- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯರೈತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ರೈತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಅತಿವೃಷ್ಟಿಯಿಂದ ಈ ಭಾಗದ ರೈತರು ಹೆಚ್ಚು ನಷ್ಟ ಅನುಭವಿಸಿದ್ದು ಕೇಂದ್ರ ಹಾಗೂ  ರಾಜ್ಯ ಸರ್ಕಾರಗಳು ಕೂಡಲೇ ರೈತರಿಗೆ ಪರಿಹಾರ ನೀಡುವ ಕಾರ್ಯ ಪ್ರಾರಂಭಿಸಬೇಕೆಂದು ಒತ್ತಾಯಿಸಿ ರಾಷ್ಟ್ರೀಯ ಬಸವ ಸೈನ್ಯದ ಪದಾಧಿಕಾರಿಗಳು ಗ್ರೇಡ್ 2 ತಹಶೀಲ್ದಾರ ಪಿ.ಜಿ.ಪವಾರ ಅವರ ಮುಖಾಂತರ ರಾಜ್ಯಪಾಲರಿಗೆ ಸೋಮವಾರ ಮನವಿ ಸಲ್ಲಿಸಿದರು.

https://gadinaadakranti.com/vijayapura-police-charged-with-theft-and-robbery/

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ  ರಾಷ್ಟ್ರೀಯ ಬಸವ ಸೈನ್ಯಯ ಕಾರ್ಯಕರ್ತರು  ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಮಾತನಾಡಿ ಈಗಾಗಲೇ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಪರಿಹಾರ ನೀಡಲಾಗಿದೆ ಆದರೆ ವಿಜಯಪುರ ಜಿಲ್ಲೆಯ ರೈತರ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿದೆ ಹೀಗಾಗಿ ರೈತರಿಗೆ ಸೂಕ್ತ ಪರಿಹಾರ ಸಿಗದೆ ಅನ್ಯಾಯವಾಗುತ್ತಿದೆ ಒಂದು ವಾರದಿಂದ ಸುರಿದ ಮಳೆಯಿಂದ ರೈತರು ಬೆಳೆದ ಪ್ರಮುಖ ಬೆಳೆಗಳಾದ ತೊಗರಿ ದ್ರಾಕ್ಷಿ ಕಡಲೆ ಅಜವಾನ ಮೆಣಸಿಕಾಯಿ ಮುಂತಾದ ಬೆಳೆಗಳು ಸಂಪೂರ್ಣ ನಾಶವಾಗಿವೆ ಕೃಷಿ ಮತ್ತು ಕಂದಾಯ ಅಧಿಕಾರಿಗಳು ರೈತರೊಂದಿಗೆ ಸರಿಯಾಗಿ ಸಂಪರ್ಕಿಸದೆ ಒಬ್ಬರಿಗೊಂದು ನ್ಯಾಯ ಇನ್ನೊಬ್ಬರಿಗೆ ಒಂದು ನ್ಯಾಯ ಮಾಡದೆ ಎಲ್ಲ ರೈತರಿಗೂ ಪರಿಹಾರ ನೀಡಬೇಕು ಸರ್ಕಾರ ಈಗಾಗಲೇ ಘೋಷಿಸಿದ ಹಾಗೆ ಡಿಸೆಂಬರ್ ಮೊದಲ ವಾರದೊಳಗೆ ರೈತರ ಖಾತೆಗೆ ಪರಿಹಾರ ಜಮಾ ಮಾಡಬೇಕು ಒಂದು ವೇಳೆ ರೈತರಿಗೆ ನ್ಯಾಯ ಸಿಗದಿದ್ದರೆ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

https://gadinaadakranti.com/cleanliness-from-the-ideal-teacher-forum/

ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಎನ್ ಡಿ ಆರ್ ಎಫ್. ಎಸ ಡಿ ಆರ್ ಎಫ್ ನಿಯಮಾನುಸಾರ ಪರಿಹಾರ ನೀಡಬೇಕು ಈಗಾಗಲೇ ರೈತರು ಕೃಷಿ ಚಟುವಟಿಕೆಗಾಗಿ ಸಾಕಷ್ಟು ಹಣ ವ್ಯಯಿಸಿದ್ದಾರೆ ಅಕಾಲಿಕ ಮಳೆಗೆ ಬೆಳೆ ಹಾನಿ ಪ್ರದೇಶವೆಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಹೆಕ್ಟರ್ ಗೆ 30 ಸಾವಿರ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಸಂಜು ಬಿರಾದಾರ ಅವರು ಓದಿ ಅರ್ಪಿಸಿದರು. ಪ್ರತಿಭಟನೆಯಲ್ಲಿ ರಾಷ್ಟ್ರೀಯ ಘಟಕದ ಉಪಾಧ್ಯಕ್ಷ ಸುನೀಲಗೌಡ ಚಿಕ್ಕೊಂಡ  ಮುಖಂಡರಾದ ಜಟ್ಟಿಂಗರಾಯ ಮಾಲಗಾರ, ನಿಂಗಪ್ಪ ಅವಟಿ, ಅರವಿಂದ ಗೊಳಸಂಗಿ, ಸಂಗಮೇಶ ಜಾಲಗೇರಿ,  ಗುರುರಾಜ ವಂದಾಲ, ರಾಜು ಬಸರಕೋಡ, ವೀರೇಶ್ ಗಬ್ಬೂರ, ಅರುಣ ಗೊಳಸಂಗಿ ,ವಸೀಂ ಮಕಾಂದಾರ, ಮಂಜುನಾಥ ಜಾಲಗೇರಿ,ಸಂಗಮೇಶ ವಾಡೇದ, ಆಸಿಫ್ ತಾಂಬೋಳಿ , ಕೃಷ್ಣಾ ಹಡಪದ ಸೇರಿದಂತೆ ಇತರರು ಇದ್ದರು.

ವರದಿ: ನಾಗೇಶ ನಾಗೂರ


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!