- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಜ್ಯಮುಂದಿನ ಅವಧಿಯಲ್ಲಿ ಇವರು ಮುಖ್ಯಮಂತ್ರಿ ಆಗಲಿ. ಬಿಜೆಪಿಗೆ ಸಿದ್ದಲಿಂಗ ಮಹಾಸ್ವಾಮೀಜಿ ಸಲಹೆ

ಮುಂದಿನ ಅವಧಿಯಲ್ಲಿ ಇವರು ಮುಖ್ಯಮಂತ್ರಿ ಆಗಲಿ. ಬಿಜೆಪಿಗೆ ಸಿದ್ದಲಿಂಗ ಮಹಾಸ್ವಾಮೀಜಿ ಸಲಹೆ

ವಿಜಯಪುರ : ಕರ್ನಾಟಕದ ಪ್ರಸಕ್ತ ರಾಜಕೀಯ ಬೆಳವಣಿಗೆಯಿಂದ ಲಿಂಗಾಯತ ಸಮುದಾಯಕ್ಕೆ ಅನ್ಯಾಯವಾಗುವ ಸಾಧ್ಯತೆ ಕಂಡು ಬರುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದಲ್ಲಿ ಲಿಂಗಾಯತ ಸಮುದಾಯದವರು ಬಿಜೆಪಿಯಿಂದ ದೂರಾಗುತ್ತಾರೆ ಎಂದು ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ವಚನಶಿಲಾ ಮಂಟಪ ವಿರಕ್ತಮಠದ ಸಿದ್ದಲಿಂಗ ಮಹಾಸ್ವಾಮೀಜಿ ಹೇಳಿದರು.

ಈ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು,  ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು 40-50 ವರ್ಷಗಳವರೆಗೆ ಅಲೆದಾಡಿ ಪಕ್ಷ ಸಂಘಟಿಸುವ ಜತೆಗೆ ಬಿಜೆಪಿ ಅಧಿಕಾರಕ್ಕೆ ತಂದಿದ್ದಾರೆ. ಇದೀಗ ಅವರನ್ನು ನಡೆಸಿಕೊಳ್ಳುತ್ತಿರುವುದು ಸರಿಯಾದ ಬೆಳವಣಿಗೆಯಲ್ಲ. ಈ ಹಿಂದೆ ವಿರೇಂದ್ರ ಪಾಟೀಲರು 185ಕ್ಕೂ ಹೆಚ್ಚು ಶಾಸಕರನ್ನು ಗೆಲ್ಲಿಸಿ ಮುಖ್ಯಮಂತ್ರಿಯಾದ ನಂತರ ಕೇಂದ್ರದವರು ಸರಿಯಾಗಿ ನಡೆಸಿಕೊಳ್ಳದ ಕಾರಣದಿಂದ ಲಿಂಗಾಯತರು ಹಾಗೂ ಲಿಂಗಾಯತ ಬೆಂಬಲಿತ ಸಮಾಜದವರು ಕಾಂಗ್ರೆಸ್ ಪಕ್ಷದಿಂದ ದೂರಾದರು. ಹಿರಿಯ ಹಾಗೂ ಪ್ರಾಮಾಣಿಕ ವ್ಯಕ್ತಿಯಾದ ಎಸ್.ಆರ್.ಪಾಟೀಲರಿಗೆ ಕಾರಣವಿಲ್ಲದೆ ಸಚಿವ ಸ್ಥಾನದಿಂದ ತೆಗೆದು ಹಾಕಿದರು. ಯಡಿಯೂರಪ್ಪನವರು ಲಿಂಗಾಯತ ಸರ್ವ ಸಮಾಜದ ಪ್ರಶ್ನಾತೀತ ಪ್ರಭಾವಿ ನಾಯಕರಾಗಿದ್ದು, ಕೇಂದ್ರದವರು ಇಲ್ಲವೆ ಶಾಸಕರು ರಾಜೀನಾಮೆ ಪಡೆಯುವ ಕಾರ್ಯಕ್ಕೆ ಮುಂದಾಗಬಾರದು. ಇಲ್ಲದಿದ್ದರೆ ಲಿಂಗಾಯತರು ಬಿಜೆಪಿಯಿಂದ ದೂರ ಸರಿಯುತ್ತಾರೆ ಎನ್ನುವುದನ್ನು ಅರಿತುಕೊಳ್ಳಬೇಕೆಂದು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯತರಿಗೆ ಮುಖ್ಯಮಂತ್ರಿ ಪದವಿ ದೂರದ ಮಾತಾಗಿದ್ದು, ಮಂತ್ರಿ ಪದವಿಗೆ ತೃಪ್ತರಾಗಬೇಕಿದೆ. ಜೆಡಿಎಸ್‌ನಲ್ಲಿ ಮುಖ್ಯಮಂತ್ರಿ ಪದವಿ ಒಕ್ಕಲಿಗರಿಗೆ ಫಿಕ್ಸ್ ಆಗಿದೆ. ಯಡಿಯೂರಪ್ಪನವರು ರಾಜ್ಯದಲ್ಲಿ 25ಸಂಸದರನ್ನು ಗೆಲ್ಲಿಸುವ ಮುಖಾಂತರ ಕೇಂದ್ರ ಸರ್ಕಾರಕ್ಕೆ ಕೊಡುಗೆ ನೀಡಿದ್ದಾರೆ. ಕೇಂದ್ರದವರು ಇದನ್ನು ಅರಿತುಕೊಳ್ಳಬೇಕು. ಈ ಹಿಂದೆ ಬಿಎಸ್‌ವೈ ಮುಖ್ಯಮಂತ್ರಿ ಇದ್ದಾಗ ಸದಾನಂದಗೌಡರು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾಗ ವ್ಯತಿರಿಕ್ತವಾಗಿ ಹೇಳಿಕೆ ನೀಡುವವರ ಮೇಲೆ ತಕ್ಷಣ ಕ್ರಮ ಕೈಗೊಳ್ಳುತ್ತಿದ್ದರು. ಪಕ್ಷಕ್ಕೆ ಹಾನಿಯಾಗದಂತೆ ನಿಗಾವಹಿಸುತ್ತಿದ್ದರು. ಆದರೆ, ಇಂದಿನ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಮೇಲೆ ಕಠಿಣ ಕ್ರಮಕ್ಕೆ ಮುಂದಾಗಬೇಕಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಉಳಿದ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು. ಮುಂದಿನ ಬಾರಿಯೂ ಯಡಿಯೂರಪ್ಪನವರ ನೇತೃತ್ವದಲ್ಲಿ ಚುನಾವಣೆ ನಡೆದಾಗ ಬಿಜೆಪಿ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಿದೆ. ಮುಂದಿನ ಅವಧಿಯಲ್ಲಿ ನೇತೃತ್ವ ತೆಗೆದುಕೊಂಡವರು ಮುಖ್ಯಮಂತ್ರಿ ಆಗಬಹುದು ಎಂದು ಶ್ರೀಗಳು ಸಲಹೆ ನೀಡಿದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!