- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಸಿಎಂ ಪ್ಯಾಕೇಜ್ ನಲ್ಲಿ ರೈತರಿಗೆ ಅನ್ಯಾಯ. ಶಂಕರಗೌಡ ಬಿರಾದಾರ ಆರೋಪ

ಸಿಎಂ ಪ್ಯಾಕೇಜ್ ನಲ್ಲಿ ರೈತರಿಗೆ ಅನ್ಯಾಯ. ಶಂಕರಗೌಡ ಬಿರಾದಾರ ಆರೋಪ

ಬಸವನಬಾಗೇವಾಡಿ : ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೊವೀಡ್-19ರ 2ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಘೋಷಿಸಿರುವ ಪ್ಯಾಕೇಜ್ ರೈತರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಅನ್ಯಾಯವಾಗಿದೆ ಎಂದು ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಆರೋಪಿಸಿದರು.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಪ್ಯಾಕೇಜ್ ಘೋಷಣೆ ಮಾಡಿರುವ ಸರ್ಕಾರ ರೈತರು ಬೆಳದ ಬೆಳೆಗೆ ಬೆಂಬಲ ಬೆಲೆ ಹಾಗೂ ರೈತರ ಸಾಲ ಮನ್ನಾ ಮಾಡದೇ ಕೇವಲ ಈ ಪ್ಯಾಕೇಜ್ ಮೂಗಿಗೆ ತುಪ್ಪ ಒರಿಸುವ ಕಾರ್ಯವಾಗಿದೆ. ಮುಖ್ಯಮಂತ್ರಿಗಳು ರೈತರಿಗೆ, ಕೂಲಿ ಕಾರ್ಮಿಕರಿಗೆ, ಕಟ್ಟಡ ಕಾರ್ಮಿಕರು ಸೇರಿದಂತೆ ಇನ್ನೂಳಿದ ಶ್ರಮಿಕರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುತ್ತಾರೆ ಎಂಬ ಭರವಸೆಯಲ್ಲಿ ಜನತೆಗೆ ಶಾಕ್ ನೀಡಿದಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕಳೆದ ವರ್ಷ ವಿವಿಧ ಶ್ರಮಿಕ ವರ್ಗಕ್ಕೆ ಘೋಷಣೆ ಮಾಡಿದ ಪ್ಯಾಕೇಜ್ ಇನ್ನೂ ತಲುಪಿಲ್ಲ ಮತ್ತೊಮ್ಮೆ ಇಂಥ ಪ್ಯಾಕೇಜ್ ಘೋಷಣೆ ಮಾಡಿದ್ದು ಇದರಿಂದ ಯಾರಿಗೂ ಅನುಕೂಲವಾಗುವುದಿಲ್ಲ, ರೈತರು ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆಯಿಲ್ಲದೆ ಹೊಲಗದ್ದೆಗಳಲ್ಲಿ ಹಾಳಾಗುತ್ತವೆ ಇದ್ದರಿಂದ ರೈತರು ಬೆಳೆದ ಬೆಳೆಗಳನ್ನು ರಸ್ತೆಯಲ್ಲಿ ಸುರಿದು ಆಕ್ರೋಶವ್ಯಕ್ತಪಡಿಸುತ್ತಿರುವುದು ಸರ್ವೇ ಸಾಮಾನ್ಯವಾಗಿದೆ ಎಂದು ಆರೋಪಿಸಿದರು.

ಅಲ್ಲದೇ ಮುಖ್ಯಮಂತ್ರಿಗಳು ಘೋಷಿಸಿರುವ ಪ್ಯಾಕೇಜ್ ಬಗ್ಗೆ ಮರುಪರಿಶೀಲನೆ ನಡೆಸಿ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಶಂಕರಗೌಡ ಬಿರಾದಾರ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

ವರದಿ : ನಾಗೇಶ ನಾಗೂರ


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!