- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ವಿಜಯಪುರ: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪೂರ್ಣಪ್ರಮಾಣದ 625ಕ್ಕೆ 625 ಅಂಕಗಳಿಸಿದ ವಿಜಯಪುರ ಜಿಲ್ಲೆಯ ವಿವಿಧ ಪ್ರೌಢಶಾಲೆಗಳ ಏಳು ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತನಿಂದ ಸನ್ಮಾನ ಸಮಾರಂಭವು ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಮಕ್ಕಳೊಂದಿಗೆ ಆಗಮಿಸಿದ ವಿದ್ಯಾರ್ಥಿಗಳ ಪಾಲಕರು ಮತ್ತು ವಿದ್ಯಾರ್ಥಿಗಳಿಗೆ ಕಲಿಸಿದ ಶಿಕ್ಷಕರಿಗೂ ಇದೆ ಸಂದರ್ಭದಲ್ಲಿ ಸನ್ಮಾನ ನಡೆದಿದ್ದು ವಿಶೇಷವಾಗಿತ್ತು.

ಜುಮನಾಳ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಅಮಿತ್ ಮಾದರ, ಕಾರಜೋಳ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ಐಶ್ವರ್ಯಾ ಕನಸೆ ಮತ್ತು ಸ್ವಾತಿ ಮಾಳೇದ, ತುಂಗಳ ಪ್ರೌಢಶಾಲೆಯ ರಕ್ಷಿತ ಚಿನಿವಾರ, ತಾಳಿಕೋಟೆ ಸರ್ವಜ್ಞ ವಿದ್ಯಾಪೀಠದ ವಿದ್ಯಾರ್ಥಿನಿ ಶ್ರೇಯಾ ದೇಸಾಯಿ, ಮುದ್ದೇಬಿಹಾಳದ ನಾಗರಬೆಟ್ಟ ಆಕ್ಸ್ಫರ್ಡ್ ಪ್ರೌಢಶಾಲೆಯ ವಿದ್ಯಾರ್ಥಿ ಯಲ್ಲಾಲಿಂಗ ಸೂಳಿಬಾವಿ, ಸಿಂದಗಿಯ ಕಿತ್ತೂರ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಯ ಶಿವಲೀಲಾ ದುರ್ಗೆ ಅವರಿಗೆ ಇದೆ ವೇಳೆ ಸನ್ಮಾನ ನೀಡಿ ಗೌರವಿಸಲಾಯಿತು.

ಈ ವೇಳೆ ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎನ್.ಸಿ. ಹೊಸೂರಮಾತನಾಡಿ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಸುರೇಶ್ ಶೆಡಶ್ಯಾಳ ಸೇರಿದಂತೆ ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!