- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಡೋಣಿ ನದಿಯಲ್ಲಿ ಹೆಚ್ಚಿನ ಪ್ರವಾಹ. ರಾಜ್ಯ ಹೆದ್ದಾರಿ ಸಂಚಾರ ಬಂದ್ ಆಗುವ ಭೀತಿ..!

ಡೋಣಿ ನದಿಯಲ್ಲಿ ಹೆಚ್ಚಿನ ಪ್ರವಾಹ. ರಾಜ್ಯ ಹೆದ್ದಾರಿ ಸಂಚಾರ ಬಂದ್ ಆಗುವ ಭೀತಿ..!

ವಿಜಯಪುರ: ಜಿಲ್ಲೆಯಾದ್ಯಂತ ಕಳೆದ ಎರಡು ದಿನದಿಂದ ಸುರಿದ ಮಳೆಯಿಂದಾಗಿ ಜಿಲ್ಲೆಯ ಡೋಣಿ ನದಿ ಪಾತ್ರದ ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾದಂತಾಗಿದ್ದು, ಜಿಲ್ಲೆಯ ತಾಳಿಕೋಟೆ ತಾಲೂಕಿನ ಹಡಗಿನಾಳ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಇದಲ್ಲದೇ ಡೋಣಿ ನದಿಯಲ್ಲಿ ನೀರಿನ‌ ಪ್ರಮಾಣ ಹೆಚ್ಚಾಗುತ್ತಿರುವುದರಿಂದ  ರಾಜ್ಯ ಹೆದ್ದಾರಿ ಸಂಚಾರ ಮತ್ತೆ ಬಂದ್ ಆಗುವ ಭೀತಿ ಎದುರಾದಂತಾಗಿದೆ.

ತಾಳಿಕೋಟಿ ಪಟ್ಟಣದ ಮೂಲಕ ಬಿಜ್ಜಳ ರಾಜ್ಯ ಹೆದ್ದಾರಿ 60 ಎಂದು ಕರೆಯಲ್ಪಡುವ ಮನಗೂಳಿ – ದೇವಾಪುರ ರಾಜ್ಯ ಹೆದ್ದಾರಿ ಹಾದು ಹೋಗುತ್ತದೆ. ತಾಳಿಕೋಟಿ ಪಟ್ಟಣ ತಲುಪುವ ಮುಂಚೆ ಇದೇ ಡೋಣಿ ನದಿಗೆ ಮುಖ್ಯ ಸೇತುವೆ ಕಳೆದ ಕೆಲ ತಿಂಗಳ ಹಿಂದೆ ಶಿಥಿಲಗೊಂಡ ಕಾರಣ ದುರಸ್ಥಿಗೊಳಪಡಿಸಿ ಇದರ ಮೇಲೆ ವಾಹನ ಸಂಚಾರ ನಿಷೇಧಿಸಲಾಗಿದೆ.

ಇದರ ಬದಲಾಗಿ ಪಕ್ಕದಲ್ಲಿಯೇ ತಾತ್ಕಾಲಿಕ ರಸ್ತೆಯೊಂದನ್ನ ನಿರ್ಮಾಣ ಮಾಡಿ ಅದು ಮುಕ್ತಾಯದ ಹಂತ ತಲುಪಿದೆ. ಆದರೆ ಕಲೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ಕಾರಣದಿಂದ ಡೋಣಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ, ಮತ್ತೆ ರಾಜ್ಯ ಹೆದ್ದಾರಿ ಸಂಚಾರ ವ್ಯತ್ಯಯವಾಗುವ ಭೀತಿ ಎದುರಾಗಿದೆ. ಕಾರಣ ಕೂಡಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಈ ಕುರಿತು ತುರ್ತು ಪರಿಹಾರೋಪಾಯ ಕಾಮಗಾರಿ ಕೈಗೊಳ್ಳಬೇಕೆನ್ನುವುದು ಸ್ಥಳೀಯರ ಹಾಗೂ ಈ ಮಾರ್ಗದ ಮೂಲಕ ಸಂಚರಿಸುವ ಜನತೆಯ ಆಗ್ರಹವಾಗಿದೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!