- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಜ್ಯವಿವಿಧ ಕೊರತೆಗಳನ್ನು ಪರಿಹರಿಸುವುದಾಗಿ ಸಚಿವೆ ಜೊಲ್ಲೆ ಭರವಸೆ

ವಿವಿಧ ಕೊರತೆಗಳನ್ನು ಪರಿಹರಿಸುವುದಾಗಿ ಸಚಿವೆ ಜೊಲ್ಲೆ ಭರವಸೆ

ಚಡಚಣ : ವಿಜಯಪುರ ಜಿಲ್ಲಾ ಆಸ್ಪತ್ರೆ ಹಾಗೂ ವಿವಿಧ ತಾಲೂಕಾ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಹಾಗೂ ತಂತ್ರಜ್ಞರ ಕೊರತೆ ಇರುವುದು ನಿಜ, ಇದು ನನ್ನ ಗಮನಕ್ಕೂ ಬಂದಿದ್ದು, ಶೀಘ್ರದಲ್ಲೇ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೇ ಶ್ರೀಮತಿ ಶಶಿಕಲಾ ಜೋಲ್ಲೆ ಭರವಸೆ ನೀಡಿದ್ದಾರೆ.

ಜಿಲ್ಲೆಯ ಚಡಚಣ ಪ್ರವಾಸಿ ಮಂದಿರದಲ್ಲಿ ಕೋವಿಡ್ ನಿಯಂತ್ರಿಸುವ ಕ್ರಮಗಳ ಕುರಿತು ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅಸ್ಪತ್ರೆಗಳಲ್ಲಿನ ಸಮಸ್ಯೆಗಳು ನನ್ನ ಗಮನಕ್ಕೂ ಬಂದಿವೆ, ಆದಷ್ಟು ಬೇಗ ಈ ಸಮಸ್ಯೆಗಳಿಗೆ ಮುಕ್ತಿ ನೀಡುವುದಾಗಿ ತಿಳಿಸಿದರು.

ತಾಲೂಕಿನ ಜನರಿಗೆ ಲಸಿಕೆ ನೀಡುವ ಕಾರ್ಯಕ್ಕೆ ಇನ್ನಷ್ಟು ವೇಗ ನೀಡಬೇಕಾಗಿದೆ, ಅಲ್ಲದೆ ಸರ್ಕಾರದ ನಿಯಮಗಳನ್ನು ಕೂಡಾ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಬೇಕು, ಮಾಸ್ಕ್ ಧರಿಸದೇ ಸುಮ್ಮನೆ ತಿರುಗಾಡುವವರಿಗೆ ದಂಡ ವಸೂಲಿ, ಬೈಕ್ ವಶಪಡಿಸಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕ ದೇವಾನಂದ್ ಚವ್ಹಾಣ್, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!