- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯನಾಳೆ ಜಿಲ್ಲೆಗೆ ಮುಖ್ಯಮಂತ್ರಿ ಬೊಮ್ಮಾಯಿ

ನಾಳೆ ಜಿಲ್ಲೆಗೆ ಮುಖ್ಯಮಂತ್ರಿ ಬೊಮ್ಮಾಯಿ

ವಿಜಯಪುರ: ಗುಮ್ಮಟನಗರಿ ವಿಜಯಪುರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಡಿ.25 ರಂದು ಜಿಲ್ಲೆಗೆ ಆಗಮಿಸಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬೆಳಿಗ್ಗೆ 9-30 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ (ಹೆಲಿಕಾಪ್ಟರ್ ಮೂಲಕ) ಹೊರಟು 10-30 ಗಂಟೆಗೆ ವಿಜಯಪುರ ಸೈನಿಕ್ ಸ್ಕೂಲ್ ಹೆಲಿಪ್ಯಾಡ್ ತಲುಪುವರು.

ವಿದ್ಯಾರ್ಜನೆಯೊಂದಿಗೆ ಸಾಮಾಜಿಕ ಕಾಳಜಿ ಮೆರೆದ ಶಿಕ್ಷಕ ಪರಮೇಶ್ವರ ಗಧ್ಯಾಳ

ನಂತರ ದಿವಂಗತ ಮಾಜಿ ಪ್ರಧಾನ ಮಂತ್ರಿಗಳಾದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ವಾಜಪೇಯಿ ಅವರ ಪ್ರತಿಮೆಗೆ ಮಾಲಾರ್ಪಣೆ ಮತ್ತು ವಿಜಯಪುರ ನಗರ, ನಾಗಠಾಣ, ಬಬಲೇಶ್ವರ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸುವರು.

ಮುಂದೆ ಮಧ್ಯಾಹ್ನ 1-00 ಗಂಟೆಗೆ ವಿಜಯಪುರದ ಸೈನಿಕ್ ಸ್ಕೂಲ್ ಹೆಲಿಪ್ಯಾಡ್ನಿಂದ ಹೆಲಿಕಾಪ್ಟರ್ ಮೂಲಕ ಹಾವೇರಿ ಜಿಲ್ಲೆಯತ್ತ ಪ್ರಯಾಣ ಬೆಳೆಸಲಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!