- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಬಸವನಾಡಿನಲ್ಲಿ ಸರ್ವ ಧರ್ಮಗಳ ಸಾಮೂಹಿಕ ವಿವಾಹ

ಬಸವನಾಡಿನಲ್ಲಿ ಸರ್ವ ಧರ್ಮಗಳ ಸಾಮೂಹಿಕ ವಿವಾಹ

ಬಸವನಬಾಗೇವಾಡಿ: ಪಟ್ಟಣದ ಬಸವನಗರದ ಆಲಮಟ್ಟಿ ರಸ್ತೆಯಲ್ಲಿನ ರೇಣುಕಾ ಯಲ್ಲಮ್ಮದೇವಿ ಜಾತ್ರೆಯ ನಿಮಿತ್ತ ಹಮ್ಮಿಕೊಂಡಿದ್ದ ಸರ್ವ ಧರ್ಮಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಸಾನಿಧ್ಯವಹಿಸಿದ್ದ ಮನಗೂಳಿ ಹಿರೇಮಠದ ಸಂಗನಬಸವ ಶಿವಾಚಾರ್ಯ ಮಹಾಸ್ವಾಮೀಜಿ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಹೆಚ್ಚದ ಹಣದುಬ್ಬರದ ಮಧ್ಯೆ ಆರ್ಥಿಕವಾಗಿ ಹಿಂದುಳಿದ ಹಾಗೂ ಬಡ ಕುಟುಂಬಗಳು ಮದುವೆ ಕಾರ್ಯಗಳಿಗೆ ದುಂದು ವಚ್ಚವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ವ ಧರ್ಮಗಳ ಸಾಮೂಹಿಕ ವಿವಾಹಗಳು ಬಡವರ ಬದುಕಿಗೆ ಆಸರೆಯಾಗಿವೆ ಎಂದು ಹೇಳಿದರು.

ಇದೇ ವೇಳೆ, ಸ್ಥಳೀಯ ವಿಕ್ತಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಸಾಮೂಹಿಕ ವಿವಾಹ ಮೊಟ್ಟ ಮೊದಲಿಗೆ ಆರಂಭಿಸಿದ ಕೀರ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನ ಕಮೀಟಿಗೆ ಸಲ್ಲುತ್ತದೆ. 12ನೇ ಶತಮಾನದಲ್ಲಿ ಬಸವಣ್ಣನವರು ಅಂತರಜಾತಿ ವಿವಾಹ ಮಾಡುವ ಮೂಲಕ ಸಮಾನತೆ ಸಾರಿದರು. ಇಂದು ಸರ್ವ ಧರ್ಮ ವಿವಾಹ ನಡೆಯುತ್ತಿರುವದು ಉತ್ತಮ ಬೆಳವಣಿಗೆ, ಮುಂದಿನ ದಿನಮಾನಗಳಲ್ಲಿ ಬಸವ ಜಯಂತಿ ದಿನದಂದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಾಮೂಹಿಕ ವಿವಾಹಗಳನ್ನು ಹಮ್ಮೀಕೊಳ್ಳುವ ಮೂಲಕ ಬಡ ಕುಟುಂಬಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸಹಕಾರಿ ಮಹಾಮಂಡಳದ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಪುರಸಭೆ ಮಾಜಿ ಅಧ್ಯಕ್ಷ ಜಗದೀಶ ಕೊಟ್ರಶೆಟ್ಟಿ ಮಾತನಾಡಿದರು. ಬೃಂಗೇಶ್ವರ ಸ್ವಾಮೀಜಿ, ಮುತ್ತಯ್ಯ ಒಡೆಯರ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಬಿಜೆಪಿ ಮುಖಂಡ ಸೋಮನಗೌಡ(ಅಪ್ಪುಗೌಡ) ಪಾಟೀಲ(ಮನಗೂಳಿ), ಪುರಸಭೆ ಹಂಗಾಮಿಅಧ್ಯಕ್ಷೆ ಲಕ್ಷ್ಮೀಬಾಯಿ ಬೆಲ್ಲದ, ಸಂಗನಗೌಡ ಚಿಕ್ಕೊಂಡ, ರವಿ ಪಡಶೆಟ್ಟಿ, ಅಶೋಕ ಗುಳೇದ, ಹರಿಲಾಲ ನಾಯಕ, ಸಾವಿತ್ರಿ ಕಲ್ಯಾಣಶೆಟ್ಟಿ ಸೇರಿದಂತೆ ಇತರರು ಇದ್ದರು.

ಮಹೇಶ ಸಾಲೋಡಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಾನಂದ ಬೆಲ್ಲದ ಸ್ವಾಗತಿಸಿದರು, ಎಚ್.ಬಿ.ಬಾರಿಕಾಯಿ ನಿರೂಪಿಸಿ, ವಂದಿಸಿದರು.

ಕಾರ್ಯಕ್ರಮ ಮುಗಿದ ನಂತರ ಶಾಸಕ ಶಿವಾನಂದ ಪಾಟೀಲ ಆಗಮಿಸಿ ಮನೆಗೆ ತೆರಳಿದ ನವ ವಧುವರರನ್ನು ಕರೆಯಿಸಿ ಅಕ್ಷತೆ ಹಾಕಿ ಶುಭಾಶಯ ಕೋರಿದರು.

ವರದಿ: ನಾಗೇಶ ನಾಗೂರ


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!