- Advertisement -Newspaper WordPress Theme
ಪ್ರಮುಖ ಸುದ್ದಿಗಳುರಾಷ್ಟ್ರೀಯಕೃಷಿ ಕಾಯ್ದೆ ಹಿಂಪಡೆತ. ಪ್ರಧಾನಿ ಮೋದಿ ಮಾತುಗಳು

ಕೃಷಿ ಕಾಯ್ದೆ ಹಿಂಪಡೆತ. ಪ್ರಧಾನಿ ಮೋದಿ ಮಾತುಗಳು

ನವದೆಹಲಿ: ರೈತರ ಆಸಕ್ತಿಯ ವಿಷಯವನ್ನು ನಮ್ಮ ಎಲ್ಲಾ ಪ್ರಯತ್ನಗಳ ಹೊರತಾಗಿಯೂ ನಾವು ಕೆಲವು ರೈತರಿಗೆ ಅರ್ಥಮಾಡಿಸಲು ಸಾಧ್ಯವಾಗಲಿಲ್ಲ. ಕೃಷಿ ಅರ್ಥಶಾಸ್ತ್ರಜ್ಞರು, ವಿಜ್ಞಾನಿಗಳು, ಪ್ರಗತಿಪರ ರೈತರು ಕೂಡ ಕೃಷಿ ಕಾನೂನುಗಳ ಮಹತ್ವವನ್ನು ಅವರಿಗೆ ಅರ್ಥಮಾಡಿಸಲು ಗರಿಷ್ಠ ಪ್ರಯತ್ನಗಳನ್ನು ಮಾಡಿದರು  ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ದೇಶದ ಜನತೆಯನ್ನುದ್ದೇಶಿಸಿ  ಇಂದು ಮದ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ಈ ಹಿಂದೆಯೂ ಅನೇಕ ಸರಕಾರಗಳು  ಕೃಷಿ ಕಾಯ್ದೆಗಳ ಬಗ್ಗೆ ಚಿಂತನ – ಮಂಥನ ಮಾಡಿದ್ದವು. ಈ ಬಾರಿಯೂ ಸಂಸತ್ತಿನಲ್ಲಿ ಚರ್ಚೆ ನಡೆಯಿತು, ಚಿಂತನ-ಮಂಥನ ನಡೆಯಿತು ಮತ್ತು ಆ ಬಳಿಕವಷ್ಟೇ ಈ ಕಾನೂನುಗಳನ್ನು ತರಲಾಯಿತು. ದೇಶದ ಮೂಲೆ ಮೂಲೆಗಳಲ್ಲಿ ಅನೇಕ ರೈತ ಸಂಘಟನೆಗಳು ಅದನ್ನು ಸ್ವಾಗತಿಸಿ ಬೆಂಬಲಿಸಿದವು ಈ ಕ್ರಮವನ್ನು ಬೆಂಬಲಿಸಿದ ಸಂಘಟನೆಗಳು, ರೈತರು ಮತ್ತು ವ್ಯಕ್ತಿಗಳಿಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದರು.

ಕೃಷಿ ವಲಯದ ಹಿತದೃಷ್ಟಿಯಿಂದ ರೈತರ ಕಲ್ಯಾಣಕ್ಕಾಗಿ, ವಿಶೇಷವಾಗಿ ಸಣ್ಣ ರೈತರ ಕಲ್ಯಾಣಕ್ಕಾಗಿ, ಗ್ರಾಮೀಣ-ಬಡವರ ಉಜ್ವಲ ಭವಿಷ್ಯಕ್ಕಾಗಿ, ಸಂಪೂರ್ಣ ಪ್ರಾಮಾಣಿಕತೆ, ಸ್ಪಷ್ಟ ಆತ್ಮಸಾಕ್ಷಿ ಮತ್ತು ರೈತರ ಬಗ್ಗೆ ಸಮರ್ಪಣೆ ಭಾವದೊಂದಿಗೆ ಸರಕಾರ ಈ ಕಾನೂನುಗಳನ್ನು ತಂದಿದೆ. ನಾವು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದ್ದೇವೆ ಎಂದು ಇಡೀ ದೇಶದ ಜನತೆಗೆ ಹೇಳಲು ನಾನು ಬಂದಿದ್ದೇನೆ. ಈ ತಿಂಗಳ ಕೊನೆಯಲ್ಲಿ ಪ್ರಾರಂಭವಾಗುವ ಸಂಸತ್ ಅಧಿವೇಶನದಲ್ಲಿ, ನಾವು ಈ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಸಾಂವಿಧಾನಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ ಎಂದು ಪ್ರಧಾನಿ ಹೇಳಿದರು.


LEAVE A REPLY

Please enter your comment!
Please enter your name here

More Content

- Advertisement -Newspaper WordPress Theme

ಜಿಲ್ಲಾ ಜರ್ನಿ

ಹೋರಾಟ ವೀರರು

- Advertisement -Newspaper WordPress Theme
error: Content is protected !!