- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಕರ್ತವ್ಯ ಲೋಪ. ಮೂವರು ಅಧಿಕಾರಿಗಳ ಅಮಾನತ್ತು

ಕರ್ತವ್ಯ ಲೋಪ. ಮೂವರು ಅಧಿಕಾರಿಗಳ ಅಮಾನತ್ತು

ವಿಜಯಪುರ: ಜಿಲ್ಲೆಯ ಸಿಂದಗಿ ವಿಧಾನಸಭೆ ಉಪಚುನಾವಣೆಗೆ ಸಂಬಂದಪಟ್ಟಂತೆ ಚುನಾವಣಾ ಕಾರ್ಯಕ್ಕೆ ನೇಮಿಸಿದ ಮೂವರು ಅಧಿಕಾರಿಗಳು ಕರ್ತವ್ಯಲೋಪವೆಸಗಿದ ಹಿನ್ನೆಲೆಯಲ್ಲಿ ಅವರನ್ನು ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ಶ್ರೀಮತಿ. ವಿ.ವಿ.ನಿಂಬರ್ಗಿ ಸ.ಶಿ. ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ನಂ-04 ವಿದ್ಯಾನಗರ. ಸಿಂದಗಿ, ಶ್ರೀಮತಿ ಎಸ್. ಆರ್. ಸಿಂದಗಿ ಸ.ಶಿ. ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ನಂ-04 ವಿದ್ಯಾನಗರ, ಸಿಂದಗಿ ಹಾಗೂ ಶ್ರೀ ಆರ್.ಎ.ಕಠಾರೆ. ಸ.ಶಿ. ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ. ನಂ-04 ವಿದ್ಯಾನಗರ, ಸಿಂದಗಿ ಇವರುಗಳನ್ನು ಅಮಾನತುಗೊಳಿಸಲಾಗಿದೆ. ಇವರುಗಳ ವಿರುದ್ಧ ಇಲಾಖಾ ವಿಚಾರಣೆ ಬಾಕಿ ಇರಿಸಿ. ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.

ಆಪಾದಿತ ನೌಕರರು ಈ ಅವಧಿಯಲ್ಲಿ ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಹಾಗೂ ಇವರು ಕರ್ನಾಟಕ ನಾಗರೀಕ ಸೇವಾ ನಿಯಮ 98 ರನ್ವಯ ಜೀವನಾಂಶ ಭತ್ತೆ ಪಡೆಯಲು ಅರ್ಹತೆ ಹೊಂದಿರುತ್ತಾರೆ.

ಈ ಆದೇಶವು ತಕ್ಷಣದಿಂದ ಜಾರಿಯಲ್ಲಿ ಬಂದಿದೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಿಂದಗಿ ಇವರು ಈ ನೌಕರರನ್ನು ಕರ್ತವ್ಯದಿಂದ ಇಂದೇ ಬಿಡುಗಡೆ ಮಾಡಿ ವರದಿ ಸಲ್ಲಿಸಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!