- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಷ್ಟ್ರೀಯಸಂವಿಧಾನ ದಿನಾಚರಣೆಯಂದು ಪ್ರಧಾನಿ ಮೋದಿ ಭಾಗವಹಿಸಲಿರುವ ಕಾರ್ಯಕ್ರಮಗಳು ಹೀಗಿವೆ

ಸಂವಿಧಾನ ದಿನಾಚರಣೆಯಂದು ಪ್ರಧಾನಿ ಮೋದಿ ಭಾಗವಹಿಸಲಿರುವ ಕಾರ್ಯಕ್ರಮಗಳು ಹೀಗಿವೆ

ನವದೆಹಲಿ: ನಾಳೆ ನವೆಂಬರ್ 26 ರಂದು ಸಂವಿಧಾನ ದಿನಾಚರಣೆ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂಸತ್ತು ಮತ್ತು ವಿಜ್ಞಾನ ಭವನದಲ್ಲಿ ಆಯೋಜಿಸಲಾಗುವ ಕಾರ್ಯ‍ಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಆಯೋಜಿಸಲಾದ ಕಾರ್ಯ‍ಕ್ರಮವು ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿದೆ. ಮಾನ್ಯ ರಾಷ್ಟ್ರಪತಿಗಳು, ಉಪರಾಷ್ಟ್ರಪತಿಗಳು, ಪ್ರಧಾನ ಮಂತ್ರಿಗಳು ಮತ್ತು ಲೋಕಸಭಾ ಸ್ಪೀಕರ್ ಕಾರ್ಯ‍ಕ್ರಮದಲ್ಲಿ ಮಾತನಾಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣದ ನಂತರ, ಅವರು ಸಂವಿಧಾನದ ಪೀಠಿಕೆ ವಾಚನ ಮಾಡಲಿದ್ದು, ರಾಷ್ಟ್ರಾದ್ಯಂತ ಜನರು ಅವರೊಂದಿಗೆ ಲೈವ್ ಆಗಿ ಪಾಲ್ಗೊಳ್ಳಲಿದ್ದಾರೆ.

ರಾಷ್ಟ್ರಪತಿಗಳು ಸಂವಿಧಾನ ರಚನಾ ಸಭೆ ರೆಜಿಸ್ಟರಗಳ ಡಿಜಿಟಲ್ ಆವೃತ್ತಿ, ಭಾರತದ ಸಂವಿಧಾನದ ಕ್ಯಾಲಿಗ್ರಾಫ್ ಪ್ರತಿಯ ಡಿಜಿಟಲ್ ಆವೃತ್ತಿ ಮತ್ತು ಇಲ್ಲಿಯವರೆಗೆ ಎಲ್ಲಾ ತಿದ್ದುಪಡಿಗಳನ್ನು ಒಳಗೊಂಡಿರುವ ಭಾರತದ ಸಂವಿಧಾನದ ನವೀಕರಿಸಿದ ಆವೃತ್ತಿಯನ್ನು ಸಹ ಬಿಡುಗಡೆ ಮಾಡಲಿದ್ದಾರೆ. ಅವರು ‘ಸಾಂವಿಧಾನಿಕ ಪ್ರಜಾಪ್ರಭುತ್ವ ಕುರಿತ ಆನ್ಲೈನ್ ರಸಪ್ರಶ್ನೆ’ಯನ್ನು ಉದ್ಘಾಟಿಸಲಿದ್ದಾರೆ.

ನವದೆಹಲಿಯ ವಿಜ್ಞಾನ ಭವನದ ಪ್ಲೀನರಿ ಹಾಲ್ ನಲ್ಲಿ ಸಂಜೆ 5:30ಕ್ಕೆ ಸುಪ್ರೀಂ ಕೋರ್ಟ್ ಆಯೋಜಿಸಿರುವ ಎರಡು ದಿನಗಳ ಸಂವಿಧಾನ ದಿನಾಚರಣೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ.

ಸರ್ವೋಚ್ಚ ನ್ಯಾಯಾಲಯದ ಎಲ್ಲಾ ನ್ಯಾಯಮೂರ್ತಿಗಳು, ಎಲ್ಲಾ ಉಚ್ಚ ನ್ಯಾಯಾಲಯಗಳ ಮುಖ್ಯ ನ್ಯಾಯಮೂರ್ತಿಗಳು ಮತ್ತು ಹಿರಿಯ ನ್ಯಾಯಾಧೀಶರು, ಭಾರತದ ಸಾಲಿಸಿಟರ್ ಜನರಲ್ ಮತ್ತು ಕಾನೂನು ವೃಂದದ ಇತರ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!