- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಪೊಲೀಸ್ ವಶದಲ್ಲಿದ್ದ ಆರೋಪಿ ಸಾವು. ಸಿಐಡಿ ತನಿಖೆಗೆ ಗೃಹ ಸಚಿವರ ಆದೇಶ.

ಪೊಲೀಸ್ ವಶದಲ್ಲಿದ್ದ ಆರೋಪಿ ಸಾವು. ಸಿಐಡಿ ತನಿಖೆಗೆ ಗೃಹ ಸಚಿವರ ಆದೇಶ.

ಸಿಂದಗಿ : ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪಕ್ಕೊಳಗಾಗಿರುವ ವ್ಯಕ್ತಿಯೋರ್ವ ಪೊಲೀಸ್ ಠಾಣೆಯಲ್ಲಿನ ಶೌಚಾಲಯದಲ್ಲಿ ನೇಣು ಹಾಕಿಕೊಂಡಿರುವ ಘಟನೆ ವಿಜಯಪುರ ಜಿಲ್ಲಎಯ ಸಿಂದಗಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಅಗಸ್ಟ್ 23 ಹಾಗೂ 24 ರಂದು ಎರಡು ಬಾರಿ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಅಗಸ್ಟ್ 27 ರಂದು ಸಿಂದಗಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರಂತೆ ಆರೋಪಿ ದೇವಿಂದ್ರ ಸಂಗೋಗಿ ಎಂಬಾತನನ್ನು ಸಿಂದಗಿ ಠಾಣೆ ಪೊಲೀಸರು ಕಳೆದ ರಾತ್ರಿ ಬಂಧಿಸಿದ್ದರು.

ಠಾಣೆಯಲ್ಲಿದ್ದ ಆರೋಪಿ ಬೆಳಗಿನ ಜಾವ ಶೌಚಾಲಯಕ್ಕೆ ಹೋಗುವದಾಗಿ ತಿಳಿಸಿ, ಶೌಚಕ್ಕೆ ಹೋದ ವೇಳೆ ಶೌಚಾಲಯದಲ್ಲೇ ನೇಣು ಹಾಕಿಕೊಂಡಿದ್ದಾನೆ. ತಕ್ಷಣ ಪೊಲೀಸ್ ಸಿಬ್ಬಂದಿ ಸಿಂದಗಿ ಠಾಣೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ದೇವಿಂದ್ರ ಸಂಗೋಗಿ ಮೃತಪಟ್ಟಿದ್ದಾನೆ.

ಕರ್ತವ್ಯಲೋಪ ಆರೋಪ. ಐವರು ಪೊಲೀಸ್ ಸಿಬ್ಬಂದಿ ಅಮಾನತು…

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ. ಈ ರೀತಿಯ ಪ್ರಕರಣಗಳನ್ನು ಸಿಐಡಿಗೆ ವಹಿಸಲಾಗುವುದು ಎಂದು ಎಸ್ ಪಿ ಹೆಚ್ ಡಿ ಆನಂದಕುಮಾರ ತಿಳಿಸಿದ್ದಾರೆ.

ಇನ್ನು ಪೊಲೀಸರ ವಶದಲ್ಲಿರುವ ದೇವಿಂದ್ರ ಮೃತಪಟ್ಟ ವಿಚಾರ ತಿಳಿದು ಆತನ ಸಂಭಂಧಿಕರು ಸಿಂದಗಿ ಠಾಣೆಗೆ ಮುತ್ತಿಗೆ ಹಾಕಿ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದರು.

ಯಾವುದೇ ತಪ್ಪು ಮಾಡದಿರುವ ದೇವಿಂದ್ರನ ಮೇಲೆ ಕೇಸ್ ದಾಖಲಿಸಿ ವಿನಾಕಾರಣ ಪೊಲೀಸರು ಬಲಿ ಪಡೆದಿದ್ದಾರೆ ಎಂದು ಮೃತನ ಸಂಭಂಧಿಕರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ತಪ್ಪಿತಸ್ಥ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ತಕ್ಷಣವೇ ಅಮಾನತ್ತು ಮಾಡಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಸ್ಥಳದಲ್ಲಿದ್ದ ಹಿರಿಯ ಅಧಿಕಾರಿಗಳು ಅವರ ಮನವೊಲಿಸಲು ಹರಸಾಹಸ ಪಡಬೇಕಾಯಿತು. ಇದು ಕೂಡ ಲಾಕಪ್ ಡೆತ್ ಥರವೇ ಇರುವುದರಿಂದ ಗಂಭೀರವಾಗಿ ಪರಿಗಣಿಸಿ, ಪಾರದರ್ಶಕವಾಗಿ ತನಿಖೆ ನಡೆಸಲಾಗುವುದು ಎಂದಿದ್ದಾರೆ.

ಈ ಘಟನೆಯ ಕುರಿತಾಗಿ ಪ್ರತಿಕ್ರಿಯಿಸಿದ ಗೃಹ ಸಚಿವರು ಸಿಐಡಿ ತನಿಖೆಗೆ ಆದೇಶಿಸಲಾಗುವುದು ಎಂದು ತಿಳಿಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!