- Advertisement -Newspaper WordPress Theme
ಪ್ರಮುಖ ಸುದ್ದಿಗಳುಪ್ರಾದೇಶಿಕಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಮತ್ತೊಂದು ಸೇವೆ ಆರಂಭಕ್ಕೆ ಸೂಚಿಸಿದ ಎಂ.ಬಿ. ಪಾಟೀಲ

ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಮತ್ತೊಂದು ಸೇವೆ ಆರಂಭಕ್ಕೆ ಸೂಚಿಸಿದ ಎಂ.ಬಿ. ಪಾಟೀಲ

ವಿಜಯಪುರ : ಕೋವಿಡ್ ಸಂದರ್ಭದಲ್ಲಿ ಈಗಾಗಲೇ ಜನಸೇವೆಯತ್ತ ಹೆಜ್ಜೆ ಹಾಕಿರುವ ಬಿ.ಎಲ್.ಡಿ.ಇ ಸಂಸ್ಥೆಯೂ ಈಗ ಮತ್ತೊಂದು ಸೇವೆ ನೀಡಲು ಸಜ್ಜಾಗಿರುವುದರಿಂದ ವಿಜಯಪುರ ಜಿಲ್ಲೆಯ ಜನತೆಗೆ ತುಂಬಾ ಅನುಕೂಲಕರ ಸಂಗತಿಯಾಗಿದೆ.
ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಇಂದು ನಡೆದ ಸಭೆಯಲ್ಲಿ ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳು ಹೆಚ್ಚು ಬಾಧೀತರಾಗುವ ಕುರಿತು ವರದಿಗಳು ಬರುತ್ತಿದ್ದು, ಇದನ್ನು ಗಮನದಲ್ಲಿರಿಸಿ, ನಾವು ಈಗಿನಿಂದಲೇ ಮಕ್ಕಳ ಚಿಕಿತ್ಸೆಗೆ ಹೆಚ್ಚು ನಿಗಾ ವಹಿಸಿ, ಯಾವ ಮಗು ಸಹ ಚಿಕಿತ್ಸೆಯಿಂದ ವಂಚಿತರಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲೆ ಇದೆ, ಹೆಚ್ಚಿನ ಬೆಡ್ ಗಳು, ಆಕ್ಸಿಜನ್ ಮತ್ತು ವೆಂಟಿಲೇಟರ್ ವ್ಯವಸ್ಥೆ ಮಾಡಲು ಚಿಕ್ಕಮಕ್ಕಳ ವಿಭಾಗವನ್ನು ಈಗಿನಿಂದಲೇ ಸನ್ನದ್ಧಗೊಳಿಸಲು ಎಂ.ಬಿ.ಪಾಟೀಲ್ ಸೂಚಿಸಿದರು.
ಅಲ್ಲದೇ, ಮುಖ್ಯವಾಗಿ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಇಂಜಕ್ಷನ್ ಮತ್ತು ಔಷಧಗಳನ್ನು ಈಗಿನಿಂದಲೇ ಸಂಗ್ರಹಿಸಲು ಹೇಳಿದ ಅವರು ಯಾವುದೇ ಪರಿಸ್ಥಿತಿಯಲ್ಲಿ ಈಗಿನಂತೆ ಔಷಧಿಗಳ ಕೊರತೆಯಾಗುವುದು ಬೇಡ ಎಂದರು.
ವಿಶೇಷವಾಗಿ ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಆಗುವ ತೊಂದರೆಗಳು ಮತ್ತು ಸೂಕ್ತ ಚಿಕಿತ್ಸೆ ಕುರಿತು ಅಂತರ್ ರಾಷ್ಟ್ರೀಯ ಮತ್ತು ರಾಷ್ಟ್ರೀಯ ತಜ್ಞವೈದ್ಯರೊಂದಿಗೆ ನಮ್ಮ ವೈದ್ಯರ ತಂಡ ಸಮಾಲೋಚನೆ, ಮಾಹಿತಿ, ನೆರವು ಪಡೆದುಕೊಳ್ಳುವ ನಿಟ್ಟಿನಲ್ಲಿ ಕೂಡಲೇ ಕಾರ್ಯಾಗಾರಗಳನ್ನು ಸಂಘಟಿಸಲು ಎಂ.ಬಿ.ಪಾಟೀಲ್ ತಿಳಿಸಿದರು.
ಈ ಸಂದರ್ಭದಲ್ಲಿ ಸಮಉಪಕುಲಪತಿ ಡಾ.ಆರ್.ಎಸ್.ಮುಧೋಳ, ವೈದ್ಯಕೀಯ ಅಧೀಕ್ಷಕ ಡಾ.ರಾಜೇಶ ಹೊನ್ನುಟಗಿ, ಸಂಸ್ಥೆ ಪ್ರಚಾರಾಧಿಕಾರಿ ಡಾ.ಮಹಾಂತೇಶ ಬಿರಾದಾರ ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!