- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯವಿಕಲಚೇತನರಿಗೆ ಕೋವಿಡ್ ಲಸಿಕೆ : ಸದುಪಯೋಗಕ್ಕೆ ಕರೆ

ವಿಕಲಚೇತನರಿಗೆ ಕೋವಿಡ್ ಲಸಿಕೆ : ಸದುಪಯೋಗಕ್ಕೆ ಕರೆ

ಬಸವನಬಾಗೇವಾಡಿ : ಪಟ್ಟಣದ ತಾಲೂಕ ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಕಲಚೇತನರಿಗೆ ಸೋಮವಾರ ಬೆಳಗ್ಗೆ ಕೋ ವ್ಯಾಕ್ಸಿನ್  ನೀಡಲಿದ್ದು ಇದರ ಸದುಪಯೋಗ ಪಡೆದುಕೊಳ್ಳಲು ಕರೆ ನೀಡಲಾಗಿದೆ.

ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಮೇ 31 ಸೋಮವಾರದಂದು ಬಸವನಬಾಗೇವಾಡಿ ಪಟ್ಟಣ ಪ್ರದೇಶದ ವ್ಯಾಪ್ತಿಯ ವಿಕಲಚೇತನರಿಗೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳಿಗೆ ಕೋ ವ್ಯಾಕ್ಸಿನ್ ನೀಡಲಾಗುವುದು.

ಈ ವ್ಯಾಕ್ಸಿನ್ ಪಡೆದುಕೊಳ್ಳುವವರು ಆಧಾರ್ ಕಾರ್ಡ್, ಅಂಗವಿಕಲರ ಪ್ರಮಾಣ ಪತ್ರದೊಂದಿಗೆ ತಾಲೂಕ ಆರೋಗ್ಯಾಧಿಕಾರಿಗಳ ಕಚೇರಿ ಆವರಣಕ್ಕೆ ಹಾಜರಿರಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲೂಕ ಪಂಚಾಯತ್ ಎಂ ಆರ್ ಡಬ್ಲ್ಯೂ ಎಂಎಸ್ ಬಿರಾದರ್ ಹಾಗೂ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ ಒಕ್ಕೂಟದ ಗೌರವಾಧ್ಯಕ್ಷ ಶಿವಾನಂದ ಹಣಮಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!