- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯವಿವಿಧ ಕೋವಿಡ್ ಕೇರ್ ಸೆಂಟರ್ ಗಳಿಗೆ ಭೇಟಿ ನೀಡಿದ ತಹಶೀಲ್ದಾರ ಬಳಿಗಾರ

ವಿವಿಧ ಕೋವಿಡ್ ಕೇರ್ ಸೆಂಟರ್ ಗಳಿಗೆ ಭೇಟಿ ನೀಡಿದ ತಹಶೀಲ್ದಾರ ಬಳಿಗಾರ

ಬಸವನಬಾಗೇವಾಡಿ :  ಕೊರೋನಾ ಎರಡನೇ ಅಲೆ ತೀವ್ರವಾಗಿದ್ದು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ನೂತನವಾಗಿ ತೆರೆಯಲ್ಪಡುವ ವಿವಿಧ ಕೋವಿಡ್ ಸೆಂಟರ್ ಗಳಿಗೆ ತಹಶೀಲ್ದಾರ ಎಂ.ಎನ್. ಬಳಿಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕಿನ ಮನಗೂಳಿ ಪಟ್ಟಣದ ಬಿ.ಸಿ.ಎಮ್ ವಸತಿ ನಿಲಯದಲ್ಲಿ ತೆರೆದ 50 ಹಾಸಿಗೆಯ ಕೋವಿಡ್ ಸೆಂಟರ್ ಗೆ ಬೇಟಿ ನೀಡಿ ಮೂಲ ಸೌಕರ್ಯಗಳ ಕುರಿತಾಗಿ ಪರಿಶೀಲನೆ ನಡೆಸಿದ ಅವರು, ಆಶಾ ಕಾರ್ಯಕರ್ತೆಯರಿಂದ ಸರ್ವೇಯಲ್ಲಿ ಕೊರೋನಾ ಪಾಸಿಟಿವ್ ಇರುವವರನ್ನು ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಿಕೊಳ್ಳಲು ಮತ್ತು ಕೊರೋನಾ ನಿಯಂತ್ರಿಸಲು ತ್ವರಿತಗತಿಯಲ್ಲಿ ಮನೆ ಮನೆಗಳಿಗೆ ಸರ್ವೆಮಾಡಿ ಕೋವಿಡ್ ಲಕ್ಷಣಗಳಿರುವವರನ್ನು ಪರೀಕ್ಷೆಗೆ ಒಳಪಡಿಸಿ ಕೋವಿಡ್ ಕೇರ್ ಸೆಂಟರ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೂಕ್ತ ಚಿಕಿತ್ಸೆ ನೀಡಲು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶೇಖ ಅವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರಮೇಶ ಮಾಡಬಾಳ, ಗ್ರಾಮಲೆಕ್ಕಾಧಿಕಾರಿ ಎಸ್.ಎಚ್.ಶಿರಶ್ಯಾಡ, ಬಸವನಬಾಗೇವಾಡಿ ಗ್ರಾಮ ಲೆಕ್ಕಾಧಿಕಾರಿ ಸಂತೋಷ ಕುಂಟೋಜಿ ಸೇರಿದಂತೆ ಇತರರು ಇದ್ದರು.

ವರದಿ : ನಾಗೇಶ ನಾಗೂರ


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!