- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಜಿಲ್ಲೆಯ ಅನುದಾನಿತ, ಅನುದಾನ ರಹಿತ ಶಾಲೆಗಳ ಗಮನಕ್ಕೆ

ಜಿಲ್ಲೆಯ ಅನುದಾನಿತ, ಅನುದಾನ ರಹಿತ ಶಾಲೆಗಳ ಗಮನಕ್ಕೆ

ವಿಜಯಪುರ:  ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದಂತೆ ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ದಾನಮ್ಮನವರ (Vijaymahantesh Danammanavar) ತಿಳಿಸಿದ್ದಾರೆ.

ಒಂದು ವೇಳೆ ನಿಯಮಗಳನ್ನು ಉಲ್ಲಂಘನೆ ಮಾಡಿದಲ್ಲಿ ಅಂತಹ ಶಾಲೆಗಳ ಮಾನ್ಯತೆಯನ್ನು ಹಿಂಪಡೆಯಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯ ಎಲ್ಲ ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸಾರ್ವಜನಿಕರು ಮತ್ತು ಪಾಲಕರಿಂದ ಹೆಚ್ಚಿನ ಶುಲ್ಕವನ್ನು ಪಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಅಂತಹ ಶಾಲೆಗಳ ಮಾನ್ಯತೆಯನ್ನು ರದ್ದುಪಡಿಸಲು ಶಿಫಾರಸ್ಸು ಮಾಡಲಾಗುವುದು. ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರನ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ ಮಾರ್ಗಸೂಚಿಗಳನ್ನು ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮುಖ್ಯೋಪಾಧ್ಯಾಯರುಗಳು, ಕಡ್ಡಾಯವಾಗಿ ಪಾಲಿಸಬೇಕು.

ಮುಖ್ಯೋಪಾಧ್ಯಾಯರುಗಳು ತಮ್ಮ ಶಾಲೆಗೆ ಸಂಬಂಧಿಸಿದಂತೆ ಪ್ರಾಥಮಿಕ ಶಾಲೆಗೆ ಅಥವಾ ಪ್ರೌಢಶಾಲೆಯಲ್ಲಿ ಲಭ್ಯವಿರುವ ಸೀಟುಗಳ ಸಂಖ್ಯೆಯನ್ನು ವರ್ಗವಾರು ರೋಷ್ಟರ ಪದ್ಧತಿ ಪ್ರಕಾರ ದಾಖಲಾತಿಯ ಮಾರ್ಗಸೂಚಿಸಯಲ್ಲಿ ನೀಡಿರುವ ಮಾದರಿಯ ಮಾಹಿತಿಯಂತೆ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು ಎಂದು (vijayakumar danammanavar) ತಿಳಿಸಿದ್ದಾರೆ.

ಯಾವುದೇ ಕಾರಣಕ್ಕೂ ಇಲಾಖೆಯಿಂದ ಅನುಮತಿ ನಿರೀಕ್ಷಿಸಿ ಪ್ರವೇಶ ಸಂಖ್ಯೆಯನ್ನು ಮುಖ್ಯೋಪಾಧ್ಯಾಯರ ಹಂತದಲ್ಲಿಯೇ ಪ್ರಕಟಿಸಕೂಡದು ಮತ್ತು ದಾಖಲಾತಿಯನ್ನು ಮಾಡಕೂಡದು. ಮುಖ್ಯೋಪಾಧ್ಯಾಯರು, ಆಡಳಿತ ಮಂಡಳಿಯವರು ಸರ್ಕಾರ, ಇಲಾಖೆ ನಿಗದಿಪಡಿಸಿರುವ ಶುಲ್ಕಗಳ ಪಟ್ಟಿಯನ್ನು ಹಾಗೂ ತಮ್ಮ ಶಾಲೆಗೆ ಇತ್ತೀಚಿಗೆ ಮಂಜೂರಾಗಿರುವ ವರ್ಗಗಳನ್ನು ಆಡಳಿತ ಮಂಡಳಿಯವರು ಕಡ್ಡಾಯವಾಗಿ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು ಎಂದಿದ್ದಾರೆ.

ಸರಕಾರ ನಿಗದಿಪಡಿಸಿರುವ ಶುಲ್ಕವನ್ನು ಹೊರತುಪಡಿಸಿ ಹೆಚ್ಚಿನ ಶುಲ್ಕವನ್ನು ಯಾವುದೇ ಕಾರಣಕ್ಕೂ ಯಾವುದೇ ಶಾಲೆಗಳವರು ಪಡೆಯುವಂತಿಲ್ಲ ಎನ್ನುವ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು. ಪ್ರಾಥಮಿಕ, ಪ್ರೌಢಶಾಲೆಗೆ ದಾಖಲಾತಿ ನೀಡುವಾಗ ಮೇರಿಟ್ ಮತ್ತು ರೋಸ್ಟರ್ ನಿಯಮಾನುಸಾರ ದಾಖಲಾತಿ ನೀಡುಬೇಕು ಎನ್ನುವ ವಿವಿಧ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು (vijayakumar danammanavar) ಸೂಚಿಸಿದ್ದಾರೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!