- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಅಧಿಕಾರಿಗಳ ನಡೆ ಹಳ್ಳಿಯ ಕಡೆ. ಗ್ರಾಮೀಣ ಭಾಗದ ಜನರಿಗೆ ಅನುಕೂಲ

ಅಧಿಕಾರಿಗಳ ನಡೆ ಹಳ್ಳಿಯ ಕಡೆ. ಗ್ರಾಮೀಣ ಭಾಗದ ಜನರಿಗೆ ಅನುಕೂಲ

ಬಸವನಬಾಗೇವಾಡಿ: ಗ್ರಾಮೀಣ ಜನರಿಗೆ ಅನುಕೂಲವಾಗಲಿ ಎನ್ನುವ ಸದ್ದೋಶದಿಂದ ಅಧಿಕಾರಿಗಳ ನಡೆ ಹಳ್ಳಿಯ ಕಡೆ (Jilladikarigala Nade HalliyaKade Basavanabagewadi)ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು (Tehsildar) ತಹಶೀಲ್ದಾರ ವಿಜಯಕುಮಾರ ಕಡಕೋಳ (Vijayakumar Kadakol) ಹೇಳಿದರು.

ತಾಲೂಕಿನ ಮಣ್ಣೂರ ಗ್ರಾಮದಲ್ಲಿ ತಾಲೂಕಾಡಳಿತ ಹಮ್ಮಿಕೊಂಡಿರುವ ಅಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಕಾರದ ಯೋಜನೆಗಳನ್ನು ಗ್ರಾಮೀಣ ಭಾಗದ ಜನರ ಮನೆ ಬಾಗಿಲಿಗೆ ತಲುಪಿಸುವ ಮಹಾತ್ವಾಕ್ಷಂಶೆಯ ಯೋಜನೆ ಇದಾಗಿದೆ ನಿಮ್ಮ ಸಮಸ್ಯೆಗಳನ್ನು ಅರ್ಜಿ ಸಲ್ಲಿಸುವ ಮೂಲಕ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.

ನಾಗೂರ ಗ್ರಾಮದಲ್ಲಿ ಎರಡು ಸಾರ್ವಜನಿಕ ಮಹಿಳಾ ಶೌಚಾಲಯ ನಿರ್ಮಿಸುವುದು ಹಾಗೂ ಎಸ್.ಸಿ ಕಾಲೂನಿಯಲ್ಲಿರುವ ಮಹಿಳಾ ಶೌಚಾಲಯವನ್ನು ದುರಸ್ತಿಗೊಳಿಸುವಂತೆ ನಾಗೂರ ಗ್ರಾಮದ ಶ್ರೀಶೈಲ ಮಸೂತಿ ಅರ್ಜಿ ನೀಡಿರುವ ಹಿನ್ನಲೆಯಲ್ಲಿ ತಹಶೀಲ್ದಾರ ವಿಜಯಕುಮಾರ ಕಡಕೋಳ ಅವರು ತಾಲೂಕಾ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಭಾರತಿ ಚಲುವಯ್ಯ ಅವರಿಗೆ ಸಮಸ್ಯೆ ಬಗ್ಗೆ ಸೂಚಿಸಿದರು.

ಇದಕ್ಕೆ ಉತ್ತರಿಸಿದ ಕಾರ್ಯನಿರ್ವಾಹಕ ಅಧಿಕಾರಿಗಳು ಸರ್ಕಾರದಿಂದ ಸಾರ್ವಜನಿಕ ಶೌಚಾಲಯಕ್ಕೆ ಕಡಿವಾಣ ಹಾಕಲಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ವೈಯಕ್ತಿಕ ಶೌಚಾಲಯ ಕಟ್ಟಿಸಿಕೊಳ್ಳಲು ಮುಂದಾಗಬೇಕು ಗ್ರಾಮದಲ್ಲಿ ವೈಯಕ್ತಿಕ ಶೌಚಾಲಯವಿಲ್ಲದ ಮನೆಗಳ ವರದಿ ತಯಾರಿಸಿ ಅವರಿಗೆ ಶೌಚಾಲಯ ಕಟ್ಟಸಿಕೊಳ್ಳವಂತೆ ತಿಳಿ ಹೇಳಿ ಎಂದು ಪಿಡಿಒ ಎಸ್.ವಾಯ್.ಕುಂಬಾರ ಅವರಿಗೆ ತಿಳಿಸಿದರು.

ಮಣ್ಣೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಸಮಸ್ಯೆ ಕುರಿತು ಒಟ್ಟು 67 ಅರ್ಜಿಗಳು ಬಂದಿದ್ದು 37 ಅರ್ಜಿಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಾಯಿತು, ಉಳಿದ ಅರ್ಜಿಗಳನ್ನು ಸಂಬAಧಿಸಿದ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.

ಪಿಂಚಣಿಗೆ ಸಂಬಂಧಿಸಿದಂತೆ 15 ಅರ್ಜಿಗಳು ಬಂದಿದ್ದು 6 ಅರ್ಜಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿ ನೀಡಲಾಯಿತು, 9ಅರ್ಜಿಗಳು ತೀರಸ್ಕೃತಗೊಂಡವು (Jilladikarigala Nade HalliyaKade Basavanabagewadi).

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ರಾಚವ್ವ ಕುಂಬಾರ, ಉಪಾಧ್ಯಕ್ಷ ಶರಣು ನಾಲತವಾಡ. ಕ್ಷೇತ್ರಶಿಕ್ಷಣಾಧಿಕಾರಿ ಸಂಗಮೇಶ ಪೂಜಾರಿ, ಸಿಡಿಪಿಒ ನಿರ್ಮಲಾ ಸುರಪುರ, ಕೃಷಿ ಇಲಾಖೆ ಅಧಿಕಾರಿ ಎಂ.ಎಚ್, ಯರಝರಿ, ತೋಟಗಾರಿಕೆ ಅಧಿಕಾರಿ ಸಿ.ಬಿ, ಪಾಟೀಲ.

ಹೆಸ್ಕಾಂ ಅಧಿಕಾರಿ ವಿಜಯಕುಮಾರ ಬಿರಾದಾರ, ಸಮಾಜಕಲ್ಯಾಣ ಇಲಾಖೆ ಅಧಿಕಾರಿ ಭವಾನಿ ಪಾಟೀಲ, ತಾಲೂಕಾ ಆರೋಗ್ಯಾಧಿಕಾರಿ ಶಶಿಧರ ಓತಗೇರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!