- Advertisement -Newspaper WordPress Theme
ಪ್ರಮುಖ ಸುದ್ದಿಗಳುಪ್ರಾದೇಶಿಕಜಿಲ್ಲಾ ಆಸ್ಪತ್ರೆಯ ಮೇಲಿನ ಒತ್ತಡ ಕಡಿಮೆ ಮಾಡಲು ಸಹಕರಿಸಿ. ಡಿಸಿಎಂ ಕಾರಜೋಳ

ಜಿಲ್ಲಾ ಆಸ್ಪತ್ರೆಯ ಮೇಲಿನ ಒತ್ತಡ ಕಡಿಮೆ ಮಾಡಲು ಸಹಕರಿಸಿ. ಡಿಸಿಎಂ ಕಾರಜೋಳ

ವಿಜಯಪುರ : ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಪಾಸಿಟಿವ್ ಬರುವಂತಹವರನ್ನು ತಕ್ಷಣ ನಿಗದಿತ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆಗೆ ಒಳಪಡಿಸಬೇಕು. ಜಿಲ್ಲಾ ಆಸ್ಪತ್ರೆ ಮೇಲಿನ ಒತ್ತಡ ಕಡಿತಗೊಳಿಸಲು ಆಯಾ ತಾಲೂಕು ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ಮತ್ತು ಇತರೆ  ಸೌಲಭ್ಯವಿರುವಂತೆ ನೋಡಿಕೊಳ್ಳಲು ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ನೂತನ ಪ್ರವಾಸಿ ಮಂದಿರದಲ್ಲಿಂದು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಕೊರೋನಾ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಭೆ ನಡೆಸಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣಪುಟ್ಟ ಮನೆಗಳಲ್ಲಿ ಗ್ರಾಮಸ್ಥರು ವಾಸಿಸುತ್ತಿರುವುದರಿಂದ ಕುಟುಂಬದ ಸದಸ್ಯರಲ್ಲಿ ಕೋವಿಡ್ ವೇಗವಾಗಿ ಹರಡಲು ಕಾರಣವಾಗುತ್ತಿದೆ. ಕಾರಣ ಕೋವಿಡ್ ಲಕ್ಷಣಗಳು ಕಂಡುಬಂದ ತಕ್ಷಣ ನಿಗದಿತ ಔಷಧಿ ನೀಡುವ ಜೊತೆಗೆ  ಸ್ವೀಕರಿಸಲು ಮನವರಿಕೆ ಮಾಡಬೇಕು. ಪಾಸಿಟಿವ್ ಪ್ರಕರಣ ಕಂಡು ಬಂದ ತಕ್ಷಣ ಅವರನ್ನು ಕೋವಿಡ್ ಕೇರ್ ಸೆಂಟರ ,ನಿಗದಿತ  ಆಸ್ಪತ್ರೆ,ಕ್ವಾರಂಟೇನ್ ಕೇಂದ್ರಕ್ಕೆ ಸೇರಿಸುವಂತೆ ಹೇಳಿದರು.

 ಭಾರತ ಸರ್ಕಾರವು ಬೆಳಗಾವಿ, ಹುಬ್ಬಳ್ಳಿ ಮತ್ತು ಇತರೆ ಜಿಲ್ಲೆಗಾಗಿ ಆಕ್ಸಿಜನ್ ಪೂರೈಕೆ 6  ಟ್ಯಾಂಕರ್  ಗಳನ್ನು ನೀಡಿದ್ದು,ವಿಜಯಪುರ ಜಿಲ್ಲೆಯ ನೆರವಿಗಾಗಿ ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಆಕ್ಸಿಜನ್ ಟ್ಯಾಂಕರ್ ನ ನೆರವು ಪಡೆಯುವಂತೆ ಅವರು ಸೂಚನೆ ನೀಡಿದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!