- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯವಿ.ಪ.ಚುನಾವಣೆ: ಪಂಚಮಸಾಲಿಗಳಿಗೆ ಅವಕಾಶ ಕಲ್ಪಿಸುವಂತೆ ಶಂಕರಗೌಡ ಬಿರಾದಾರ ಆಗ್ರಹ

ವಿ.ಪ.ಚುನಾವಣೆ: ಪಂಚಮಸಾಲಿಗಳಿಗೆ ಅವಕಾಶ ಕಲ್ಪಿಸುವಂತೆ ಶಂಕರಗೌಡ ಬಿರಾದಾರ ಆಗ್ರಹ

ಬಸವನಬಾಗೇವಾಡಿ: ಮುಂಬರಲಿರುವ ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಪಂಚಮಸಾಲಿ ಸಮಾಜದ ಮುಖಂಡರುಗಳಿಗೆ ಅವಕಾಶ ಕಲ್ಪಿಸಬೇಕೆಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ಯುವ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ್ ಆಗ್ರಹಿಸಿದ್ದಾರೆ.

ವಿಧಾನಪರಿಷತ್ ಚುನಾವಣೆಗೆ ಸಮಾಜದ ಸೂಕ್ತ ಅಭ್ಯರ್ಥಿಗೆ ರಾಷ್ಟ್ರೀಯ ಪಕ್ಷಗಳು ಟಿಕೆಟ್ ನೀಡಬೇಕು. ಈಗಾಗಲೇ ಅವಳಿ ಜಿಲ್ಲೆಯಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಗೆಲುವು ಪಡೆದುಕೊಂಡಿದ್ದಾರೆ. ಅವಳಿ ಜಿಲ್ಲೆಯಲ್ಲಿ ಸಮಾಜದ ಮತದಾರರೇ ಹೆಚ್ಚಾಗಿದ್ದು, ನಮ್ಮ ಸಮಾಜಕ್ಕೆ ಪ್ರಾತಿನಿತ್ಯ ಕೊಡಲೇಬೇಕು. ರಾಷ್ಟ್ರೀಯ ಪಕ್ಷಗಳು ಮುಂಬರುವ 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷಗಳು ಅಧಿಕಾರಕ್ಕೆ ಬರಬೇಕಾದರೆ ಲಿಂಗಾಯತ ಪಂಚಮಸಾಲಿ ಸಮಾಜದ ಅಭ್ಯರ್ಥಿಗಳಿಗೆ ಈಗ ಟಿಕೆಟ್ ನೀಡುವ ಮೂಲಕ ಅವಳಿ ಜಿಲ್ಲೆಯ ಸಮಾಜದ ಶಾಸಕರು ಶ್ರಮಿಸಬೇಕು ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!