- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಕೋವಿಡ್ ಲಸಿಕೆ ಪಡೆದ ಶಾಸಕ ಯತ್ನಾಳ

ಕೋವಿಡ್ ಲಸಿಕೆ ಪಡೆದ ಶಾಸಕ ಯತ್ನಾಳ

ವಿಜಯಪುರ : ನಗರ ಶಾಸಕರಾದ ಬಸನಗೌಡ ರಾ. ಪಾಟೀಲ ಯತ್ನಾಳ ಅವರು ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿಂದು ಕೋವಿಡ್- 19 ಲಸಿಕೆಯನ್ನು ಪಡೆದುಕೊಂಡರು.

ಭಾರತದಲ್ಲೇ ಅಭಿವೃದ್ಧಿ ಪಡಿಸಿದ ಅತ್ಯಂತ ಸುರಕ್ಷಿತ ಹಾಗೂ ಕೊರೋನಾವನ್ನು ಮಣಿಸಲು ಅಗತ್ಯವಿರುವ ಈ ಲಸಿಕೆಯನ್ನು ಎಲ್ಲ ಹಿರಿಯ ನಾಗರಿಕರು ಹಾಗೂ ಅರ್ಹ ವ್ಯಕ್ತಿಗಳು ಪಡೆದುಕೊಳ್ಳಲು ಸಲಹೆ ನೀಡಿದರು. ಕೋವಿಡ್-19 ಲಸಿಕೆ ಕುರಿತು ಜಾಗೃತಿ ಮೂಡಿಸಿ, ಸ್ವಯಂಪ್ರೇರಿತವಾಗಿ ಲಸಿಕೆ ಪಡೆದು ಭಾರತವನ್ನು ಕೊರೊನಾ ಮುಕ್ತವಾಗಿಸಲು ಸಹಕರಿಸಿ ಎಂದು ನಾಗರಿಕರಲ್ಲಿ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ವೈದ್ಯಾಧಿಕಾರಿಗಳಾದ ಡಾ||ರಾಜಕುಮಾರ ಯರಗಲ್, ಡಾ|| ಶರಣಪ್ಪ ಕಟ್ಟಿ, ಡಾ|| ಎಸ್.ಎಲ್.ಲಕ್ಕಣ್ಣವರ್, ಡಾ|| ಕವಿತಾ ದೊಡ್ಡಮನಿ ಸೇರಿದಂತೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಶ್ರೀಹರಿ ಗೊಳಸಂಗಿ ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!