- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಪ್ರಯೋಜನೆವಿಲ್ಲದ ಸಿಎಂ ಘೋಷಣೆಯ ಪ್ಯಾಕೇಜ್ : ರ್ಯಾ ಗೇರಿ ಆರೋಪ

ಪ್ರಯೋಜನೆವಿಲ್ಲದ ಸಿಎಂ ಘೋಷಣೆಯ ಪ್ಯಾಕೇಜ್ : ರ್ಯಾ ಗೇರಿ ಆರೋಪ

ಬಸವನಬಾಗೇವಾಡಿ : ಸಿಎಂ ಬಿ.ಎಸ್. ಯಡಿಯೂರಪ್ಪನವರು ಕೊವೀಡ್-19 ರ, 2 ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಘೋಷಿಸಿರುವ 1250 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಬಡ ಕೂಲಿ ಕಾರ್ಮಿಕರ ಬೀದಿ ಬದಿ ವ್ಯಾಪಾರಸ್ಥರಿಗೆ ಹಾಗೂ ರೈತರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ದೇವರಹಿಪ್ಪರಗಿ ಕ್ಷೇತ್ರದ ಜೆಡಿಎಸ್ ಎಸ್.ಸಿ/ಎಸ್.ಟಿ ಘಟಕದ ಕಾರ್ಯಾಧ್ಯಕ್ಷ ಲಕ್ಷ್ಮಣ ರ‍್ಯಾಗೇರಿ ಆರೋಪಿಸಿದ್ದಾರೆ.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಪ್ಯಾಕೇಜ್ ಘೋಷಣೆ ಮಾಡಿರುವ ಸರ್ಕಾರ ರೈತರು ಬೆಳದ ಬೆಳೆ ಮಾರಾಟವಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೀದಿ ಬದಿ ವ್ಯಾಪಾರಿಗಳು ವ್ಯಾಪಾರವಿಲ್ಲದೆ ಪರಿದಾಡುವ ಸ್ಥಿತಿ ಎದುರಾಗಿದೆ ಹಾಗೂ ಕೂಲಿ ಕಾರ್ಮಿಕರ ಸ್ಥಿತಿ ಹೇಳದಂತಾಗಿದೆ. ರಾಜ್ಯದ ಮುಖ್ಯಮಂತ್ರಿಗಳು ಕೊರೋನಾ ಸಂಕಷ್ಟದಲ್ಲಿ ಲಾಕ್-ಡೌನ್ ಮಾಡಿ, ಕೊರೋನಾ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಸಾವಿನ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲಿದೆ. ವಿಶೇಷ ಪ್ಯಾಕೇಜ್‌ನಿಂದ ರೈತರಿಗೆ ಯಾವುದೇ ಪ್ರಯೋಜನವಾಗಿಲ್ಲ ರೈತರ ಸಾಲಮನ್ನಾ ಮಾಡಿ, ಬಡ ಕೂಲಿ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ವರದಿ : ನಾಗೇಶ ನಾಗೂರ


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!