- Advertisement -Newspaper WordPress Theme
ಪ್ರಮುಖ ಸುದ್ದಿಗಳುಸ್ಥಳೀಯಕುರ್ಚಿಗಾಗಿ ಕಿತ್ತಾಟ ಸರಿಯಲ್ಲ. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ

ಕುರ್ಚಿಗಾಗಿ ಕಿತ್ತಾಟ ಸರಿಯಲ್ಲ. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ

ಬಸವನಬಾಗೇವಾಡಿ: ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆ (MLA Election 2023) ಸಮೀಪಿಸುತ್ತಿರುವ ರಾಜ್ಯದ ನಾಯಕರುಗಳಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ ಸರಿಯಾದ ಬೆಳವಣಿಗೆಯಲ್ಲ (Karnataka Politics) ಮುಖ್ಯಮಂತ್ರಿ ಯಾರಾಗಬೇಕೆನ್ನುವುದು ಆಯ್ಕೆಯಾದ ಶಾಸಕರು ನಿರ್ಧರಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ (veerappa moily visits basavana bagewadi) ಹೇಳಿದರು.

ಪಟ್ಟಣದ ಬಸವ ಸ್ಮಾರಕಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಪಕ್ಷ ಅಧಿಕಾರಕ್ಕೆ ಬರುವದು ನಿಶ್ಚಿತವಾಗಿದ್ದು ಕುರ್ಚಿಗಾಗಿನ ಕತ್ತಾಟ ಈಗಿನಿಂದಲೇ ಪ್ರಾರಂಭವಾಗಿರುವುದು ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬಿರುವುದ್ದರಿಂದ ಪ್ರತಿಷ್ಠೆ ಬದಿಗಿಟ್ಟು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುವ ಅವಶ್ಯಕತೆ ಇದೆ ಎಂದು ಸಲಹೆ ನೀಡಿದರು.

ಬಸವಜನ್ಮ ಸ್ಥಳ ಹಾಗೂ ಐಕ್ಯಸ್ಥಳಕ್ಕೆ ಭೇಟಿ ನೀಡಿದ ಸಮಯದಲ್ಲಿ ಈ ಸ್ಥಳಗಳು ಅಭಿವೃದ್ಧಿಯಾಗದಿರುವುದು ಸಾಕಷ್ಟು ನೋವು ತಂದಿತ್ತು. ಹಿಂದೆ ನಾನು ರಾಜ್ಯ ಸರಕಾರದಲ್ಲಿ ಹಣಕಾಸು ಸಚಿವನಾದಾಗ ಎರಡು ಸ್ಥಳಗಳ ಅಭಿವೃದ್ಧಿಗಾಗಿ ಅನುದಾನ ನೀಡಿದ್ದಲ್ಲದೆ, ಬಸವಣ್ಣನವರು ಜನಿಸಿದ ಮನೆಯನ್ನು ಸ್ವಾಧೀನ ಪಡಿಸಿಕೊಂಡು ಅಭಿವೃದ್ಧಿಗೆ ಆದೇಶ ನೀಡಿದ್ದೇನೆ. ಮುಂದಿನ ದಿನಮಾನಗಳಲ್ಲಿ ಬಸವನಬಾಗೇವಾಡಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರವಾಗಿ ಅಭಿವೃದ್ಧಿ ಹೊಂದಬೇಕು, ಬಸವಣ್ಣನವರ ವಿಚಾರಧಾರೆಗಳನ್ನು ಜಾಗತಿಕ ಮಟ್ಟದಲ್ಲಿ ಪ್ರಚುರಪಡಿಸಲು ಬಸವಜನ್ಮ ಸ್ಥಳದಲ್ಲಿ ಜಾಗತಿಕ ಮಟ್ಟದ ವಿಶ್ವವಿದ್ಯಾಲಯ ಸ್ಥಾಪನೆ ಆಗಬೇಕಾಗಿದ್ದು ಸರಕಾರ ಈ ನಿಟ್ಟಿನಲ್ಲಿ ಮುತುರ್ಜಿವಹಿಸಬೇಕಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿ ನಂತರ ಮೂಲನಂದೀಶ್ವರ (ಬಸವೇಶ್ವರ) ದೇವಸ್ಥಾನಕ್ಕೆ ಭೇಟಿ ನೀಡಿ (veerappa moily visits basavana bagewadi) ದರ್ಶನ ಪಡೆದುಕೊಂಡು ಬಸವಭವನ, ಮೇಗಾ ಮಾರುಕಟ್ಟೆ ಕಾಮಗಾರಿಗಳನ್ನು ವಿಕ್ಷೀಸಿ ಶಾಸಕ ಶಿವಾನಂದ ಪಾಟೀಲ ಅವರ ಅಭಿವೃದ್ಧಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಸಕ ಶಿವಾನಂದ ಪಾಟೀಲ, ಪುರಸಭೆ ಅಧ್ಯಕ್ಷೆ ರೇಖಾ ಬೆಕಿನಾಳ, ಸದಸ್ಯ ರವಿ ನಾಯ್ಕೋಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಪ್ರದಾನ ಕಾರ್ಯದರ್ಶಿ ರವಿ ರಾಠೋಡ, ಮುಖಂಡರಾದ ಬಸವರಾಜ ಕೋಟಿ, ಎಸ್.ಆರ್.ಗೊಳಸಂಗಿ, ಸಂಗಮೇಶ ಓಲೇಕಾರ, ಬಸವರಾಜ ಗೊಳಸಂಗಿ, ಬಸವರಾಜ ರಾಯಗೊಂಡ, ಸಂಗನಬಸು ಪೂಜಾರಿ, ಭರತಲಾಲ ಅಗರವಾಲ, ಕೂಡಸಂಗಮ ಅಭಿವೃದ್ಧಿ ಪ್ರಾಧಿಕಾರದ ಬಿ.ಎಸ್.ಕಳ್ಳಿ ಸೇರಿದಂತೆ ಇತರರು ಇದ್ದರು.

ವರದಿ: ನಾಗೇಶ ನಾಗೂರ


LEAVE A REPLY

Please enter your comment!
Please enter your name here

Subscribe Today

GET EXCLUSIVE FULL ACCESS TO PREMIUM CONTENT

SUPPORT NONPROFIT JOURNALISM

EXPERT ANALYSIS OF AND EMERGING TRENDS IN CHILD WELFARE AND JUVENILE JUSTICE

TOPICAL VIDEO WEBINARS

Get unlimited access to our EXCLUSIVE Content and our archive of subscriber stories.

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!