- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಜಿಲ್ಲೆಗೆ ಬಂದ ಸಿಎಂ ಬೊಮ್ಮಾಯಿ ಏನೇನ್ ಮಾಡಿದ್ರು. ಇಲ್ಲಿದೆ ಸಂಪೂರ್ಣ ವರದಿ

ಜಿಲ್ಲೆಗೆ ಬಂದ ಸಿಎಂ ಬೊಮ್ಮಾಯಿ ಏನೇನ್ ಮಾಡಿದ್ರು. ಇಲ್ಲಿದೆ ಸಂಪೂರ್ಣ ವರದಿ

ವಿಜಯಪುರ: ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai in Vijayapur) ವಿಜಯಪುರ (Vijayapura)ನಗರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ವಿಜಯಪುರ ನಗರದ ಸೈನಿಕ ಶಾಲೆಯ ಆವರಣದಲ್ಲಿ ನಿರ್ಮಿಸಲಾಗಿರುವ ನೂತನ ಹಾಕಿ ಮೈದಾನವನ್ನು ಸಿಎಂ ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಕೇಂದ್ರ ಗಣಿ ಮತ್ತು ಕಲ್ಲಿದ್ಸಲು ಸಚಿವ ಪ್ರಲ್ಹಾದ್ ಜೋಷಿ, ಸಚಿವರಾದ ಸಿ. ಸಿ. ಪಾಟೀಲ, ಗೋವಿಂದ ಕಾರಜೋಳ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal) ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು. 

ಬಳಿಕ ನಗರದಲ್ಲಿ ಅಭಿವೃದ್ದಿ ಪಡಿಸಿರುವ ಸುಭಾಸ್ ಚಂದ್ರ ಭೋಸ್ ರಸ್ತೆ ಮಾರ್ಗವನ್ನು ಸಿಎಂ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಗಣಿ ಮತ್ತು ಕಲ್ಲಿದ್ಸಲು ಸಚಿವರಾದ ಪ್ರಲ್ಹಾದ್ ಜೋಷಿ, ಸಚಿವರಾದ ಸಿ.ಸಿ. ಪಾಟೀಲ್, ಗೋವಿಂದ ಕಾರಜೋಳ, ಆನಂದ ಸಿಂಗ್, ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು. 

ಇದಾದ ಬಳಿಕ ಮುಖ್ಯಮಂತ್ರಿಗಳು ಸರಕಾರದ ನಾನಾ ಇಲಾಖೆಗಳ ಹಾಗೂ ವಿಜಯಪುರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಜಿಲ್ಲೆಯ ನಾನಾ ಇಲಾಖೆಗಳ ಒಟ್ಟು ರೂ. 279 ಕೋ. ಹಲವಾರು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ (Basavaraj Bommai in Vijayapur) ನೆರವೇರಿಸಿದರು.

ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಸಚಿವರಾದ ಸಿ.ಸಿ.ಪಾಟೀಲ್, ಆನಂದ್ ಸಿಂಗ್,ಗೋವಿಂದ ಕಾರಜೋಳ,  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ಶ್ರೀ ಸಿದ್ಧೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ (Basavaraj Bommai in Vijayapur) ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಲಾಗಿರುವ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ ಮಾಡಿ ಮಾತನಾಡಿದರು. 

ಸಿಎಂ ಭಾಷಣ ಆರಂಭಿಸುತ್ತಿದ್ದಂತೆ ಭಾರಿ ಮಳೆ ಸುರಿಯಲಾರಂಭಿಸಿತು.  ಈಗ ಮಳೆ ಬರುತ್ತಿರುವುದು ದೈವಿ ಆಶೀರ್ವಾದ ಎಂದ ಸಿಎಂ ಮಾರ್ಮಿಕವಾಗಿ ಹೇಳಿದರು.  ಮಳೆಯ ಹಿನ್ನೆಲೆಯಲ್ಲಿ ಸಭಿಕರು ತಲೆಯ ಮೇಲೆ ಕುರ್ಚಿ ಹಿಡಿದು ನಿಂತು ಭಾಷಣ ಆಲಿಸಿದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!