- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಸಮರ್ಪಕ ವಿದ್ಯುತ್ ಪೂರೈಕೆಗೆ ರೈತ ಸಂಘ ಆಗ್ರಹ

ಸಮರ್ಪಕ ವಿದ್ಯುತ್ ಪೂರೈಕೆಗೆ ರೈತ ಸಂಘ ಆಗ್ರಹ

ಬಸವನಬಾಗೇವಾಡಿ : ಸಮರ್ಪಕ ವಿದ್ಯುತ್ ಪೂರೈಸಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಸೋಮವಾರ ಹೆಸ್ಕಾಂ ಇಲಾಖೆಯ ವಿಭಾಗೀಯ ಕಾರ್ಯನಿರ್ವಾಹಕ ಅಭಿಯಂತರ ಜಗದೀಶ ಜಾಧವ ಅವರಿಗೆ ಮನವಿ ಸಲ್ಲಿಸಿದರು.

ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ ಪದೇ ಪದೇ ವಿದ್ಯುತ್ ಕಣ್ಣುಮುಚ್ಚಾಲೆಯಿಂದಾಗಿ ಹಳ್ಳಿಯ ಜನರು ಬೆಸತ್ತು ಹೋಗಿದ್ದಾರೆ. ಬೇಸಿಗೆಯಲ್ಲಿ ಶೇಂಗಾ, ಕಬ್ಬು ಹಾಗೂ ಇನ್ನಿತರ ಬೇಸಿಗೆಯಲ್ಲಿ ಬೆಳೆಯುವ ಬೆಳೆಗೆ ನೀರುಣ್ಣಿಸಲು ವಿದ್ಯುತ್ ಬೇಕು ಆದರೆ ಹಗಲು ಹೊತ್ತಿನಲ್ಲಿ ಸಂಪೂರ್ಣ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ ಇದರಿಂದ ರೈತರಿಗೆ ತೀರಾ ತೊಂದರೆಯಾಗುತ್ತಿದೆ ಕೂಡಲೇ ಸಮಸ್ಯೆ ಬಗೆಹರಿಸಿ ನಿರಂತರ ಪೂರ್ಣ ಪ್ರಮಾಣದ ವಿದ್ಯುತ್ ಒದಗಿಸಬೇಕು ಇಲ್ಲದಿದ್ದರೆ ಅನಿವಾರ್ಯವಾಗಿ ಕೊವಿಡ್-19ರ ಮಧ್ಯದಲ್ಲಿಯೇ ಸಾಮಾಜಿಕ ಅಂತರ ಕಾಯ್ದುಕೊಂಡು ಧರಣಿ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಮನವಿ ಮೂಲಕ ಎಚ್ಚರಿಕೆ ನೀಡಿದರು.

ಹೂವಿನಹಿಪ್ಪರಗಿ ಫೀಡರದಿಂದ ಸರಬರಾಜು ಆಗುತ್ತಿರುವ ವಿದ್ಯುತ್ ಹುಲಬೆಂಚಿ ನಾಗರಾಳಹುಲಿ ಸೇರಿದಂತೆ ಸುತ್ತಲಿನ ಗ್ರಾಮಗಳಿಗೆ ವಿದ್ಯುತ್ ಸರಬರಾಜು ಸರಿಯಾಗಿ ಆಗುತ್ತಿಲ್ಲ ಅದರಂತೆ ಇಂಗಳೇಶ್ವರ ಗ್ರಾಮ ಸೇರಿದಂತೆ ಸುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ಸರಿಯಾಗಿ ಬರುತ್ತಿಲ್ಲ ಐದು ಹತ್ತು ನಿಮಿಷಕ್ಕೊಮ್ಮೆ ವಿದ್ಯುತ್ ಕಡಿತಗೊಳ್ಳುತ್ತಿದೆ ಇದರಿಂದ ರೈತರಿಗೆ ಹಾಗೂ ಜನರಿಗೆ ತೀವ್ರ ತೊಂದರೆಯಾಗಿದೆ ಕೂಡಲೇ ಸಮರ್ಪಕ ವಿದ್ಯುತ್ ಸರಬರಾಜು ಆಗುವಂತೆ ಗಮನಹರಿಸಬೇಕೆಂದು ಮನವಿಯಲ್ಲಿ ಆಗ್ರಹಿಸಿದರು.

ಈ ಸಂರ್ಭದಲ್ಲಿ ವಿಠ್ಠಲ ಬಿರಾದಾರ, ಗಂಗಯ್ಯ ಚಿಕ್ಕಮಠ, ಭೀರಪ್ಪ ಗೊಡೆಕರ್ ಎಸ್.ಕೆ.ಬಿರಾದಾರ ಹಣಮಂತ್ರಾಯ ಹಂದ್ರಾಳ ಇದ್ದರು.

ವರದಿ : ನಾಗೇಶ ನಾಗೂರ


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!