- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯವಿದ್ಯಾರ್ಥಿಗಳಿಂದ ರಸ್ತೆ ತಡೆ. ವಾಗ್ವಾದ

ವಿದ್ಯಾರ್ಥಿಗಳಿಂದ ರಸ್ತೆ ತಡೆ. ವಾಗ್ವಾದ

ಬಸವನಬಾಗೇವಾಡಿ: ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದ ಸಮೀಪದ ಸರಕಾರಿ ಆದರ್ಶ ವಿದ್ಯಾಲಯಕ್ಕೆ, ನಿಗಧಿತ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ,ವಿದ್ಯಾರ್ಥಿಗಳು ಬಸ್ ನಿಲ್ದಾಣದ ಮುಂಭಾಗದಲ್ಲಿ ಶನಿವಾರ ಬಿಜ್ಜಳ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಬಸ್ ಘಟಕದ ವ್ಯವಸ್ಥಾಪಕ ಪಿ.ಕೆ ಜಾಧವ ಆಗಮಿಸಿ, ಪ್ರತಿಭಟನೆ ಹಿಂಪಡೆಯುವಂತೆ ಒತ್ತಾಯಿಸಿದರು. ವಿದ್ಯಾಲಯದ ಎಸ್‌ಡಿಎಂಸಿ ಅಧ್ಯಕ್ಷ ಪರಶುರಾಮ ಅಡಗಿಮನಿ ಅವರೊಂದಿಗೆ ಕೆಲ ಹೊತ್ತು ವಾಗ್ವಾದ ನಡೆಯಿತು.

https://gadinaadakranti.com/surrender-to-a-private-bank-employee/

ವಿದ್ಯಾಲಯಕ್ಕೆ ಬಸವನಬಾಗೇವಾಡಿ ಸೇರಿದಂತೆ ತಾಲೂಕಿನಾದ್ಯಂತ ಸುಮಾರು 500 ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿ ನಿತ್ಯ ಆಗಮಿಸುತ್ತಾರೆ. ಕೆಲ ಬಸ್‌ನ ಚಾಲಕ-ನಿರ್ವಾಹಕರು ಪಾಸ್ ನಡೆಯುವದಿಲ್ಲ ಎಂದು ಹೇಳಿ ಮಕ್ಕಳನ್ನು ಬಸ್‌ನಲ್ಲಿ ಹತ್ತಿಸಿಕೊಳ್ಳುವುದಿಲ್ಲ, ಇದರಿಂದ ಮಕ್ಕಳು ಸರಿಯಾದ ಸಮಯಕ್ಕೆ ಶಾಲೆಗೆ ತಲುಪಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ಸರಿಯಾದ ಸಮಯಕ್ಕೆ ಮನೆ ತಲುಪಲು ಸಾಧ್ಯವಾಗುತ್ತಿಲ್ಲಇದರಿಂದ ಮಕ್ಕಳ ಕಲಿಕೆಗೂ ತೊಂದರೆಯಾಗುತ್ತಿದೆ ಎಂದರು.

ಈಗಾಗಲೇ ಈ ವಿಷಯ ಕುರಿತು ಡಿಪೋ ಮ್ಯಾನೇಜರ್ ಹಾಗೂ ಸಾರಿಗೆ ಸಂಸ್ಥೆಯ ಜಿಲ್ಲಾ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಅಲ್ಲದೆ ಸಾರಿಗೆ ಸಂಸ್ಥೆಯ ಜಿಲ್ಲಾ ಅಧಿಕಾರಿಗಳು ಆದರ್ಶ ವಿದ್ಯಾಲಯಕ್ಕೆ ಬಸ್ಸ ನಿಲ್ಲಿಸುವಂತೆ ಆದೇಶಿಸಿದ್ದಾರೆ. ಆದೇಶವಿದ್ದರು ಕೆಲ ಬಸ್ ಚಾಲಕರು ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಪರಶುರಾಮ ಅಡಗಿಮನಿ ಡಿಪೋ ವ್ಯವಸ್ಥಾಪಕರನ್ನು ತರಾಟೆಗೆ ತೆಗೆದುಕೊಂಡರು.

https://gadinaadakranti.com/shramabindu-sarathi-the-sidhu-namagowda/

ಕೆಲ ಹೊತ್ತಿನ ನಂತರ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾ ನಿರತರನ್ನು ಮನವೊಲಿಸಿ ವಾತಾವರಣ ತಿಳಿಗೊಳಿಸಿದರು.

ವರದಿ: ನಾಗೇಶ ನಾಗೂರ


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!