- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಷ್ಟ್ರೀಯಕೋವಿಡ್ ಪ್ರಕರಣ : 61 ದಿನಗಳಲ್ಲೇ ಅತೀ ಕಡಿಮೆ

ಕೋವಿಡ್ ಪ್ರಕರಣ : 61 ದಿನಗಳಲ್ಲೇ ಅತೀ ಕಡಿಮೆ

ನವದೆಹಲಿ : ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,00,636 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿವೆ. ಕಳೆದ ಎರಡು ತಿಂಗಳಲ್ಲಿ ಇದು ಅತ್ಯಂತ ಕಡಿಮೆ ಸಂಖ್ಯೆಯಾಗಿದ್ದು, ಸತತ 11 ದಿನಗಳಿಂದ 2 ಲಕ್ಷಕ್ಕೂ ಕಡಿಮೆ ದೈನಂದಿನ ಹೊಸ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕೇಂದ್ರ, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಹಭಾಗಿತ್ವ ಮತ್ತು ನಿರಂತರ ಪ್ರಯತ್ನಗಳ ಫಲ ಇದಾಗಿದ್ದು, ಭಾರತದಲ್ಲಿ ನಿರಂತರವಾಗಿ ಸಕ್ರಿಯ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದೆ. ಸತತ ಎರಡನೇ ದಿನ ಕೂಡ ಸಕ್ರಿಯ ಪ್ರಕರಣಗಳು 15 ಲಕ್ಷಕ್ಕಿಂತ ಕಡಿಮೆಯಾಗಿದ್ದು, ಇಂದು 14,01,609 ಪ್ರಕರಣಗಳು ದಾಖಲಾಗಿವೆ. ನಿರಂತರ ಏಳು ದಿನಗಳಿಂದ 20 ಲಕ್ಷಕ್ಕೂ ಕಡಿಮೆ ಪ್ರಕರಣಗಳು ದಾಖಲಾಗುತ್ತಿವೆ.

ಶಿಕ್ಷಣ ಎಂದರೇನು…? ಅದರ ಅಂತಿಮ ಗುರಿ ಹೇಗಿರಬೇಕು…?

24 ಗಂಟೆಗಳಲ್ಲಿ ಒಟ್ಟು 76,190 ಪ್ರಕರಣಗಳು ಕಡಿಮೆಯಾಗಿದ್ದು, ಒಟ್ಟಾರೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಕೇವಲ ಶೇ 4.85 ರಷ್ಟಿದೆ. ಹೆಚ್ಚು ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದು 25 ದಿನಗಳಿಂದ ನಿರಂತರವಾಗಿ ಚೇತರಿಕೆಯಲ್ಲಿ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,74,399 ಮಂದಿ ಗುಣಮುಖರಾಗಿದ್ದಾರೆ. ದೈನಂದಿನ ಪ್ರಕರಣಗಳಿಗೆ ಹೋಲಿಸಿದರೆ 24 ಗಂಟೆಗಳಲ್ಲಿ 73,763 ಮಂದಿ ಗುಣಮುಖರಾಗಿದ್ದಾರೆ.

ಸಾಂಕ್ರಾಮಿಕ ಕಂಡು ಬಂದ ನಂತರದಿಂದ ಈ ತನಕ 2,71,59,180 ಮಂದಿ ಈಗಾಗಲೇ ಚೇತರಿಸಿಕೊಂಡಿದ್ದಾರೆ. ಚೇತರಿಕೆ ಪ್ರಮಾಣ ಹೆಚ್ಚುತ್ತಿರುವುದನ್ನು ಇದು ಸೂಚಿಸುತ್ತಿದ್ದು, ಒಟ್ಟಾರೆ ಗುಣಮುಖರಾಗಿರುವ ಪ್ರಮಾಣ ಶೇ 93.94 ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ 15,87,589 ಸೋಂಕು ಪತ್ತೆ ಪರೀಕ್ಷೆ ನಡೆಸಲಾಗಿದ್ದು, ಈವರೆಗೆ 36.6 ಕೋಟಿ (36,63,34,111) ಗೂ ಹೆಚ್ಚು ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ.

ಒಂದು ಕಡೆ ಸೋಂಕು ಪತ್ತೆ ಪರೀಕ್ಷೆಗಳನ್ನು ಹೆಚ್ಚಿಸಲಾಗಿದ್ದು, ಇನ್ನೊಂದೆಡೆ ನಿರಂತರವಾಗಿ ಪಾಸಿಟಿವಿಟಿ ದರದಲ್ಲಿ ಇಳಿಕೆಯಾಗುತ್ತಿದೆ. ದೈನಂದಿನ ಪಾಸಿಟಿವಿಟಿ ದರ ಇಂದು ಶೇ 6.34 ರಷ್ಟಿದ್ದು, ನಿರಂತರ 14 ದಿನಗಳಿಂದ ಶೇ 10 ಕ್ಕಿಂತ ಕಡಿಮೆ ಇರುವುದಾಗಿ ತಿಳಿದು ಬಂದಿದೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!