- Advertisement -Newspaper WordPress Theme
ಪ್ರಮುಖ ಸುದ್ದಿಗಳುಪ್ರಾದೇಶಿಕಪೊಳಲಿ ಕ್ಷೇತ್ರಕ್ಕೆ ಬೇಟಿ ನೀಡಿದ ಇಂಧನ ಸಚಿವ ಸುನಿಲ್ ಕುಮಾರ್

ಪೊಳಲಿ ಕ್ಷೇತ್ರಕ್ಕೆ ಬೇಟಿ ನೀಡಿದ ಇಂಧನ ಸಚಿವ ಸುನಿಲ್ ಕುಮಾರ್

ದಕ್ಷಿಣ ಕನ್ನಡ : ರಾಜ್ಯ ನೂತನ ಇಂಧನ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್, ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸುದ್ದಿಯನ್ನೂ ಓದಿ… ದೇವಾಲಯಗಳ ಮೂಲ ಸೌಕರ್ಯಕ್ಕೆ ಆದ್ಯತೆ ಸಚಿವೆ. ಶಶಿಕಲಾ ಜೊಲ್ಲೆ

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಇಂದು ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದೇನೆ. ಎಲ್ಲರ ಒಳಿತಿಗಾಗಿ ಕೆಲಸ ಮಾಡುತ್ತೇನೆ ಎಂದರು.  ಇದೇ ವೇಳೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸಚಿವರನ್ನು ಕ್ಷೇತ್ರದ ಪರವಾಗಿ ಸ್ವಾಗತಿಸಿ ಅಭಿನಂದಿಸಿದರು.

ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ದೇವಳದ ಕಾರ್ಯನಿರ್ವಣಾಧಿಕಾರಿ ಪಿ.ಜಯಮ್ಮ,ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆ ಗುತ್ತು, ಯು.ತಾರನಾಥ ಆಳ್ವ, ಚೇರ ಸೂರ್ಯನಾರಾಯಣ ರಾವ್, ಪಿ.ಮಾದವ ಭಟ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಗಿರಿಪ್ರಕಾಶ್ ತಂತ್ರಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ವೆಂಕಟೇಶ ನಾವುಡ, ಯಶವಂತ ಫೊಳಲಿ, ನಂದರಾಮ ರೈ, ಪುರುಷೋತ್ತಮ ಶೆಟ್ಟಿ, ಪುಷ್ಪರಾಜ್ ಚೌಟ ಮತ್ತಿತರರು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!