- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಬಸವನಾಡಿನ ರೈತರಿಂದ ಸುವರ್ಣಸೌಧ ಮುಂದೆ ಧರಣಿ..!

ಬಸವನಾಡಿನ ರೈತರಿಂದ ಸುವರ್ಣಸೌಧ ಮುಂದೆ ಧರಣಿ..!

ಬಸವನಬಾಗೇವಾಡಿ: ಅಧಿವೇಶನ ಪ್ರಾರಂಭವಾದ 4ನೇ ದಿನಕ್ಕೆ ಡಿ.16 ರಂದು ಸುವರ್ಣಸೌಧದ ಮುಂದೆ ಧರಣಿ ನಡೆಸಲಾಗುವುದು ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ತಿಳಿಸಿದ್ದಾರೆ.

https://gadinaadakranti.com/egg-fire-in-the-monastery-student-statement-viral/

ಪಟ್ಟಣದ ಬಸವೇಶ್ವರ ದೇವಸ್ಥಾನದ ಉದ್ಯಾನವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ರೈತರು ತಮ್ಮ ಜಮೀನುಗಳಿಗೆ ಹೋಗಲು ವಹಿವಾಟು ದಾರಿ ಸಮಸ್ಯೆ ನಿವಾರಣೆಗಾಗಿ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲ ಶಾಸಕರು ಸೋಮವಾರದಂದು ನಡೆಯುವ ಅಧಿವೇಶನದಲ್ಲಿ ಧ್ವನಿ ಎತ್ತಬೇಕು, ಇದು ಬಸವನಾಡಿನ ಸಮಸ್ಯೆ ಅಷ್ಟೇ ಅಲ್ಲ, ರಾಜ್ಯದ ಎಲ್ಲ ರೈತರ ಜಮೀನಿಗೆ ಹೋಗುವ ಸಮಸ್ಯೆಯಾಗಿದೆ. ಸರ್ಕಾರ ಏಕೆ ಮೀನಾಮೇಷ ತಾಳುತ್ತಿದೆ ಗೊತ್ತಾಗುತ್ತಿಲ್ಲ ಎಂದು ಪ್ರಶ್ನೀಸಿದ ಅವರು, ಅಧಿವೇಶನದ ನಂತರ ಶಾಸಕರ ಮನೆ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಬಸವನಬಾಗೇವಾಡಿಯಲ್ಲಿ ಉಪ ವಿಭಾಗಾಧಿಕಾರಿಗಳ (ಎಸಿ) ಕಚೇರಿ ಸ್ಥಾಪಿಸುವಂತೆ ಆಗ್ರಹಿಸಿ ಕಳೆದ ಹನ್ನೆರಡು ವರ್ಷದಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ. ಇಲ್ಲಿಯವರೆಗೂ ಸರ್ಕಾರ ಮುಂದಾಗುತ್ತಿಲ್ಲ. ಎಸಿ ಕಚೇರಿ ಸ್ಥಾಪನೆಗೆ ಪಟ್ಟಣ ಎಲ್ಲ ರೀತಿಯಲ್ಲಿ ಅರ್ಹತೆ ಹೊಂದಿದೆ. ಅಧಿವೇಶನದಲ್ಲಿ ಕ್ಷೇತ್ರದ ಶಾಸಕರು ಚರ್ಚಿಸಿ ಎಸಿ ಕಚೇರಿ ಮಂಜೂರು ಮಾಡಿಸಬೇಕು ಎಂದು ಇದೇ ವೇಳೆ ಆಗ್ರಹಿಸಿದರು.

https://gadinaadakranti.com/shramabindu-sarathi-the-sidhu-namagowda/

 ಈ ಸಂದರ್ಭದಲ್ಲಿ ಹಿರಿಯ ಮುಖಂಡ ಸಂಗನಗೌಡ ಚಿಕ್ಕೊಂಡ ಮಾತನಾಡಿದರು, ರೈತ ಸಂಘದ ತಾಲೂಕು ಘಟಕದ ಕಾರ್ಯಾಧ್ಯಕ್ಷ ಸೋಮನಗೌಡ ಪಾಟೀಲ, ಗೌರವಾಧ್ಯಕ್ಷ ಈರಣ್ಣ ದೇವರಗುಡಿ ಹಾಜರಿದ್ದರು.

ವರದಿ: ನಾಗೇಶ ನಾಗೂರ


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!