- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಷ್ಟ್ರೀಯಪ್ರಧಾನಿ ಮೋದಿಯಿಂದ ನಾಳೆ ಪಿಎಂ-ಕಿಸಾನ್ ನೆರವು ಬಿಡುಗಡೆ

ಪ್ರಧಾನಿ ಮೋದಿಯಿಂದ ನಾಳೆ ಪಿಎಂ-ಕಿಸಾನ್ ನೆರವು ಬಿಡುಗಡೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಮುಂದಿನ ಕಂತಿನ ಆರ್ಥಿಕ ನೆರವನ್ನು ನಾಳೆ ಆಗಸ್ಟ್ 9ರಂದು ಮಧ್ಯಾಹ್ನ 12:30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಲಿದ್ದಾರೆ.

ಇದರಿಂದ 9.75 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 19,500 ಕೋಟಿ ರೂ.ಗೂ ಅಧಿಕ ಹಣ ವರ್ಗಾವಣೆ ಮಾಡಲು ಸಾಧ್ಯವಾಗಲಿದೆ. ಈ ಕಾರ್ಯಕ್ರಮದಲ್ಲಿ ಮೋದಿ ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಜೊತೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಸಚಿವರು ಸಹ ಉಪಸ್ಥಿತರಿರಲಿದ್ದಾರೆ.

ಖಾತೆ ಹಂಚಿಕೆ ಬಗ್ಗೆ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದು ಹೀಗೆ

ಪಿಎಂ-ಕಿಸಾನ್ ಬಗ್ಗೆ

ಪಿಎಂ-ಕಿಸಾನ್ ಯೋಜನೆಯಡಿ, ಅರ್ಹ ಫಲಾನುಭವಿ ರೈತ ಕುಟುಂಬಗಳಿಗೆ ರ‍್ಷಕ್ಕೆ 6000/- ರೂ.ಗಳ ಆರ್ಥಿಕ ನೆರವು ಒದಗಿಸಲಾಗುತ್ತದೆ. ತಲಾ ರೂ.2000/- ನಂತೆ ನಾಲ್ಕು ತಿಂಗಳಿಗೊಮ್ಮೆ ಮೂರು ಸಮಾನ ಮಾಸಿಕ ಕಂತುಗಳಲ್ಲಿ ಇದನ್ನು ಪಾವತಿಸಲಾಗುತ್ತದೆ. ನಿಧಿಯನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರ‍್ಗಾಯಿಸಲಾಗುತ್ತದೆ. ಈ ಯೋಜನೆಯಲ್ಲಿ, 1.38 ಲಕ್ಷ ಕೋಟಿ ರೂ.ಗೂ ಹೆಚ್ಚು ಹಣವನ್ನು ಇಲ್ಲಿಯವರೆಗೆ ರೈತ ಕುಟುಂಬಗಳಿಗೆ ವರ್ಗಾಯಿಸಲಾಗಿದೆ ಎಂದು ತಿಳಿದುಬಂದಿದೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!