- Advertisement -Newspaper WordPress Theme
ಪ್ರಮುಖ ಸುದ್ದಿಗಳುಪ್ರಾದೇಶಿಕಜಿಲ್ಲಾ ಆಸ್ಪತ್ರೆಗೆ ರಾಷ್ಟ್ರ ಮಟ್ಟದ “ಲಕ್ಷ್ಯ” ಪ್ರಶಸ್ತಿಯ ಗರಿ

ಜಿಲ್ಲಾ ಆಸ್ಪತ್ರೆಗೆ ರಾಷ್ಟ್ರ ಮಟ್ಟದ “ಲಕ್ಷ್ಯ” ಪ್ರಶಸ್ತಿಯ ಗರಿ

ಬಾಗಲಕೋಟೆ: ಹೆರಿಗೆ ಹಾಗೂ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ ತಾಯಿ ಹಾಗೂ ಶಿಶು ಮರಣ ಕಡಿಮೆಗೊಳಿಸುವಲ್ಲಿ ಉತ್ತಮ ಕಾರ್ಯನಿರ್ವಣೆಗೆ ಜಿಲ್ಲಾ ಸರಕಾರಿ (Bagalkot District Hospital) ಆಸ್ಪತ್ರೆಯು ರಾಷ್ಟ್ರ ಮಟ್ಟದ ಲಕ್ಷ್ಯ ಪ್ರಶಸ್ತಿಗೆ (LaQshya awards) ಭಾಜನವಾಗಿದೆ.

ಕೇಂದ್ರ ಸರಕಾರದ ಉತ್ತಮ ಯೋಜನೆಯಾದ ಲಕ್ಷ್ಯ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಶ್ರಮಿಸಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ದೆಹಲಿ ಹಾಗೂ ಮಧ್ಯಪ್ರದೇಶದ ನುರಿತ ತಜ್ಞರ ಸಮಿತಿ ತಂಡವು ಕೂಲಂಕುಶವಾಗಿ ಪರಿಶೀಲನೆ ನಡೆಸಿದ ನಂತರ ತಂಡ ಒದಗಿಸಿದ ವರದಿಯನ್ವಯ ರಾಷ್ಟ್ರೀಯ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯು ಅಧಿಕೃತವಾಗಿ ಪ್ರಶಸ್ತಿಯನ್ನು ಘೋಷಿಸಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ತಿಳಿಸಿದ್ದಾರೆ.

ಜಿಲ್ಲಾ ಆಸ್ಪತ್ರೆಗೆ (Bagalkot District Hospital) ಲಕ್ಷ್ಯ ಪ್ರಶಸ್ತಿ ಲಭಿಸಿದ ಹಿನ್ನಲೆಯಲ್ಲಿ ಹೆರಿಗೆ ಹಾಗೂ ಶಸ್ತ್ರಚಿಕಿತ್ಸೆಯ ವಿಭಾಗಕ್ಕೆ ಪ್ರತಿ ವರ್ಷ 3 ಲಕ್ಷ ರೂ.ಗಳಂತೆ ಮೂರು ವರ್ಷಗಳ ಕಾಲ ವಿಶೇಷ ಅನುದಾನ ದೊರೆಯಲಿದೆ. ಆ ಅನುದಾನ ದಲ್ಲಿ ಶೇ.25 ರಷ್ಟು ಲಕ್ಷ್ಯ ಪ್ರಶಸ್ತಿಗೆ ಸಂಬಂಧಿಸಿದ ಗುಣಮಟ್ಟ ಕಾಯ್ದಿರಿಸುವಲ್ಲಿ ಶ್ರಮಿಸಿದ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಉಳಿದ ಶೇ.75 ರಷ್ಟು ಅನುದಾನವನ್ನು ಆಯಾ ವಿಭಾಗದ ಅಭಿವೃದ್ದಿ ಕಾರ್ಯಗಳಿಗೆ ಬಳಕೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕರು ತಿಳಿಸಿದ್ದಾರೆ.

ಹೆರಿಗೆಗಾಗಿಯೇ ಪ್ರತ್ಯೇಕವಾಗಿ 6 ಹಾಸಿಗೆಗಳ ಐಸಿಯು ವಿಭಾಗವನ್ನು ಸಹ ಆರಂಭಿಸಲಾಗುತ್ತಿದೆ. ಆ ವಿಭಾಗಕ್ಕೆ ಬೇಕಾಗುವ ಪ್ರತ್ಯೇಕ ವೈದ್ಯ ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತಿದೆ. ಶೀಘ್ರದಲ್ಲಿಯೇ ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

ಜಿಲ್ಲಾ ಸರಕಾರಿ ಆಸ್ಪತ್ರೆಯು (Bagalkot District Hospital) ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳನ್ನು ಮೀರಿಸಿದೆ. ಆಸ್ಪತ್ರೆಯನ್ನು ಅತ್ಯಾಧುನಿಕ ಉಪಕರಣಗಳನ್ನು ಅಳವಡಿಸುವ ಮೂಲಕ ಮೇಲ್ದರ್ಜೆಗೆ ಏರಿಸಲಾಗಿದೆ. ಪ್ರತಿ ದಿನ 700 ದಿಂದ 800 ವರೆಗೆ ರೋಗಿಗಳಿಗೆ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗುತ್ತಿದೆ.

ಡಾ.ಪ್ರಕಾಶ ಬಿರಾದಾರ ನೇತೃತ್ವದಲ್ಲಿ 32 ವಿಭಾಗಗಲ್ಲಿ ಆಸ್ಪತ್ರೆಯು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲಿ ಹೆರಿಗೆ, ಸರ್ಜರಿ ಹಾಗೂ ಮೆಡಿಸಿನ್ ವಿಭಾಗ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ.


LEAVE A REPLY

Please enter your comment!
Please enter your name here

Subscribe Today

GET EXCLUSIVE FULL ACCESS TO PREMIUM CONTENT

SUPPORT NONPROFIT JOURNALISM

EXPERT ANALYSIS OF AND EMERGING TRENDS IN CHILD WELFARE AND JUVENILE JUSTICE

TOPICAL VIDEO WEBINARS

Get unlimited access to our EXCLUSIVE Content and our archive of subscriber stories.

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!