- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಷ್ಟ್ರೀಯಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ

ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ

ನವದೆಹಲಿ: ಇದೆ ತಿಂಗಳ ಜೂನ್ 26, 27 ರಂದು ಜರ್ಮನ್ (Germany) ಅಧ್ಯಕ್ಷರ ಅಡಿಯಲ್ಲಿ ನಡೆಯಲಿರುವ ಜಿ 7 ಶೃಂಗಸಭೆಯಲ್ಲಿ (G7 summit 2022) ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಪಾಲ್ಗೊಳ್ಳಲು ಜರ್ಮನಿಯ ಚಾನ್ಸಲರ್ ಒಲಾಫ್ ಸ್ಕೋಲ್ಜ್ ಅವರ ಆಹ್ವಾನದ ಮೇರೆಗೆ ಜರ್ಮನಿಯ ಶ್ಲೋಸ್ ಎಲ್ಮೌಗೆ ಭೇಟಿ ನೀಡಲಿದ್ದಾರೆ.

ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅಪರಿಸರ, ಇಂಧನ, ಹವಾಮಾನ, ಆಹಾರ ಭದ್ರತೆ, ಆರೋಗ್ಯ, ಲಿಂಗ ಸಮಾನತೆ ಮತ್ತು ಪ್ರಜಾಪ್ರಭುತ್ವ ಸೇರಿದಂತೆ ಎರಡು ಗೋಷ್ಠಿಗಳಲ್ಲಿ ಮಾತನಾಡುವ ನಿರೀಕ್ಷೆಯಿದೆ.

ಈ ಪ್ರಮುಖ ವಿಷಯಗಳಲ್ಲಿ ಅಂತಾರಾಷ್ಟ್ರೀಯ ಸಹಯೋಗವನ್ನು ಬಲಪಡಿಸುವ ಪ್ರಯತ್ನದಲ್ಲಿ, ಅರ್ಜೆಂಟೀನಾ, ಇಂಡೋನೇಷ್ಯಾ, ಸೆನೆಗಲ್ ಮತ್ತು ದಕ್ಷಿಣ ಆಫ್ರಿಕಾದಂತಹ ಇತರ ಪ್ರಜಾಪ್ರಭುತ್ವಗಳನ್ನು ಸಹ ಆಹ್ವಾನಿಸಲಾಗಿದೆ. ಶೃಂಗಸಭೆಯ ನೇಪಥ್ಯದಲ್ಲಿ, ಪ್ರಧಾನ ಮಂತ್ರಿ ಭಾಗವಹಿಸುವ ಕೆಲವು ದೇಶಗಳ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.

ಭಾರತ ಮತ್ತು ಜರ್ಮನಿ ನಡುವಿನ ಬಲವಾದ ಮತ್ತು ನಿಕಟ ಪಾಲುದಾರಿಕೆ ಮತ್ತು ಉನ್ನತ ಮಟ್ಟದ ರಾಜಕೀಯ ಸಂಪರ್ಕಗಳ ಸಂಪ್ರದಾಯಕ್ಕೆ ಅನುಗುಣವಾಗಿ ಜಿ 7 ಶೃಂಗಸಭೆಗೆ (G7 summit 2022) ಆಹ್ವಾನ ನೀಡಲಾಗಿದೆ. ಭಾರತ-ಜರ್ಮನಿ ಅಂತರ್-ಸರ್ಕಾರಿ ಸಮಾಲೋಚನೆಗಳ (ಐಜಿಸಿ) ಆರನೇ ಆವೃತ್ತಿಗಾಗಿ 2022 ರ ಮೇ 2 ರಂದು ಪ್ರಧಾನಮಂತ್ರಿ ಅವರು ಕೊನೆಯ ಜರ್ಮನಿ ಭೇಟಿಯಾಗಿತ್ತು.

ಜಿ7 ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ, ಯುಎಇ ಮಾಜಿ ಅಧ್ಯಕ್ಷ ಮತ್ತು ಅಬುಧಾಬಿ ಆಡಳಿತಗಾರ ಎಚ್.ಎಚ್. ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನಕ್ಕೆ ವೈಯಕ್ತಿಕ ಸಂತಾಪ ಸೂಚಿಸಲು ಪ್ರಧಾನಮಂತ್ರಿ ಅವರು 2022 ರ ಜೂನ್ 28 ರಂದು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಪ್ರಯಾಣಿಸಲಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!