- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಜ್ಯಮಾನವೀಯತೆ ಮೆರೆದ ಬಸವರಾಜ ಹೊರಟ್ಟಿ. ಸಾರ್ವಜನಿಕರಿಂದ ಪ್ರಶಂಸೆ

ಮಾನವೀಯತೆ ಮೆರೆದ ಬಸವರಾಜ ಹೊರಟ್ಟಿ. ಸಾರ್ವಜನಿಕರಿಂದ ಪ್ರಶಂಸೆ

ಚಿತ್ರದುರ್ಗ : ಇಲ್ಲಿಯ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಿರಿಗೆರೆ ಬಳಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಒರ್ವ ಬಾಲಕ ಸೇರಿದಂತೆ ದಂಪತಿಯನ್ನು ಕೂಡಲೇ ಅಸ್ಪತ್ರೆಗೆ ಸಾಗಿಸಿ ಅವರ ಜೀವ ಉಳಿಸುವಲ್ಲಿ ನೆರವಾದ ಕರ್ನಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾನವೀಯತೆ ಮೆರೆದಿದ್ದಾರೆ.

ಹುಬ್ಬಳ್ಳಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಶನಿವಾರ ಬೆಳಿಗ್ಗೆ ಬೆಂಗಳೂರಿನಿಂದ ತೆರಳುತ್ತಿದ್ದ ಹೊರಟ್ಟಿಯವರು ಮಾರ್ಗಮಧ್ಯದಲ್ಲಿ ಸಿರೆಗೆರೆ ಬಳಿ ತಮ್ಮ ಕಣ್ಣೆದುರಿಗೆ ಸಂಭವಿಸಿದ ಅಪಘಾತ ಗಮನಿಸಿ ಕೂಡಲೇ ತಮ್ಮ ವಾಹನ ನಿಲ್ಲಿಸಿ ಗಾಯಾಳುಗಳಿಗೆ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲು ಸಹಕರಿಸಿದರು.

ಅಲ್ಲದೇ ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಬೇಗನೆ ಸ್ಥಳಕ್ಕೆ ಆಗಮಿಸುವಂತೆ ಸೂಚಿಸಿ, ಆಂಬುಲೆನ್ಸ್ ಕರೆಸಿ ಮೂವರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವಲ್ಲಿ ನೆರವಾದರು. ಸುಮಾರು ಅರ್ಧ ಗಂಟೆಗಿಂತಲೂ ಹೆಚ್ಚು ಕಾಲ ಅಪಘಾತ ಸ್ಥಳದಲ್ಲಿಯೇ ಇದ್ದು ಗಾಯಾಳುಗಳಿಗೆ ಧೈರ್ಯ ಹೇಳಿ, ತುರ್ತು ಚಿಕಿತ್ಸೆ ದೊರಕಿಸುವಲ್ಲಿ ಶ್ರಮಿಸಿದರು.

ಸಭಾಪತಿ ಬಸವರಾಜ ಹೊರಟ್ಟಿಯವರು ಸಂವಿಧಾನಿಕ ದೊಡ್ಡ ಹುದ್ದೆಯಲ್ಲಿದ್ದರೂ ಜನಸಾಮಾನ್ಯರ ಕಷ್ಟಗಳಿಗೆ ಕೂಡಲೇ ಪ್ರತಿಸ್ಪಂದಿಸಿ ನೆರವಾಗುವ ಮಾನವೀಯ ಗುಣಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆಗೆ ವ್ಯಕ್ತವಾಗಿದ್ದು, ಇಂದಿನ ಯುವ ರಾಜಕಾರಣಿಗಳಿಗೆ ಮಾದರಿಯಾಗಿದೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!