- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯತಾರತಮ್ಯ ಇಲ್ಲದೇ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಶಾಸಕ ಸೋಮನಗೌಡ ಪಾಟೀಲ ಹೇಳಿಕೆ

ತಾರತಮ್ಯ ಇಲ್ಲದೇ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಶಾಸಕ ಸೋಮನಗೌಡ ಪಾಟೀಲ ಹೇಳಿಕೆ

ದೇವರಹಿಪ್ಪರಗಿ : ಮತಕ್ಷೇತ್ರದ ಅಭಿವೃದ್ಧಿಗೆ ನೂರಾರು ಕೋಟಿ ರೂ. ಅನುದಾನ ತಂದಿದ್ದು, ನೂತನ ತಾಲೂಕು ಕೇಂದ್ರ ಮಾದರಿ ಕ್ಷೇತ್ರವಾಗಲು ಶ್ರಮಿಸುತ್ತೇನೆ ಎಂದು ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಹೇಳಿದರು.

ಪಟ್ಟಣದ ಕೆಇಬಿ ಹತ್ತಿರ 3 ಕೋಟಿರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಪಪಂ ಕಚೇರಿ ನೂತನ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮದೆ ಸರಕಾರ ಆಡಳಿತದಲ್ಲಿ ಇರುವುದರಿಂದ ಸಾಕಷ್ಟು ಅನುದಾನ ತರಲು ಅನುಕೂಲವಾಗಿದೆ. ಪಟ್ಟಣದ ಸಿಸಿ ರಸ್ತೆಗಳು, ಕುಡಿಯುವ ನೀರಿನ ವ್ಯವಸ್ಥೆಗೆ ಹತ್ತಾರು ಕೋಟಿ ರೂ. ಕಾಮಗಾರಿ ಮಾಡಲಾಗಿದೆ. ಇನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ದರ್ಜೆ ಸಲುವಾಗಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲಿಯೇ ಆಗಲಿದೆ. ಒಂದು ಅಂಬ್ಯೂಲನ್ಸ್ ನೀಡಲಾಗಿದೆ. ಇದರ ಜೊತೆಯಲ್ಲಿಯೇ ಈಗಾಗಲೇ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿಗಾಗಿ ಒಂದು ಕೋಟಿ ರೂ. ಮಂಜೂರಾಗಿದ್ದು, ಸದ್ಬಳಕೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಇಡೀ ಮತಕ್ಷೇತ್ರದಲ್ಲಿ ಯಾವುದೇ ತಾರತಮ್ಯ ಮಾಡದೆ ಅನುದಾನ ಒದಗಿಸಿ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಮಾತಿಗಿತ ಕೃತಿ ಲೇಸು ಎಂಬ ತತ್ವದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಪ್ರತಿಯೊಂದು ಗ್ರಾಮಗಳಲ್ಲಿ ನಾನು ಮಾಡಿದ ಕೆಲಸಗಳೇ ಸಾಕ್ಷಿಯಾಗಿವೆ ಎಂದರು.

ಪಟ್ಟಣ ಪಂಚಾಯತಿ ಕಚೇರಿಗಾಗಿ ಮೂರು ಕೋಟಿ ರೂ. ಮಂಜೂರಾಗಿದ್ದು, ಜಿಲ್ಲೆಯಲ್ಲಿಯೇ ಮಾದರಿ ಕಚೇರಿ ನಿರ್ಮಾಣವಾಗಬೇಕು. ಗುತ್ತಿಗೆದಾರರು ಕಳಪೆ ಮಟ್ಟದ ಕಾಮಗಾರಿ ಮಾಡದೆ ಹೆಚ್ಚು ವರ್ಷಗಳ ಕಾಲ ಬಾಳಿಕೆ ಬರುವ ಕಟ್ಟಡ ನಿರ್ಮಾಣ ಮಾಡಬೇಕು. ಇಲ್ಲಿನ ಪಪಂ ಮುಖ್ಯಾಧಿಕಾರಿಗಳು ಕಚೇರಿ ನಿರ್ಮಾಣದ ಸಮಯದಲ್ಲಿ ನಿಗಾ ವಹಿಸಬೇಕೆಂದು ತಿಳಿಸಿದರು.

ನಿಂಬೆನಾಡಿನಲ್ಲಿ ತಲೆ ಎತ್ತಲಿರುವ ಶಾಸಕ ಯಶವಂತರಾಯಗೌಡರ ಕನಸಿನ ಮೆಗಾ ಮಾರ್ಕೆಟ್

ಕಾರ್ಯಕ್ರಮದಲ್ಲಿ ಇನ್ನೋರ್ವ ಅತಿಥಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರಮೇಶ ಮಸಬಿನಾಳ ಹಾಗೂ ಡಾ. ಆರ್ ಆರ್ ನಾಯಿಕ ಮಾತನಾಡಿ, ಸೋಮನಗೌಡ ಪಾಟೀಲ ಸಾಸನೂರ ಅವರು ಶಾಸಕರಾದ ಮೇಲೆ ಅಭಿವೃದ್ಧಿ ಪರ್ವ ಪ್ರಾರಂಭವಾಗಿದೆ. ನೂತನ ತಾಲೂಕು ಕೇಂದ್ರ ದೇವರಹಿಪ್ಪರಗಿ ಪಟ್ಟಣಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಪ್ರಗತಿಗೆ ನಾಂದಿ ಹಾಡಿದ್ದಾರೆ. ಸಾಕಷ್ಟು ಅನುದಾನ ನೀಡಿ ರಸ್ತೆಗಳ ಅಭಿವೃದ್ಧಿ ಜೊತೆಗೆ ಪಶು ಆಸ್ಪತ್ರೆ, ಹೆಸ್ಕಾಂ ಕಚೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ಹಲವಾರು ಕೆಲಸಗಳನ್ನು ಮಾಡಿದ್ದು ಪಟ್ಟಣದ ಜನತೆ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ ಸಿ ಎ ಗುಡದಿನ್ನಿ, ಪಪಂ ಮಾಜಿ ಸದಸ್ಯರಾದ ಡಾ. ಗುರುರಾಜ ಗಡೇದ ಮಾತನಾಡಿದರು. ಪಿಎಸೈ ರವಿ ಯಡಣ್ಣವರ, ಮುಖ್ಯಾಧಿಕಾರಿ ಎಲ್ ಡಿ ಮುಲ್ಲಾ, ವೈದ್ಯಾಧಿಕಾರಿ ಡಾ. ಯೋಗೇಶ, ಬಿಜೆಪಿ ಮಂಡಲ ಅಧ್ಯಕ್ಷ ಭೀಮನಗೌಡ ಸಿದರೆಡ್ಡಿ, ರಿಯಾಜ ನಾಯ್ಕೋಡಿ, ಯಾಕೂಬ ನದಾಫ, ಬಸಯ್ಯ ಮಠ ಸೇರಿದಂತೆ ಕಾರ್ಯಕರ್ತರು, ಪಪಂ ಸಿಬ್ಬಂಧಿ, ಸಾರ್ವಜನಿಕರು ಪಾಲ್ಗೊಂಡಿದ್ದರು.

ವರದಿ : ಪ್ರದೀಪ ಕುಲಕರ್ಣಿ


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!