- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಕೃಷ್ಣಾ ಜಲ ಭಾಗ್ಯ ನಿಗಮ ಮುಖ್ಯ ಕಚೇರಿ ಸ್ಥಳಾಂತರ. ಬಹುದಿನದ ಬೇಡಿಕೆಗೆ ಸರ್ಕಾರ ಸ್ಪಂದನೆ

ಕೃಷ್ಣಾ ಜಲ ಭಾಗ್ಯ ನಿಗಮ ಮುಖ್ಯ ಕಚೇರಿ ಸ್ಥಳಾಂತರ. ಬಹುದಿನದ ಬೇಡಿಕೆಗೆ ಸರ್ಕಾರ ಸ್ಪಂದನೆ

ವಿಜಯಪುರ: ಕೃಷ್ಣಾ ನದಿ ಪಾತ್ರದ ಜನತೆಯ ಬಹುದಿನದ ಬೇಡಿಕೆಯಾಗಿದ್ದ ಕೃಷ್ಣಾ ಜಲ ಭಾಗ್ಯ ನಿಗಮ ಮುಖ್ಯ ಕಚೇರಿಯನ್ನು ಬೆಂಗಳೂರಿನಿಂದ ಆಲಮಟ್ಟಿ ಗೆ ಸ್ಥಳಾಂತರಿಸಿ ಜಲಸಂಪನ್ಮೂಲ ಇಲಾಖೆಯ ಅಧೀನ ಕಾರ್ಯದರ್ಶಿ ಮಂಜುನಾಥ ಎಚ್.ಎಂ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿರುವ ಎಲ್ಲ ಕೆಬಿಜೆಎನ್ ಎಲ್ ಕಚೇರಿಗಳು ಆದೇಶ ಹೊರಬಿದ್ದ ಒಂದು ವಾರದೊಳಗೆ ಆಲಮಟ್ಟಿಗೆ ಸ್ಥಳಾಂತರ ಗೊಳಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ವೇಗ ನೀಡಲು ಹಾಗೂ ಈ ಭಾಗದ ಜನರಿಗೆ ರಾಜ್ಯದ ಆಡಳಿತ ಹತ್ತಿರವಾಗಲು ಕೃಷ್ಣಾ ಜಲ ಭಾಗ್ಯ ನಿಗಮ ಮಂಡಳಿ ಕಚೇರಿಯನ್ನು ಬೆಂಗಳೂರಿನಿಂದ ಆಲಮಟ್ಟಿಗೆ ಸ್ಥಳಾಂತರ ಮಾಡಲು 2021 ಅಕ್ಟೋಬರ್ 30ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಈ ಕುರಿತು 2021ರ ನವೆಂಬರ್ 24ರಂದು ಸಲ್ಲಿಸಲಾಗಿದ್ದ ವರದಿ ಪರಿಶೀಲನೆ ನಡೆಸಿ ಜಲಸಂಪನ್ಮೂಲ ಇಲಾಖೆ ಸಾರ್ವಜನಿಕ ಹಿತಾದೃಷ್ಟಿಯಿಂದು ಹಾಗೂ ಹೈಕೋರ್ಟ್ ಆದೇಶ ಪಾಲನೆಗೆ ನಿನ್ನೆ ಮೇ 12ರಂದು ಕೆಬಿಜೆಎನ್ ಎಲ್ ಕಚೇರಿಯನ್ನು ಬೆಂಗಳೂರಿನಿಂದ ಆಲಮಟ್ಟಿಗೆ ಸ್ಥಳಾಂತರ ಮಾಡುವಂತೆ ಆದೇಶ ಹೊರಡಿಸಲಾಗಿದೆ.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!