- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಕೋವಿಡ್ ವಾರಿಯರ್ಸ್ ಗೆ ಆಹಾರ ಕಿಟ್ ಹಾಗೂ ಸೀರೆ ವಿತರಣೆ

ಕೋವಿಡ್ ವಾರಿಯರ್ಸ್ ಗೆ ಆಹಾರ ಕಿಟ್ ಹಾಗೂ ಸೀರೆ ವಿತರಣೆ

ತಿಕೋಟಾ : ತಾಲೂಕಿನ ಕನಮಡಿ ಗ್ರಾಮ ಪಂಚಾಯತಿಯಲ್ಲಿ ಕೋವಿಡ್ ವಿರುದ್ಧ ಸೇವೆ ಸಲ್ಲಿಸುತ್ತಿರುವ 20 ಜನ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸೀರೆ ಮತ್ತು ಆಹಾರದ ಕಿಟ್ ವಿತರಿಸಲಾಯಿತು.  

ಈ ಸಂದರ್ಭದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿ ರೇಣುಕಾ ಸೋಲಾಪುರ ಮಾತನಾಡಿ, ಕೊರೋನಾ ತಡೆಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಮನೆಗಳನ್ನು ತೊರೆದು, ಇಂತಹ ಸಂಧಿಗ್ದ ಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವದು ನಿಜಕ್ಕೂ ಶ್ಲಾಘನೀಯ ಎಂದರು.

ವಿಜಯಪುರದ ವೀರ ದೇಶಮುಖ…

ನಂತರ ಮಾತನಾಡಿದ ಗ್ರಾಮ ಪಂಚಾಯತ ಅಧ್ಯಕ್ಷೆ ಕಾಂತಾಬಾಯಿ ಶೇಳ್ಳಿನ, ನಮ್ಮೂರಿನಲ್ಲಿ ಕರೋನಾ ತಡೆಗೆ ಪ್ರತಿಯೊಬ್ಬ ಸಿಬ್ಬಂದಿಯೂ ಶ್ರಮೀಸಿದ್ದೀರಿ. ಮುಂದೆಯೂ ಕೂಡಾ ಗ್ರಾಮಾಭಿವೃದ್ಧಿಗೆ ಸಹಕರಿಸಿ ಎಂದು ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಉಪಾಧ್ಯಕ್ಷ  ಭಾಸ್ಕರ ಹೊಸಮನಿ, ಸದಸ್ಯರುಗಳು, ಸಿಬ್ಬಂದಿ ವರ್ಗ ಹಾಗೂ ಆಶಾ ಮತ್ತು ಅಂನವಾಡಿ ಕಾರ್ಯಕರ್ತೆಯರು ಹಾಜರಿದ್ದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!