- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಗೋಶಾಲಾ ಲೋಕಾರ್ಪಣೆಗೆ ಗಡುವು ನೀಡಿದ ಜಿಲ್ಲಾಧಿಕಾರಿ ದಾನಮ್ಮನವರ

ಗೋಶಾಲಾ ಲೋಕಾರ್ಪಣೆಗೆ ಗಡುವು ನೀಡಿದ ಜಿಲ್ಲಾಧಿಕಾರಿ ದಾನಮ್ಮನವರ

ವಿಜಯಪುರ: ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ (Vijayamahantesh B Danammanavar I.A.S) ಅವರು ಜೂನ್ 21ರಂದು ವಿಜಯಪುರ (Vijayapura) ತಾಲೂಕಿನ ಬುರಾಣಪುರ ಗ್ರಾಮಕ್ಕೆ ಭೇಟಿ ನೀಡಿ ಸರ್ಕಾರಿ ಗೋಶಾಲೆಯ ನಿರ್ಮಾಣದ (goshala) ಕಾಮಗಾರಿಯ ಪರಿವೀಕ್ಷಣೆ ನಡೆಸಿದರು.

ಈ ವೇಳೆ ಜಿಲ್ಲಾಧಿಕಾರಿಗಳು, ಮೇವು ಸಂಗ್ರಹಣೆ ಕೊಠಡಿ, ಮೇವು ಬೆಳೆಸಲು ಯೋಜನೆ ರೂಪಿಸಲು ಮತ್ತು ಕೃಷಿ ಹೊಂಡ ನಿರ್ಮಾಣ ನಿರ್ವಹಣೆಯ ಬಗ್ಗೆ ಅಧಿಕಾರಿಗಳಿಗೆ ಸಲಹೆ ಮಾಡಿದರು.

Vijayamahantesh B Danammanavar I.A.S Vijayapura
Vijayamahantesh B Danammanavar I.A.S Vijayapura

ನರೇಗಾ ಯೋಜನೆಯಡಿ ನೀರಿನ ತೊಟ್ಟಿಯ ನಿರ್ಮಾಣ, ರಸ್ತೆ ನಿರ್ಮಾಣ ಮತ್ತು ಭೂಮಿ ಸಮತಟ್ಟು ಕಾರ್ಯವನ್ನು ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಕೈಗೊಳ್ಳಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಬಾಕಿ ಇರುವ ಎಲ್ಲ ಕಾಮಗಾರಿಗಳನ್ನು ಜುಲೈ 1ರೊಳಗೆ ಪೂರ್ಣಗೊಳಿಸಿ ಗೋಶಾಲೆಯ ಲೋಕಾರ್ಪಣೆಗೆ ಸಿದ್ಧಗೊಳಿಸಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಗಡುವು ವಿದಿಸಿದರು.

ಈ ಸಂದರ್ಭದಲ್ಲಿ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಡಾ.ಪ್ರಾಣೇಶ ಜಹಗೀರದಾರ ಅವರು ಮಾತನಾಡಿ, ಸರ್ಕಾರಿ ಗೋಶಾಲೆಯ (goshala) ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಬಾಕಿ ಕಾರ್ಯವನ್ನು ಸಹ ಕಾಲ ಮಿತಿಯೊಳಗೆ ಪೂರ್ಣಗೊಳಿಸಲು ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಪಂ ಕಾರ್ಯ ನಿರ್ವಹಣಾಧಿಕಾರಿ, ತಾಪಂ ಸಹಾಯಕ ನಿರ್ದೇಶಕರು, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ.ಸಿ.ಅರಕೇರಿ, ಪಶು ವೈದ್ಯಾಧಿಕಾರಿ ಡಾ.ಆನಂದ ದೇವರನಾವದಗಿ, ನಿರ್ಮಿತಿ ಕೇಂದ್ರದ ಅಭಿಯಂತರರಾದ ಧನಗೊಂಡ, ಐನಾಪುರ ಗ್ರಾಪಂ ಅಧ್ಯಕ್ಷರು ಹಾಗೂ ಇತರರು ಇದ್ದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!