಾಗಿ ಆತನನ್ನು ಅನುತ್ತೀರ್ಣ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನೂ ಓದಿ… ದೇವಾಲಯಗಳ ಮೂಲ ಸೌಕರ್ಯಕ್ಕೆ ಆದ್ಯತೆ ಸಚಿವೆ. ಶಶಿಕಲಾ ಜೊಲ್ಲೆ

ಕೋವಿಡ್ ಕಾರಣದಿಂದ ಈ ಬಾರಿ ವಿಶಿಷ್ಟ ರೀತಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗಿತ್ತು. ಮೂರು ವಿಷಯಗಳನ್ನೊಳಗೊಂಡ ಒಂದು ಪತ್ರಿಕೆಯಂತೆ ಒಟ್ಟು ಎರಡು ದಿನ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯಲ್ಲಿ ಎಲ್ಲರನ್ನೂ ಉತ್ತೀರ್ಣಗೊಳಿಸುವುದಾಗಿ ಸರ್ಕಾರ ಘೋಷಣೆ ಮಾಡಿತ್ತು. ಅಂಕ ಆಧಾರಿತ ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದರು.

ಒಟ್ಟು 157 ವಿದ್ಯಾರ್ಥಿಗಳು 626 ಕ್ಕೆ 625 ಅಂಕವನ್ನು ಪಡೆದಿದ್ದಾರೆ. 625ಕ್ಕೆ 623 ಅಂಕವನ್ನು 289 ವಿದ್ಯಾರ್ಥಿಗಳು ಪಡೆದಿದ್ದಾರೆ. ಶೇ.9 ರಷ್ಟು ಮಕ್ಕಳನ್ನು ಗ್ರೇಸ್ ಮಾರ್ಕ್ ನೀಡಿ ಪಾಸ್ ಮಾಡಲಾಗಿದೆ. 13 ವಿದ್ಯಾರ್ಥಿಗಳಿಗೆ ಗರಿಷ್ಠ 28 ಗ್ರೇಸ್ ಮಾರ್ಕ್ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!