- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಕೋವಿಡ್ ಸಂಕಷ್ಟದಲ್ಲಿ ಸಾಮಾಜಿಕ ಕಳಕಳಿ ಮೆರೆದ ರಾಷ್ಟ್ರೀಯ ಬಸವಸೈನ್ಯ

ಕೋವಿಡ್ ಸಂಕಷ್ಟದಲ್ಲಿ ಸಾಮಾಜಿಕ ಕಳಕಳಿ ಮೆರೆದ ರಾಷ್ಟ್ರೀಯ ಬಸವಸೈನ್ಯ

ಬಸವನಬಾಗೇವಾಡಿ : ನಿರಂತರವಾಗಿ ಸಾಮಾಜಿಕ ಕಳಕಳಿ ಕಾರ್ಯ ಮಾಡುವ ಮೂಲಕ ಜನಮಾನಸದಲ್ಲಿ ಉಳಿದಿರುವ ರಾಷ್ಟ್ರೀಯ ಬಸವ ಸೈನ್ಯವು ಇಂದು ಕೋವಿಡ್ ಸಂಕಷ್ಟದಲ್ಲಿ, ವಿಶ್ವಗುರು ಬಸವಣ್ಣನವರ ಜಯಂತಿಯ ಪ್ರಯುಕ್ತ ಪಟ್ಟಣದ ತಾಲ್ಲೂಕು ಆಸ್ಪತ್ರೆಯ ರೋಗಿಗಳಿಗೆ ಹಾಗೂ ಕೋವಿಡ್ ವಾರಿಯರ್ಸ್ ನ ಮುಂಚೂಣಿಯಲ್ಲಿರುವ ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ಶುಕ್ರವಾರ ಮಧ್ಯಾಹ್ನದ ಊಟ ನೀಡುವ ಮೂಲಕ ಮಾದರಿಯಾದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಬಿರಾದಾರ ಮಾತನಾಡಿ, ನಾಡಿನಾದ್ಯಂತ ಕೋವಿಡ್ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂತಹ ಸಂಕಷ್ಟದಲ್ಲಿ ನಮ್ಮ ಕಾರ್ಯಕರ್ತರೊಂದಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ, ಕೈಲಾದಷ್ಟು ನಮ್ಮ ಅಳಿಲು ಸೇವೆ ಸಲ್ಲಿಸಿದ್ದೇವೆ ಎಂದು ಹೇಳಿದರು.

ರಾಷ್ಟ್ರೀಯ  ಬಸವ ಸೈನ್ಯದ ತಾಲ್ಲೂಕು ಘಟಕದ ಅಧ್ಯಕ್ಷರಾದ ಸಂಜು ಬಿರಾದಾರ್, ಪಟ್ಟಣದ ಮುಖಂಡರಾದ ಶ್ರೀಕಾಂತ ಕೊಟ್ರಶೆಟ್ಟಿ, ಅರವಿಂದ ಗೊಳಸಂಗಿ, ಮುತ್ತುರಾಜ್ ಡಂಬಳ, ಕಿರಣ್ ಜನಗೊಂಡ, ಮಲ್ಲು ಅಸ್ಕಿ, ಅರುಣ ಗೊಳಸಂಗಿ, ಮಹಾಂತೇಶ ಹಾರಿವಾಳ, ಅಮೃತ್ ಬಾಗೇವಾಡಿ, ಮಂಜು ಜಾಲಗೇರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!