- Advertisement -Newspaper WordPress Theme
ಅಂಕಣಗಳುಕರುನಾಡ ರತ್ನವಿದ್ಯಾರ್ಜನೆಯೊಂದಿಗೆ ಸಾಮಾಜಿಕ ಕಾಳಜಿ ಮೆರೆದ ಶಿಕ್ಷಕ ಪರಮೇಶ್ವರ ಗಧ್ಯಾಳ

ವಿದ್ಯಾರ್ಜನೆಯೊಂದಿಗೆ ಸಾಮಾಜಿಕ ಕಾಳಜಿ ಮೆರೆದ ಶಿಕ್ಷಕ ಪರಮೇಶ್ವರ ಗಧ್ಯಾಳ

ವಿಜಯಪುರ: ಸರ್ಕಾರಿ ಶಾಲೆಯನ್ನು (Government School) ಅಭಿವೃದ್ಧಿ ಮಾಡಲು ಶಿಕ್ಷಕರೊಬ್ಬರು ತಾವು ಕರ್ತವ್ಯ ನಿರ್ವಹಿಸುವ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಪಣ ತೊಟ್ಟು ಶಾಲೆ ಅಂದವಾಗಿಸಲು 1 ಲಕ್ಷ ಖರ್ಚು ಮಾಡಿ ಆಕರ್ಷಣಿಯವಾಗಿಸಿದ್ದಾರೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಮಹಾರಾಷ್ಟ್ರ ರಾಜ್ಯದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಘೋಣಸಗಿ ಎಲ್.ಟಿ.೦೧ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ (Government School) ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕ ಪರಮೇಶ್ವರ ಎಸ್ ಗದ್ಯಾಳ ಈ ವಿಶಿಷ್ಟವಾದ ಕೆಲಸ ಮಾಡಿ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದಾರೆ.

ಶಿಕ್ಷಣ ಎಂದರೆ ಏನು..? ಅದರ ಅಂತಿಮ ಗುರಿ ಹೇಗಿರಬೇಕು…?

ಭಾಷಾ ಸಮಸ್ಯೆಯಿಂದ ಕೂಡಿದ ಲಂಬಾಣಿ ತಾಂಡಾ ಜನವಸತಿ ಪ್ರದೇಶವಾಗಿರುವ ಘೋಣಸಗಿ ತಾಂಡಾದ ಶಾಲೆಯ ವಿದ್ಯಾರ್ಥಿಗಳನ್ನು ಇದೀಗ ಖುಷಿಯಾಗಿದ್ದಾರೆ. ಮಕ್ಕಳಿಗೆ ನೈಜ ಕಲಿಕೆಗೆ ಒತ್ತು ಕೊಡುವ ಉದ್ದೇಶದಿಂದ ಶಿಕ್ಷಕ ಪರಮೇಶ್ವರ ಗದ್ಯಾಳ್, ಉತ್ತಮ ಗುಣಮಟ್ಟದ ಪೇಂಟ್ ಬಳಕೆ ಮಾಡಿ ವರ್ಗ ಕೋಣೆಗಳನ್ನು ಗೋಡೆ ಬರಹ ಮತ್ತು ಚಿತ್ತಾರಗಳಿಂದ ಆಕರ್ಷಣಿಯ ಮಾಡಿದ್ದಾರೆ. ಕೋಣೆಯಲ್ಲಿ ಪ್ರತಿಯೊಂದು ಗೋಡೆಯ ಮೇಲೆ  ಒಂದೊಂದು ವಿಷಯದ ಕಲಿಕಾ ಬರವಣಿಗೆ ಮತ್ತು ಚಿತ್ರಗಳನ್ನು ಮೂಡಿಸಿದ್ದಾರೆ.

ಮೂಲಾಕ್ಷರಗಳು, ಗುಣಿತಾಕ್ಷರಗಳು, ಪ್ರಾಣಿಗಳು, ಪಕ್ಷಿಗಳು, ಹೂವಿನ ವಿಧಗಳು, ಪರಿಸರ ಕಲ್ಪನೆ, ಹಬ್ಬಗಳು, ಇಂಗ್ಲೀಷ ಅಕ್ಷರಗಳ ಪರಿಚಯ, ಕುಟುಂಬ ಕಲ್ಪನೆ, ಅಂಕಿಗಳ, ಮೂಲಕ್ರೀಯೆಗಳ ಕಲ್ಪನೆ, ತೂಕ, ಹಣ, ನೋಟು, ನೀರಿನ ಮೂಲಗಳು, ಶರೀರದ ಭಾಗಗಳು, ಸಸ್ಯಗಳ ಮಾಹಿತಿ, ಪೋಷಕಾಂಶಗಳು, ವ್ಯಾಕರಣ, ಸೌರವ್ಯೂಹ, ಚಂದ್ರಗ್ರಹಣ, ಸೂರ್ಯಗ್ರಹಣ, ಧಾನ್ಯಗಳ, ಸಸ್ಯಗಳ ಮಾಹಿತಿ ಹಾಗೂ ಹೊರಗಡೆ ತಾಲ್ಲೂಕ, ಜಿಲ್ಲೆ, ರಾಜ್ಯ, ರಾಷ್ಟ್ರ ನಕ್ಷೆ ಇತರೆ ಎಲ್ಲ ಮಾಹಿತಿಗಳನ್ನು ಮಗುವಿನ ಕಲಿಕೆಗೆ ನೈಜವಾಗಿ ಕಲ್ಪಿಸುವಂತೆ ಕಲಿಕಾ ವಾತಾವರಣ ನಿರ್ಮಾಣ ಮಾಡಿದ್ದಾರೆ.

ಶಿಕ್ಷಕರು ನಿರಾಭಾರಿಯಾಗಿರಬೇಕು. ಗವಿ ಸಿದ್ದೇಶ್ವರ ಸ್ವಾಮಿಜಿ ಮಾತುಗಳು…

ಕಂಪ್ಯೂಟರ್ ಕಲಿಕೆಗೆ ಒತ್ತು ನೀಡುವುದಕ್ಕಾಗಿ ವಿದ್ಯುತ್ ಪಿಟಿಂಗ್ ಅಳವಡಿಕೆ, ಶಾಲಾ ಮೇಲ್ಛಾವಣಿಯ ರಿಪೇರಿ, ಶೌಚಾಲಯ, ಅಡುಗೆ ಕೋಣೆಯ ರಿಪೇರಿ ಶಾಲೆಯ ಭೌತಿಕ ಸೌಲಭ್ಯಗಳ ಎಲ್ಲ ಸಣ್ಣ ಪುಟ್ಟ ಕೆಲಸಗಳ  ರಿಪೇರಿ ಮಾಡಿಸಿದ್ದಾರೆ.

ಕೊರೊನಾ ಕಾರಣದಿಂದ ಶಾಲೆಗಳು ಬಂದ್ ಆಗಿದ್ದರಿಂದ ಮಕ್ಕಳ ಕಲಿಕೆ ಹಿಂದುಳಿದಿದೆ. ಗಡಿ ಭಾಗ, ಹಿಂದುಳಿದ ಪ್ರದೇಶ, ಬಡತನ ಕುಟುಂಬದಲ್ಲಿರುವ ಮಕ್ಕಳ ಕಲಿಕೆಗೆ ಅನೂಕೂಲವಾಗಲಿ ಅಂತಾ ಲಾಕಡೌನ ಸಮಯದಲ್ಲಿ ಆರಂಭಿಸಿ ಈಗ ಶಾಲೆಯಲ್ಲಿ ಈ ರೀತಿಯಾದ ಕಲಿಕಾ ವಾತಾವರಣ ನಿರ್ಮಾಣ ಮಾಡಿದ್ದೇನೆ.

2019 ರಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡದ ಅಂದಿನ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಈ ಶಾಲೆಗೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಪರಿಶೀಲಿಸಿ ಪ್ರಶಂಸೆ ವ್ಯಕ್ತಪಡಿಸಿದ್ದರು. ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ಶಿಕ್ಷಕರು ಕಾಳಜಿ ತೋರಬೇಕು ಎಂದು ಸಲಹೆ ನೀಡಿದ್ದರು. ಅವರಿಂದ ಪ್ರಭಾವಿತರಾಗಿ ಶಾಲೆಗೆ ಏನಾದರೂ ಹೊಸದೊಂದು ಕಾರ್ಯ ಮಾಡಬೇಕು ಎಂಬ ಹಂಬಲದಿಂದ ಮಕ್ಕಳ ಕಲಿಕೆಗೆ ಅನೂಕೂಲವಾಗಿಸಲು ಈ ಕಾರ್ಯವನ್ನು ಶಿಕ್ಷಕ ಪರಮೇಶ್ವರ ಗದ್ಯಾಳ ಮಾಡಿದ್ದಾರೆ. (Government School)


LEAVE A REPLY

Please enter your comment!
Please enter your name here

Subscribe Today

GET EXCLUSIVE FULL ACCESS TO PREMIUM CONTENT

SUPPORT NONPROFIT JOURNALISM

EXPERT ANALYSIS OF AND EMERGING TRENDS IN CHILD WELFARE AND JUVENILE JUSTICE

TOPICAL VIDEO WEBINARS

Get unlimited access to our EXCLUSIVE Content and our archive of subscriber stories.

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!