- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಮುತ್ತತ್ತಿ ಟ್ರೋಫಿ ಕ್ರಿಕೆಟ್ ಟೂರ್ನಮೆಂಟ್ ಗೆ ಚಾಲನೆ

ಮುತ್ತತ್ತಿ ಟ್ರೋಫಿ ಕ್ರಿಕೆಟ್ ಟೂರ್ನಮೆಂಟ್ ಗೆ ಚಾಲನೆ

ಬಸವನಬಾಗೇವಾಡಿ: ತಾಲೂಕಿನ ನರಸಲಗಿ (Narasalagi Muttatti Cricket Trophy) ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೀಮಿಯರ್ ಲೀಗ್ ಮುತ್ತತ್ತಿ ಟ್ರೋಫಿ ಕ್ರಿಕೆಟ್ ಟೂರ್ನಮೆಂಟ್ ಕಾರ್ಯಕ್ರಮವನ್ನು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಗೌರಮ್ಮ ಮುತ್ತತ್ತಿ ಚಾಲನೆ ನೀಡಿದರು.

ನಂತರ ಮಾತನಾಡಿದ ಗೌರಮ್ಮ ಮುತ್ತತ್ತಿ, ಇಂದಿನ ದಿನಗಳಲ್ಲಿ ಯುವಕರು ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ, ಕೆಟ್ಟ ಹವ್ಯಾಸದಿಂದ ಸದೃಡ ಶರೀರ ಹಾಳು ಮಾಡಿಕೊಳ್ಳುತ್ತಿರುವುದು ಕಳವಳಕಾರಿ ಸಂಗತಿ ಎಂದು ಹೇಳಿದರು.

ಯುವಕರು ಬದಲಾಗಬೇಕು, ಉತ್ತಮ ಹವ್ಯಾಸ ಮೈಗೂಡಿಸಿಕೊಳ್ಳಬೇಕು. ಜತೆಗೆ ಕ್ರೀಡಾ (Narasalagi Muttatti Cricket Trophy) ಚಟುವಟಿಕೆಗಳೆಡೆಗೆ ಹೆಚ್ಚು ಗಮನ ಹರಿಸಿ, ಉತ್ತಮ ಆರೋಗ್ಯ ಕಾಪಾಡಿಕೊಂಡು, ಸದೃಡ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಯುವಕರಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಅಹಿಂದ ಯುವ ಮುಖಂಡ ಮುತ್ತುರಾಜ ಹಾಲಿಹಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸಿರ್ ಸೇಟ್ ಡಿ.ಎಸ್.ಎಸ್ ಮುಖಂಡ ಅಶೋಕ ನಂದಿ, ರಾಜಶೇಖರ್ ಹುಲ್ಲೂರ,ಮಾಂತೇಶ ಹಾಲಿಹಾಳ, ಬಸವರಾಜ ಸಗರನಾಳ, ಇನ್ನಿತರು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!