- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಸಾರ್ವಜನಿಕರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ವಿಜಯಮಾಂತೇಶ ದಾನಮ್ಮನವರ

ಸಾರ್ವಜನಿಕರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ವಿಜಯಮಾಂತೇಶ ದಾನಮ್ಮನವರ

ಬಸವನಬಾಗೇವಾಡಿ: ಸರ್ಕಾರದ ಆದೇಶದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಮುಂದುವರೆದ ಭಾಗವಾಗಿ ಮಂಗಳವಾರ (Basavana Bagewadi) ತಹಶೀಲ್ದಾರ ಕಚೇರಿಯಲ್ಲಿ ಜಿಲ್ಲಾಧಿಕಾರಿ ವಿಜಯಮಾಂತೇಶ ದಾನಮ್ಮನವರ (IAS Officer vijaymahantesh danammanavar) ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆ ಆಲಿಸಿದರು.

ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಒಟ್ಟು 7 ಅರ್ಜಿಗಳು ಬಂದಿದ್ದು ಸಂಭಂದಿಸಿದ ಅಧಿಕಾರಿಗಳಿಗೆ ಸಮಸ್ಯೆ ಕುರಿತು ಬಗೆ ಹರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ ನಂತರ ಮಾತನಾಡಿದ ಅವರು ಸರ್ಕಾರ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಕೈಗೆ ಎತ್ತಿಕೊಂಡು ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತದೆ ಪ್ರತಿಯೊಬ್ಬರು ಇದರ ಸದುಪಯೋಗ ಪಡೆದುಕೊಳ್ಳಬೇಕು ಅಲ್ಲದೆ ತಾಲೂಕಾ ಆಡಳಿತದಿಂದ ಸಾರ್ವಜನಿಕರಿಗೆ ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸುವಂತಹ ಕಾರ್ಯವಾಗಬೇಕಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ ವಿಜಯಕುಮಾರ ಕಡಕೋಳ, (IAS Officer vijaymahantesh danammanavar) ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚಲುವಯ್ಯ, ಸಿಡಿಪಿಒ ನಿರ್ಮಲಾ ಸುರಪೂರ, ತಾಲೂಕಾ ಆರೋಗ್ಯಾಧಿಕಾರಿ ಶಶಿಧರ ಓತಗೇರಿ, ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಸಿದ್ದಾರ್ಥ ಕಳ್ಳಿಮನಿ, ಕೃಷಿ ಇಲಾಖೆ ಸಿಬ್ಬಂದಿಗಳು, ಮಹೇಶ ಬಳಗಾನೂರ ಸೇರಿದಂತೆ ವಿವಿಧ ತಾಲೂಕಾ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ನಾಗೇಶ ನಾಗೂರ


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!