- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಜ್ಯಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಗೂ ವಿಜಯಪುರಕ್ಕೂ ಇತ್ತು ನಂಟು

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಗೂ ವಿಜಯಪುರಕ್ಕೂ ಇತ್ತು ನಂಟು

ವಿಜಯಪುರ : ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಗೂ ವಿಜಯಪುರಕ್ಕೂ ನಂಟು ಇತ್ತು.  ಈ ಹಿಂದೆ 2010ರಲ್ಲಿ ಅಂದು ರಾಜ್ಯವಷ್ಟೇ ಅಲ್ಲ ದೇಶಾದ್ಯಂತ ಹೋರಾಟದ ಮೂಲಕ ಸದ್ದು ಮಾಡಿದ್ದ ಭೀಮಾ ನದಿ ನೀರು ರೈತವರ್ಗ ಸಮಿತಿ ದಶಮಾನೋತ್ಸವ ಕಾರ್ಯಕ್ರಮಕ್ಕೆ ಎಸ್. ದೊರೆಸ್ವಾಮಿ ವಿಜಯಪುರ ಜಿಲ್ಲೆಗೆ ಆಗಮಿಸಿದ್ದರು.

ಮಹಾರಾಷ್ಟ್ರ ಕರ್ನಾಟಕದ ಪಾಲಿನ ನೀರು ಬಿಡುಗಡೆ ಮಾಡುತ್ತಿಲ್ಲ ಎಂದು ಭೀಮಾ ನದಿ ನೀರು ರೈತವರ್ಗ ಸಮಿತಿ ಸುಪ್ರಿಂ ಕೋರ್ಟ್ ಮೊರೆ ಹೋಗಿತ್ತು.  2000ದಲ್ಲಿ ರಚನೆಯಾಗಿದ್ದ ಈ ಸಮಿತಿ ತನ್ನ ಹೋರಾಟದ ಮೂಲಕ ಅಂದು ಬೇಸಿಗೆಯಲ್ಲಿ ಪ್ರತಿದಿನ 400 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರಕ್ಕೆ ಮಧ್ಯಂತರ ಆದೇಶ ನೀಡಿತ್ತು. 

ಈ ಸಮಿತಿಯ ದಶಮಾನೋತ್ಸವ ಕಾರ್ಯಕ್ರಮ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮರಗೂರು ಗ್ರಾಮದ ಬಳಿ ಭೀಮಾ ಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಹತ್ತಿರ ಜನೇವರಿ 8 ರಿಂದ 10ರ ವರೆಗೆ ಮೂರು ದಿನ ನಡೆದಿತ್ತು.  ಸಮಿತಿ ಅಧ್ಯಕ್ಷ ಮತ್ತು ಭೀಮಾ ಹೋರಾಟಗಾರ ಈ ಕಾರ್ಯಕ್ರಮ ಆಯೋಜಿಸಿದ್ದರು. 

ಈ ಹೋರಾಟಕ್ಕೆ ಉದ್ಘಾಟಕರಾಗಿ ಆಗಮಿಸಿದ್ದ ಎಸ್. ದೊರೆಸ್ವಾಮಿ, ಕಾರ್ಯಕ್ರಮದ ಅಚ್ಚುಕಟ್ಟುತನದಿಂದ ಪ್ರಭಾವಿತರಾಗಿ ಮೂರೂ ದಿನ ಕಾರ್ಯಕ್ರಮ ಮುಗಿಯುವವರೆಗೆ ಅಲ್ಲಿಯೇ ಇದ್ದು ಹೋರಾಟಗಾರರನ್ನು ಹುರುದುಂಬಿಸಿದ್ದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!