- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯನಾಳೆ ಸಿದ್ದೇಶ್ವರ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಲೋಕಾರ್ಪಣೆ

ನಾಳೆ ಸಿದ್ದೇಶ್ವರ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಲೋಕಾರ್ಪಣೆ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರಿಂದ, ನಾಳೆ ಸೆ.30 ರಂದು ನಗರದ ಎನ್‌ಎಚ್-50 ಹತ್ತಿರದಲ್ಲಿನ ಎಸ್- ಹೈಪರ್ ಮಾರ್ಟ ಹತ್ತಿರದ ಶ್ರೀ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ (JSS Hospital Vijayapura) ಆವರಣದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.

MUST WATCH: ಬಸವಣ್ಣ ಮತ್ತು ರಾಜಕಾರಣ

ವಿಜಯಪುರ ಜ್ಞಾನ ಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸುವರು. ಮುಖ್ಯಮಂತ್ರಿಗಳಾದ ಮಾನ್ಯ ಬಸವರಾಜ ಬೊಮ್ಮಾಯಿ ವಿವಿಧ ಕಾಮಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು. ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ಉಪಸ್ಥಿತಿ ವಹಿಸುವರು. ವಿಜಯಪುರ ನಗರ ಮತಕ್ಷೇತ್ರದ ಶಾಸಕರಾದ ಬಸನಗೌಡ ಆರ್ ಪಾಟೀಲ ಯತ್ನಾಳ (Basanagouda Patil Yatnal) ಅವರು ಅಧ್ಯಕ್ಷತೆ ವಹಿಸುವರು.

MORE READ: ವಿಜಯಪುರದಲ್ಲಿ ಪ್ರಪ್ರಥಮ ಬಾರಿ ಜರುಗಲಿದೆ ಪತ್ರಕರ್ತರ ಸಮ್ಮೇಳನ. ನಾಳೆ ಲಾಂಚನ ಬಿಡುಗಡೆ

ಮುಖ್ಯ ಅತಿಥಿಗಳಾಗಿ ಜಲ ಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ, ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ವಸತಿ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಬಿ.ದಾನಮ್ಮನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಡಿ.ಆನಂದಕುಮಾರ ಸೇರಿದಂತೆ ವಿವಿಧ ರಾಜಕೀಯ ಮುಖಂಡರು, ಹಲವಾರು ಅಧಿಕಾರಿಗಳು ಉಪಸ್ಥಿತರರಿವರು.

ಉದ್ಘಾಟನೆ ಶಂಕುಸ್ಥಾಪನೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕರ್ನಾಟಕ ದಾಕ್ಷಿ ಮತ್ತು ದ್ರಾಕ್ಷಾರಸ ಮಂಡಳಿ ಮತ್ತು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳ (JSS Hospital Vijayapura) ಉದ್ಘಾಟನೆ ಮತ್ತು ಶಂಕುಸ್ಥಾಪನೆಯು ಮಾನ್ಯ ಮುಖ್ಯಮಂತ್ರಿಗಳಿಂದ ನೆರವೇರಲಿದೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!