- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಪೂರ್ವ ಮುಂಗಾರು. ಅಧಿಕಾರಿಗಳಿಗೆ ಡಿ.ಸಿ, ಸಿಇಓ ನಿರ್ದೇಶನ

ಪೂರ್ವ ಮುಂಗಾರು. ಅಧಿಕಾರಿಗಳಿಗೆ ಡಿ.ಸಿ, ಸಿಇಓ ನಿರ್ದೇಶನ

ವಿಜಯಪುರ: ಈಗಾಗಲೇ ಮುಂಗಾರು ಮಳೆಗಳು ಆರಂಭಗೊಂಡಿವೆ. ಈ ಹಿನ್ನೆಲೆಯಲ್ಲಿ ಪೂರ್ವ ಮುಂಗಾರು ಪರಿಸ್ತಿತಿಯನ್ನು ಎದುರಿಸಲು ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ಮತ್ತು ಪೂರ್ವ ಮುಂಗಾರು ಪರಿಸ್ಥಿತಿ ಎದುರಿಸುವ ಕುರಿತು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮೇ 23ರಂದು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಖ್ಯವಾಗಿ ಮಾನ್ಯ ಮುಖ್ಯಮಂತ್ರಿಯವರ ಆಶಾಭಾವನೆಯಂತೆ ಜಿಲ್ಲೆಯಲ್ಲಿ ಪ್ರವಾಹ ಆಗದ ಹಾಗೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಮನವರಿಕೆ ಮಾಡಿದರು.

ತೀವ್ರ ಮಳೆಯಾಗಿ ಮಹಾರಾಷ್ಟ್ರದಿಂದ ನೀರು ಹರಿಬಿಟ್ಟಲ್ಲಿ ಭೀಮಾ, ಕೃಷ್ಣಾ ಮತ್ತು ಡೋಣಿ ನಂದಿ ತುಂಬಿದಾಗಲು ಜಿಲ್ಲೆಯಲ್ಲಿ ಪ್ರವಾಹ ಉಂಟಾಗುವ ಸಾದ್ಯತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಕಂದಾಯ, ಹೆಸ್ಕಾಂ, ಲೋಕೋಪಯೋಗಿ, ಪಂಚಾಯತ್ ರಾಜ್ಯ, ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಸೇರಿದಂತೆ ಇನ್ನೀತರ ಮಹತ್ವದ ಇಲಾಖೆಗಳ ಅಧಿಕಾರಿಗಳು ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಮಳೆಯಿಂದಾಗಿ ಜನ-ಜಾನುವಾರುಗಳ ಜೀವ ಹಾನಿಯಾದಲ್ಲಿ 24 ಗಂಟೆಯೊಳಗೆ ಪರಿಹಾರಕ್ಕಾಗಿ ಮುಂದಿನ ಕ್ರಮ ಜರುಗಿಸಬೇಕು. ಮನೆಹಾನಿ ಪರಿಹಾರದ ಕ್ರಮಕ್ಕೂ ಸಹ 24 ಗಂಟೆಯೊಳಗೆ ಸಮೀಕ್ಷೆ ನಡೆಸಲು ಮುಂದಾಗಬೇಕು. ಬೆಳೆಹಾನಿ ಸಂಭವಿಸಿದಲ್ಲಿ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಜಂಟಿ ಸಮೀಕ್ಷೆ ನಡೆಸಿ ವರದಿ ನೀಡಬೇಕು ಎಂದ ಜಿಲ್ಲಾಧಿಕಾರಿಗಳು, ಇದುವರೆಗಿನ ಜೀವ ಹಾಗು ಆಸ್ತಿಹಾನಿ ಮತ್ತು ಬೆಳೆಹಾನಿಗೆ ಪರಿಹಾರ ಕೊಡುವ ಪ್ರಕ್ರಿಯೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!