- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಗ್ರಾ,ಪಂ ಉಪ ಚುನಾವಣೆ ವೇಳಾಪಟ್ಟಿ ಪ್ರಕಟ. ಇಲ್ಲಿದೆ ವಿವರ

ಗ್ರಾ,ಪಂ ಉಪ ಚುನಾವಣೆ ವೇಳಾಪಟ್ಟಿ ಪ್ರಕಟ. ಇಲ್ಲಿದೆ ವಿವರ

ವಿಜಯಪುರ: ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ -2021 ಗಳನ್ನು ನಡೆಸಬೇಕಾಗಿರುವುದರಿಂದ, ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ವೇಳಾಪಟ್ಟಿ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಪಿ.ಸುನೀಲಕುಮಾರ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ… ಶ್ರಮಬಿಂದು ಸಾರಥಿ ದಿ. ಸಿದ್ದು ನ್ಯಾಮಗೌಡ

ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊಡಿಸುವ ದಿನಾಂಕ ಮತ್ತು ದಿನ ಡಿ.13 (ಸೋಮವಾರ), ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ದಿನ ಡಿ.17 (ಶುಕ್ರವಾರ), ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ ಮತ್ತು ದಿನ ಡಿ.18 (ಶನಿವಾರ), ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಮತ್ತು ದಿನ ಡಿ. 20 (ಸೋಮವಾರ) ಆಗಿದೆ.

ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನಾಂಕ ಮತ್ತು ದಿನ (ಮತದಾನದ ಸಮಯ ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ)  ಡಿ.27 (ಸೋಮವಾರ), ಮರು ಮತದಾನ ಇದ್ದಲ್ಲಿ, ಮತದಾನದ ದಿನಾಂಕ ಮತ್ತು ದಿನ (ಸಮಯ ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ), ಡಿ.29 (ಬುಧುವಾರ), ಮತಗಳ ಎಣಿಕೆ ದಿನಾಂಕ ಮತ್ತು ದಿನ (ಬೆಳಿಗ್ಗೆ 8 ಗಂಟೆಯಿಂದ ತಾಲೂಕು ಕೇಂದ್ರಗಳಲ್ಲಿ) ಡಿ.30 (ಗುರುವಾರ), ಚುನಾವಣೆ ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಮತ್ತು ದಿನ ಡಿ.30 (ಗುರುವಾರ) ಆಗಿರುತ್ತದೆ ಎಂದು ತಿಳಿಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!