- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಆರ್ಡರ್ ಇದ್ರೂ ಯಾಕ್ ಮೈಕ್ ಬಂದ್ ಮಾಡ್ತಿಲ್ಲ. ಪ್ರಮೋದ್ ಮುತಾಲಿಕ್ ಎಚ್ಚರಿಕೆ

ಆರ್ಡರ್ ಇದ್ರೂ ಯಾಕ್ ಮೈಕ್ ಬಂದ್ ಮಾಡ್ತಿಲ್ಲ. ಪ್ರಮೋದ್ ಮುತಾಲಿಕ್ ಎಚ್ಚರಿಕೆ

ವಿಜಯಪುರ: ಕ್ರಿಶ್ಚಿಯನ್ ಮತಾಂತರ ಹಳ್ಳಿ ಹಳ್ಳಿಯಲ್ಲಿ ನಡೆಯುತ್ತಿದೆ ಎಂದು ಶ್ರೀ ರಾಮಸೇನೆಯ ಸಂಸ್ಥಾಪಕ ಪ್ರಮೋದ ಮುತಾಲಿಕ ಆರೋಪಿಸಿದರು.

ನಗರದಲ್ಲಿ ಮಾದ್ಯಮದವರನ್ನುದ್ದೇಶಿಸಿ ಮಾತನಾಡಿದ ಅವರು, ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಕೂಡ ಅಧಿವೇಶನದಲ್ಲಿ ಹೇಳಿದ್ದಾರೆ. ಇದುವರೆಗೂ ಬಡವರು, ಅನಕ್ಷರಸ್ಥರು, ಮುಂತಾದವರನ್ನು ಮತಾಂತರ ಮಾಡುತ್ತಿದ್ದರು. ಇದೀಗ ಎಲ್ಲ ಸಮುದಾಯ, ವರ್ಗಗಳನ್ನು ಮತಾಂತರ ಮಾಡುತ್ತಿದ್ದಾರೆ. ದಾವಣಗೆರೆ, ಚಿತ್ರದುರ್ಗದ ಭಾಗದಲ್ಲಿ ಒಂದು ಲಕ್ಷಕ್ಕೂ ಅಧಿಕ ಲಿಂಗಾಯತರನ್ನು ಮತಾಂತರ ಮಾಡಲಾಗಿದೆ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವಂತೆ ಶ್ರೀ ರಾಮಸೇನೆ ಸಂಘಟನೆಯಿಂದ ಆಗ್ರಹಿಸಿದರು.

https://gadinaadakranti.com/yatnal-sparks-zameers-statement/

ಶಾಮನೂರು ಶಿವಶಂಕರ ಅವರು ಮತಾಂತರ ಆದವರನ್ನು ವಾಪಸ್ ತರುವಂತೆ ಸಮಾಜಕ್ಕೆ ಪತ್ರ ಬರೆದಿದ್ದಾರೆ, ನಾನು ಅದನ್ನು ಸ್ವಾಗತಿಸುತ್ತೇನೆ. ಮತಾಂತರ ಮಾಡುವುದು ದೇಶದ್ರೋಹದ ಕೆಲಸ. ಲ್ಯಾಂಡ್ ಎನ್ನುವಂತಹದ್ದನ್ನು ಕನ್ವರ್ಟ್ ಮಾಡಿ, ಕ್ರಿಶ್ಚಿಯನ್ ಲ್ಯಾಂಡ್ ಎಂದು ಮಾಡ್ತಿದ್ದಾರೆ. ವಿಜಯಪುರ ಜಿಲ್ಲೆ ಸೇರಿದಂತೆ ಹಲವೆಡೆ ತಾಂಡಾಗಳನ್ನು ಪೂರ್ತಿಯಾಗಿ ಮತಾಂತರ ಮಾಡ್ತಿದ್ದಾರೆ. ಅವರನ್ನು ವಾಪಸ್ ತರುವ ಕೆಲಸ ಸೇವಾಲಾಲ್ ಸ್ವಾಮೀಜಿಗಳು ಮಾಡ್ತಿದ್ದಾರೆ ಎಂದರು.

ಇನ್ನೂ ಬೀದರ, ಕಲಬುರಗಿ ಭಾಗದಲ್ಲಿ ಶೇಕಡಾ 60% ರಷ್ಟು ಮಾದಿಗ ಸಮಾಜದವರನ್ನು ಮತಾಂತರ ಮಾಡಿದ್ದಾರೆ. ಮತಾಂತರ ಮಾಡುವವರಿಗೆ ಶ್ರೀ ರಾಮಸೇನೆ ಎಚ್ಚರಿಕೆ. ಇದೇ ಕೆಲಸ ಮುಂದುವರೆಸಿದ್ರೆ ಸಿಕ್ಕಸಿಕ್ಕಲ್ಲಿ ಒದೆಯಬೇಕಾಗುತ್ತದೆ. ಕಾನೂನು ರಚನೆಯಾದ ಬಳಿಕ ಅದನ್ನು ಜಾರಿಗೆ ತರುವಂತಹ ಕೆಲಸವೂ ಆಗಬೇಕಿದೆ. ಮಠಾಧೀಶರೂ ಸಹ ಮಠವನ್ನು ಬಿಟ್ಟು ಹೊರಗೆ ಬಂದು ಕೇರಿಗಳಿಗೆ ಭೇಟಿ ನೀಡಿ, ಮತಾಂತರ ಆದವರನ್ನು ವಾಪಸ್ ತರುವ ಕೆಲಸ ಮಾಡಬೇಕು.

https://gadinaadakranti.com/dalits-should-not-be-politicized-mb-patil/

ರಾತ್ರಿ ಹತ್ತು ಗಂಟೆಯಿಂದ ಬೆಳಗ್ಗೆ ಆರು ಗಂಟೆಯ ವರೆಗೆ ಯಾವುದೇ ಮೈಕ್ ಬಳಸುವಂತಿಲ್ಲ ಎಂದು ಸ್ರುಪ್ರೀಂ ಕೋರ್ಟ್ ಆರ್ಡರ್ ಮಾಡಿದೆ. ಆದ್ರೆ ಬೆಳಗ್ಗೆ ಐದು ಗಂಟೆಗೆ ನಮಾಜ್ ಶುರು ಆಗುತ್ತೆ, ಇದು ನ್ಯಾಯಾಲಯ ಆದೇಶ ಉಲ್ಲಂಘನೆ ಆಗಿದೆ. ಆದ್ರೆ ಪೊಲೀಸರು, ಕಾನೂನು ಬಾಯಿ ಮುಚ್ಚಿಕೊಂಡು ಕುಂತಿವೆ. ಸುಪ್ರೀಂ ಕೋರ್ಟ್ ಆರ್ಡರ್ ಇದೆ ಎಂದು ನಂಜನಗೂಡ ದೇವಸ್ಥಾನ ಒಡೆಯುತ್ತಾರೆ ಎಂದು ಆರೋಪಿಸಿದರು.

ಅದೇ ಸುಪ್ರೀಂ ಕೋರ್ಟ್ ಆರ್ಡರ್ ಇದ್ರೂ ಯಾಕೆ ಮಸೀದಿಯಲ್ಲಿನ ಮೈಕ್ ಬಂದ್ ಮಾಡ್ತಿಲ್ಲ. ಈ ರೀತಿ ಕಾನೂನು ಉಲ್ಲಂಘನೆ ಆಗಿದ್ದನ್ನು ತಡೆಯಬೇಕು ಎಂದು ಈಗಾಗಲೇ ರಾಜ್ಯದ ಎಲ್ಲ ತಹಶೀಲ್ದಾರ್ ಗಳಿಗೆ ಮನವಿ ಕೊಟ್ಟಿದ್ದೇವೆ. ಇನ್ಮುಂದೆ ಎಲ್ಲ ಡಿಸಿ ಕಚೇರಿಗಳ ಎದುರು ಹೋರಾಟ ನಡೆಸಲಾಗುವುದು. ಮುಂದಿನ ದಿನಗಳಲ್ಲಿ ಗಲಾಟೆಗಳಾಗಿ ಅನಾಹುತಗಳು ಆಗುವ ಮೊದಲು ಡಿಸಿಗಳು ಈ ವಿಚಾರವನ್ನು ಹದ್ದು ಬಸ್ತಿನಲ್ಲಿ ಇಡಬೇಕು ಎಂದು ಎಚ್ಚರಿಸಿದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!