- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯರವೀಂದ್ರನಾಥ ಠಾಗೋರ್ ಶಾಲೆಯ ವಿದ್ಯಾರ್ಥಿಗಳಿಂದ ಸಾಧನೆ. ಶೇ. 100 ರಷ್ಟು ಫಲಿತಾಂಶ.

ರವೀಂದ್ರನಾಥ ಠಾಗೋರ್ ಶಾಲೆಯ ವಿದ್ಯಾರ್ಥಿಗಳಿಂದ ಸಾಧನೆ. ಶೇ. 100 ರಷ್ಟು ಫಲಿತಾಂಶ.

ವಿಜಯಪುರ : ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಗುಮ್ಮಟನಗರಿ ವಿಜಯಪುರದ ಪ್ರತಿಷ್ಠಿತ ಛತ್ರಪತಿ ಶಿವಾಜಿ ಮಹಾರಾಜ ಎಜ್ಯುಕೇಷನ್ ಸೊಸೈಟಿಯ ರವೀಂದ್ರನಾಥ ಠಾಗೋರ್ ಪ್ರೌಢ ಶಾಲೆಯ ಫಲಿತಾಂಶ ನೂರಕ್ಕೆ ನೂರರಷ್ಟು ಬಂದಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಶಿವಾಜಿ ಗಾಯಕವಾಡ ತಿಳಿಸಿದರು.

ಶಾಲೆಯ ಪಲಿತಾಂಶದ ಕುರಿತಾಗಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರು, ನಗರದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊಡುತ್ತಿರುವ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನಮ್ಮ ಶಾಲೆಯಲ್ಲಿ 136 ವಿದ್ಯಾರ್ಥಿಗಳಲ್ಲಿ 45 ಡಿಸ್ಟಿಂಕ್ಷನ್, ಅದರಲ್ಲಿ ಶೇ 97% ಪ್ರತಿಶತ ಅಂಕ ಪಡೆದು ಸೋನು ಪಾಟೀಲ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.  ಇನ್ನೂ 91 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ಶಾಲೆಯಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ ಎಂದ ಅವರು, ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ… ಪ್ರಾಣ ಬಿಟ್ಟೇನು ಸತ್ಯಾಗ್ರಹವನ್ನಲ್ಲ. ವಿಜಯಪುರದ ಆ ಸ್ವಾತಂತ್ರ್ಯ ಹೋರಾಟಗಾರ

ಕೋವಿಡ್ ಸಂಕಷ್ಟದಲ್ಲಿಯೂ ಆನ್ಲೈನ್ ಹಾಗೂ ಆಪಲೈನ್ ಮೂಲಕ ವಿದ್ಯಾರ್ಥಿಗಳಿಗೆ ಪಾಠ ಬೋಧಿಸಲಾಗಿತ್ತು. ಅದರ ಫಲವಾಗಿಯೇ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಈ ಸಾಧನೆಗೆ ಶ್ರಮವಹಿಸಿದ ಶಾಲೆಯ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಶಿವಾಜಿ ಗಾಯಕವಾಡ ಕೃತಜ್ಞತೆ ಸಲ್ಲಿಸಿದ್ದಾರೆ.LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!