- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹ

ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹ

ಬಸವನಬಾಗೇವಾಡಿ: ಪರಿಶಿಷ್ಟ ಜಾತಿಗೆ ಶೇ.2 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.4.5 ಮೀಸಲಾತಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ತಾಲೂಕಾ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾದ ನೇತೃತ್ವದಲ್ಲಿ ಗ್ರೇಡ್ 2 ತಹಶೀಲ್ದಾರ ಪಿ.ಜಿ.ಪವಾರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಹಾಸಭಾದ ಮುಖಂಡ ಸಿದ್ದು ಮೇಟಿ, ಪಿ.ವಾಯ್. ಕೋಳೂರ ಮಾತನಾಡಿ, ಪರಿಶಿಷ್ಟ ಜಾತಿಗೆ ಶೇ.2 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.4.5 ಮೀಸಲಾತಿ ಹೆಚ್ಚಳ ಮಾಡುವಂತೆ, ನ್ಯಾಯಮೂರ್ತಿ ನಾಗಮೋಹನದಾಸ ವರದಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಮಹಾಸ್ವಾಮೀಜಿ ಹೋರಾಟ ಮಾಡುತ್ತಿದ್ದು ಇಂದಿಗೆ 100 ದಿನಗಳು ಕಳದಿದ್ದು, ವಾಲ್ಮೀಕಿ ಸಮುದಾಯಕ್ಕೆ ಸರಕಾರ ಯಾವುದೇ ರೀತಿಯಿಂದ ಸ್ಪಂದನೆ ನೀಡದೇ ಮಲತಾಯಿ ಧೋರಣೆಯನ್ನು ತೋರುತಿದ್ದು, ಸ್ವಾಮೀಜಿಗಳ ಹಾಗೂ ಸಮಸ್ತ ವಾಲ್ಮೀಕಿ ಸಮುದಾಯದ ತಾಳ್ಮೆ ಪರೀಕ್ಷೆ ಮಾಡುತ್ತಿದೆ ಇದಕ್ಕೆ ತಕ್ಕ ಉತ್ತರ ಹೋರಾಟದ ಮೂಲಕ ನೀಡಬೇಕಾಗುತ್ತದೆ, ಇದಕ್ಕೆ ಸರಕಾರ ಅವಕಾಶ ನೀಡಬಾರದೆಂದು ಆಕ್ರೋಶ ವ್ಯಕ್ತಪಡಿಸಿದರು.

ಒಂದು ವೇಳೆ ಇದಕ್ಕೆ ವಿಳಂಬ ನೀತಿ ಅನುಸರಿಸಿದಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಮಹಾಸ್ವಾಮೀಜಿ ನೇತೃತ್ವದಲ್ಲಿ ರಾಜ್ಯಾದಾದ್ಯಂತ ವಾಲ್ಮೀಕಿ ಸಮುದಾಯದಿಂದ ಉಗ್ರಸ್ವರೂಪದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಚ್ಚರಿಸಿ ಬಹುದಿನಗಳ ಬೇಡಿಕೆಯಾದ ಜನಸಂಖ್ಯೆಗನುಗುಣವಾಗಿ ಕೇಂದ್ರ ಸರಕಾರ ನೀಡಿರುವ ಮೀಸಲಾತಿಯನ್ನು ನೀಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಸನಗೌಡ ಪಾಟೀಲ, ಲಕ್ಷ್ಮಣ ರ‍್ಯಾಗೇರಿ, ಪ್ರಕಾಶ ರಾಘಪ್ಪಗೋಳ, ರಾಜು ಕುರಿ, ಪರಸು ವನಹಳ್ಳಿ, ಪರಸುರಾಮ ಬಿರಾದಾರ, ದುಂಡು ಗೊಳಸಂಗಿ, ಮುತ್ತು ಪೂಜಾರಿ ಇದ್ದರು.

ವರದಿ: ನಾಗೇಶ ನಾಗೂರ


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!