- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಷ್ಟ್ರೀಯನೂತನ ಚುನಾವಣಾ ಆಯುಕ್ತರಾಗಿ ಅನೂಪ್ ಚಂದ್ರ ಪಾಂಡೆ ನೇಮಕ

ನೂತನ ಚುನಾವಣಾ ಆಯುಕ್ತರಾಗಿ ಅನೂಪ್ ಚಂದ್ರ ಪಾಂಡೆ ನೇಮಕ

ನವದೆಹಲಿ : ಭಾರತದ ನೂತನ ಚುನಾವಣಾ ಆಯುಕ್ತರಾಗಿ (ಇಸಿ) ಅನೂಪ್ ಚಂದ್ರ ಪಾಂಡೆ ಇಂದು ಅಧಿಕಾರ ವಹಿಸಿಕೊಂಡರು. ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ನೇತೃತ್ವದ ಭಾರತ ಚುನಾವಣಾ ಆಯೋಗಕ್ಕೆ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಜೊತೆಗೆ ಪಾಂಡೆ ಎರಡನೇ ಚುನಾವಣಾ ಆಯುಕ್ತರಾಗಿ ಸೇರಿದ್ದಾರೆ ಎಂದು ಭಾರತ ಚುನಾವಣಾ ಆಯೋಗ ಇಲಾಖೆ ತಿಳಿಸಿದೆ.

ಫೆಬ್ರವರಿ 15, 1959 ರಂದು ಜನಿಸಿದ ಅನೂಪ್ ಚಂದ್ರ ಪಾಂಡೆ 1984 ನೇ ತಂಡದ ಭಾರತೀಯ ಆಡಳಿತ ಸೇವಾ ಅಧಿಕಾರಿಯಾಗಿದ್ದಾರೆ. ಸುಮಾರು 37 ವರ್ಷಗಳ ಭಾರತ ಸರ್ಕಾರದ ಸೇವೆಯ ಅವಧಿಯಲ್ಲಿ, ಪಾಂಡೆ ಅವರು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಮತ್ತು ಅವರ ಕೇಡರ್ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಕಾರ್ಯ ನಿರ್ವಹಿಸಿದ್ದಾರೆ.

ಅನೂಪ್ ಚಂದ್ರ ಪಾಂಡೆ, ಪಂಜಾಬ್ ಎಂಜಿನಿಯರಿಂಗ್ ಕಾಲೇಜಿನಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ ಮತ್ತು ಪಂಜಾಬ್ ವಿಶ್ವವಿದ್ಯಾಲಯದಿಂದ ಮೆಟೀರಿಯಲ್ಸ್ ಮ್ಯಾನೇಜ್ಮೆಂಟ್ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇತಿಹಾಸ ಅಧ್ಯಯನದಲ್ಲಿ ತೀವ್ರ ಆಸಕ್ತಿ ಹೊಂದಿರುವ ಅವರು ಮಗಧ್ ವಿಶ್ವವಿದ್ಯಾಲಯದಿಂದ ಪ್ರಾಚೀನ ಭಾರತೀಯ ಇತಿಹಾಸದಲ್ಲಿ ಡಾಕ್ಟರೇಟ್ ಪಡೆದಿದ್ದಾರೆ.

ಪಾಂಡೆ ಅವರು ಆಗಸ್ಟ್ 2019 ರಲ್ಲಿ ಉತ್ತರ ಪ್ರದೇಶ ರ‍್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು. ಭಾರತದ ಚುನಾವಣಾ ಆಯೋಗಕ್ಕೆ ಸೇರುವ ಮೊದಲು, ಪಾಂಡೆ ಉತ್ತರ ಪ್ರದೇಶದ ಸದಸ್ಯ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಮೇಲ್ವಿಚಾರಣಾ ಸಮಿತಿಯಾಗಿ ಸೇವೆ ಸಲ್ಲಿಸುತ್ತಿದರು.

ಮುಖ್ಯ ಕಾರ್ಯದರ್ಶಿಯಾಗಿ ಅವರ ಆಡಳಿತದಲ್ಲಿ, ರಾಜ್ಯವು ಪ್ರಯಾಗರಾಜ್ನಲ್ಲಿ ಕುಂಭಮೇಳವನ್ನು ಮತ್ತು 2019 ರಲ್ಲಿ ವಾರಣಾಸಿಯಲ್ಲಿ ಪ್ರವಾಸಿ ಭಾರತೀಯ ದಿವಸವನ್ನು ಯಶಸ್ವಿಯಾಗಿ ಆಯೋಜಿಸಿತು.

ಇದಕ್ಕೂ ಮೊದಲು ಅನೂಪ್ ಚಂದ್ರ ಅವರು ರಾಜ್ಯದ ಕೈಗಾರಿಕಾ ಅಭಿವೃದ್ಧಿ ಆಯುಕ್ತರಾಗಿ ಸೇವೆ ಸಲ್ಲಿಸಿದರು ಮತ್ತು 2018 ರಲ್ಲಿ ಲಕ್ನೋದಲ್ಲಿ ಬೃಹತ್ ಹೂಡಿಕೆದಾರರ ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದರು. ಸಿಂಗಲ್ ವಿಂಡೋ ನಿವೇಶ್ ಮಿತ್ರ ಪೋರ್ಟಲ್ ಸೇರಿದಂತೆ ಕೈಗಾರಿಕೆಗಳು ಮತ್ತು ವ್ಯಾಪಾರ ಕ್ಷೇತ್ರದಲ್ಲಿ ವಿವಿಧ ನೀತಿ ಸುಧಾರಣೆಗಳನ್ನು ಅವರು ಪರಿಚಯಿಸಿದರು.

ಉತ್ತರ ಪ್ರದೇಶ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ (ಹಣಕಾಸು), ಪಾಂಡೆ ಅವರು ಮಾಡಿದ ಪ್ರಯತ್ನಗಳು ಉತ್ತರ ಪ್ರದೇಶದ ಕೃಷಿ ಸಾಲ ಮನ್ನಾ ಯೋಜನೆಯ ಯಶಸ್ವಿ ವಿನ್ಯಾಸ, ಯೋಜನೆ ಮತ್ತು ಅನುಷ್ಠಾನಕ್ಕೆ ಕಾರಣವಾಯಿತು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!